ಬೆಂಗಳೂರು: ಕೊರೋನಾ ಕರಾಳತೆ ಮಧ್ಯೆಯೇ ಬ್ಲ್ಯಾಕ್ ಫಂಗಸ್ ತನ್ನ ಬೇಟೆಯನ್ನು ಶುರು ಮಾಡಿದೆ. ರಾಜ್ಯರಾಜಧಾನಿಯಲ್ಲಿ ಹಲವಾರು ಬ್ಲ್ಯಾಕ್ ಫಂಗಸ್ಗಳು ದಾಖಲಾದ ಬೆನ್ನಲ್ಲೇ ಇಬ್ಬರು ಈ ಭಯಾನಕ ಕಾಯಿಲೆಗೆ ಬಲಿಯಾಗಿದ್ದಾರೆ. 64 ವರ್ಷದ ವೃದ್ಧ ಹಾಗೂ 57 ವರ್ಷದ ಮಹಿಳೆ ಬ್ಲ್ಯಾಕ್ ಫಂಗಸ್ನಿಂದ ಮೃತಪಟ್ಟಿರುವುದು ರಾಜ್ಯದ ಜನತೆಯನ್ನು ಆತಂಕಕ್ಕೆ ದೂಡಿದೆ. ಚಿಕ್ಕಪೇಟೆ ಹಾಗೂ ಕೊಟಾಲಂ ನಿವಾಸಿಗಳಾದ ಇಬ್ಬರು ಮೃತರು ಡಯಾಗ್ನಿಸಿಸ್ಗೆ ಒಳಗಾಗಿದ್ದರು. ಇಬ್ಬರು ಕೊರೋನಾ ಸೋಂಕಿಗೆ ತುತ್ತಾಗಿದ್ದರು. ನಂತರ ಕಪ್ಪು ಶಿಲೀಂದ್ರಿ ಕಾಯಿಲೆ ಕಾಣಿಸಿಕೊಂಡು ಸಾವನ್ನಪ್ಪಿದ್ದಾರೆ.
ನಗರದಲ್ಲಿ ಬ್ಲ್ಯಾಕ್ ಫಂಗಸ್ ಹಾವಳಿ ಹೆಚ್ಚಾಗುತ್ತಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ 14 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಇಬ್ಬರು ಮೃತಪಟ್ಟಿದ್ದು, 5 ಮಂದಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 7 ಮಂದಿಗೆ ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕಳೆದ ವಾರ ಟ್ರಸ್ಟ್ ವೆಲ್ ಆಸ್ಪತ್ರೆಯಲ್ಲಿ 38 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ದಿನಕ್ಕೊಂದು ಆಸ್ಪತ್ರೆಯಲ್ಲಿ ಈ ಕಾಯಿಲೆ ವರದಿಯಾಗುತ್ತಿದೆ. ಕೋವಿಡ್ ನಿಂದ ಗುಣಮುಖರಾದ ರೋಗಿಗಳಲ್ಲಿ ಈ ಮಾರಕ ಕಾಯಿಲೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.
ಇಷ್ಟು ದಿನ ದೇಶದಲ್ಲಿ ಕಡಿಮೆ ಸಂಖ್ಯೆಯಲ್ಲಿದ್ದ ಬ್ಲಾಕ್ ಫಂಗಸ್ ಸೋಂಕು ಕೋವಿಡ್ ಎರಡನೇ ಅಲೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಈ ಬ್ಲ್ಯಾಕ್ ಫಂಗಸ್ ಗೆ ನೀಡುವ ಲಿಪೋಸೋಮಲ್ ಆಂಪೋಟೆರಿಸಿನ್ ಬಿ ಔಷಧದ ಕೊರತೆಯೂ ಹೆಚ್ಚಾಗಿದೆ. ಇದನ್ನು ಖುದ್ದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಒಪ್ಪಿಕೊಂಡಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ 20 ಸಾವಿರ ವಯಲ್ಗಳಷ್ಟು ಬ್ಲ್ಯಾಕ್ ಫಂಗಸ್ ಔಷಧ ಬೇಕು ಎಂದು ಕೇಂದ್ರ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರಾದ ಸದಾನಂದಗೌಡರ ಜೊತೆ ಸಂಪರ್ಕದಲ್ಲಿ ಇದ್ದೇನೆ. ಕೇಂದ್ರ ಆರೋಗ್ಯ ಸಚಿವರ ಜೊತೆಯೂ ಈ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರೂ ಆತಂಕ ಪಡೋ ಅಗತ್ಯ ಇಲ್ಲ ಎಂದು ಆರೋಗ್ಯ ಸಚಿವ ತಿಳಿಸಿದ್ದಾರೆ.
ರಾಜ್ಯದಲ್ಲಿ ಇದುವರಗೆ ಎಷ್ಟು ಜನ ಬ್ಲಾಕ್ ಫಂಗಸ್ ಸೋಂಕಿಗೆ ತುತ್ತಾಗಿದ್ದಾರೆ, ಅವರಲ್ಲಿ ಎಷ್ಟು ಜನ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ಆರೋಗ್ಯ ಸಚಿವರ ಬಳಿಯೇ ಅಂಕಿ ಅಂಶಗಳು ಇಲ್ಲವಂತೆ. ಎಷ್ಟು ಬ್ಲ್ಯಾಕ್ ಫಂಗಸ್ ಕೇಸ್ ದಾಖಲಾಗಿದೆ ಅನ್ನೋ ಮಾಹಿತಿ ಇಲ್ಲ, ಎಷ್ಟು ಸಾವಾಗಿದೆ ಅಂತ ನಿಖರವಾದ ಮಾಹಿತಿ ಇಲ್ಲ. ಖಾಸಗಿಯಾಗಿ ಅನೇಕರು ದಾಖಲಾಗಿದ್ದಾರೆ, ಹೀಗಾಗಿ ಮಾಹಿತಿ ಲಭ್ಯವಿಲ್ಲ. ಇದಕ್ಕಾಗಿ ನಾವು ತಜ್ಞರ ಸಮಿತಿ ರಚನೆ ಮಾಡ್ತಿದ್ದೇವೆ. ಅಂಕಿ ಅಂಶಗಳು, ಚಿಕಿತ್ಸೆ ವಿಧಾನದ ಬಗ್ಗೆ ಸಮಿತಿ ನಮಗೆ ಮಾರ್ಗದರ್ಶನ ನೀಡುತ್ತೆ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.
ಬ್ಲ್ಯಾಕ್ ಫಂಗಸ್ ಗುಣಲಕ್ಷಣಗಳೇನು?
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ