ಕರ್ನಾಟಕದಲ್ಲಿಂದು ದಾಖಲೆಯ 515 ಕೊರೋನಾ ಕೇಸ್​!; ಉಡುಪಿಯೊಂದರಲ್ಲೇ 204 ಸೋಂಕಿತರು ಪತ್ತೆ

Karnataka Coronavirus: ಕರ್ನಾಟಕದಲ್ಲಿ ಇಂದು 515 ಕೊರೋನಾ ಕೇಸ್​ಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4,835ಕ್ಕೆ ಏರಿಕೆಯಾಗಿದೆ. ಉಡುಪಿಯೊಂದರಲ್ಲೇ ಇಂದು 204 ಕೊರೋನಾ ಕೇಸ್​ಗಳು ಪತ್ತೆಯಾಗಿವೆ.

ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

  • Share this:
ಬೆಂಗಳೂರು (ಜೂ. 5): ಎರಡೂವರೆ ತಿಂಗಳು ಲಾಕ್​ಡೌನ್​ ಮಾಡಿದ್ದರೂ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಕೊರೋನಾ ಕೇಸ್​ಗಳು ಆತಂಕ ಸೃಷ್ಟಿಸಿವೆ. ಮಹಾರಾಷ್ಟ್ರ, ದೆಹಲಿ, ಗುಜರಾತ್ ಮುಂತಾದ ರಾಜ್ಯಗಳಿಂದ ಕರ್ನಾಟಕಕ್ಕೆ ಬರಲು ಅನುಮತಿ ನೀಡಿದ ಮೇಲೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದುಪ್ಪಟ್ಟಾಗಿದೆ. ಇಂದು ಒಂದೇ ದಿನ ಕರ್ನಾಟಕದಲ್ಲಿ 515 ಕೊರೋನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇಂದು ಕೂಡ ಸೋಂಕಿತರ ಪಟ್ಟಿಯಲ್ಲಿ ಮಹಾರಾಷ್ಟ್ರದಿಂದ ಬಂದವರ ಸಂಖ್ಯೆಯೇ ಹೆಚ್ಚಾಗಿದೆ.

ಕರ್ನಾಟಕದಲ್ಲಿ ಇಂದು 515 ಕೊರೋನಾ ಕೇಸ್​ಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 4,835ಕ್ಕೆ ಏರಿಕೆಯಾಗಿದೆ. ಇಂದು 83 ಕೊರೋನಾ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 13 ರೋಗಿಗಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ 515 ಸೋಂಕಿತರ ಪೈಕಿ 482 ಸೋಂಕಿತರು ಬೇರೆ ರಾಜ್ಯಗಳಿಂದ ಬಂದವರಾಗಿದ್ದಾರೆ. ಉಡುಪಿಯೊಂದರಲ್ಲೇ ಇಂದು 204 ಕೊರೋನಾ ಕೇಸ್​ಗಳು ಪತ್ತೆಯಾಗಿವೆ.

ಇದನ್ನೂ ಓದಿ: Dawood Ibrahim: ಭೂಗತ ಪಾತಕಿ ದಾವೂದ್ ಇಬ್ರಾಹಿಂಗೂ ಕೊರೋನಾ ಸೋಂಕು; ಪಾಕಿಸ್ತಾನದ ಕರಾಚಿಯಲ್ಲಿ ಚಿಕಿತ್ಸೆ

ಇಂದು ಉಡುಪಿಯಲ್ಲಿ 204, ಯಾದಗಿರಿ- 74, ಕಲಬುರ್ಗಿ- 42, ಬೀದರ್- 39, ಬೆಳಗಾವಿ- 36, ಬೆಂಗಳೂರು-10. ಮಂಡ್ಯ- 13, ವಿಜಯಪುರ- 53, ಹಾಸನ- 3, ದಾವಣಗೆರೆ- 1, ಚಿಕ್ಕಬಳ್ಳಾಪುರ- 3, ದಕ್ಷಿಣ ಕನ್ನಡ- 8, ಉತ್ತರ ಕನ್ನಡ- 7, ಬಾಗಲಕೋಟೆ- 1, ಧಾರವಾಡ-3, ಬಳ್ಳಾರಿ- 1, ಬೆಂಗಳೂರು ಗ್ರಾಮಾಂತರ- 12, ಕೋಲಾರ- 1, ಹಾವೇರಿ- 2, ರಾಮನಗರ- 2 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ ಬಹುತೇಕರು ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.
First published: