ಬೆಂಗಳೂರು: ದೇಶಾದ್ಯಂತ ಕೊರೋನಾ 2ನೇ ಅಲೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಸೋಂಕಿಗೆ ಕಡಿವಾಣ ಹಾಕಲು ಕಠಿಣ ನಿಯಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಯಲ್ಲಿ ಈ ತಿಂಗಳು ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು UGC ಮುಂದೂಡಿದೆ. ಆಫ್ಲೈನ್ನಲ್ಲಿ ನಡೆಯಬೇಕಿದ್ದ ಎಲ್ಲಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಿ ಆದೇಶ ಹೊರಡಿಸಿದೆ. ಕೊರೋನಾ ಸಮಯದಲ್ಲಿ ಎಲ್ಲರ ಸುರಕ್ಷತೆ ಹಾಗೂ ಆರೋಗ್ಯವೇ ಮುಖ್ಯವಾಗಿದ್ದು, ದೇಶಾದ್ಯಂತ ಆಫ್ಲೈನ್ ಪರೀಕ್ಷೆಗಳನ್ನು ಮೇ ತಿಂಗಳಲ್ಲಿ ನಡೆಸದಂತೆ ಆದೇಶಿಸಲಾಗಿದೆ.
ಆಫ್ಲೈನ್ ಪರೀಕ್ಷೆಗಳು ನಡೆಯುವುದರಿಂದ ವಿದ್ಯಾರ್ಥಿಗಳು ಗುಂಪು ಸೇರುತ್ತಾರೆ. ಇದರಿಂದ ಕೊರೋನಾ ಮತ್ತಷ್ಟು ಉಲ್ಬಣವಾಗುತ್ತೆ. ಹೀಗಾಗಿ ಉನ್ನತ ಶಿಕ್ಷಣ ಇಲಾಖೆಯ ಎಲ್ಲಾ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಆನ್ ಲೈನ್ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದ್ದು, ಪರಿಸ್ಥಿಗೆ ನೋಡಿಕೊಂಡು ಮುಂದಿನ ತಿಂಗಳಲ್ಲಿ ತೀರ್ಮಾನಿಸುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಕೋವಿಡ್ ಮಾರ್ಗಸೂಚಿ ಗಮನಿಸಿ ಜೂನ್ ನಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ದೇಶದ ಬಹುತೇಕ ರಾಜ್ಯಗಳಲ್ಲಿ ಕೊರೋನಾ ಕರ್ಫ್ಯೂ ಜಾರಿಯಲ್ಲಿದ್ದು ಪ್ರಮುಖ ಶಾಲಾ ಹಾಗೂ ಕಾಲೇಜು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇನ್ನು ಗುರುವಾರ ದೇಶದಲ್ಲಿ 4,14,188 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 3,31,507 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ ಎರಡು ಕೋಟಿ ದಾಟಿದ್ದು 2,14,91,598ಕ್ಕೆ ಏರಿಕೆ ಆಗಿದೆ. ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು ದೇಶದಲ್ಲಿ ಇದೀಗ ದಿನ ಒಂದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ ಸಾವನ್ನಪ್ಪುತ್ತಿದ್ದಾರೆ. ಗುರುವಾರ 3,915 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,34,083ಕ್ಕೆ ಏರಿಕೆ ಆಗಿದೆ.
ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ. ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನರು ಹಾಗೂ ಏಪ್ರಿಲ್ 17ರಿಂದ ದಿನ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ದೇಶದ ಕೊರೊನಾ ಪೀಡಿತರ ಸಂಖ್ಯೆ ಎರಡು ಕೋಟಿಯನ್ನೂ ದಾಟಿದೆ. ಅಲ್ಲದೆ ಇದೇ ಮೊದಲ ಬಾರಿಗೆ ನಾಲ್ಕು ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಗೋಚರಿಸಲು ಆರಂಭಿಸಿವೆ.
ಇದೇ ಮೊದಲ ಬಾರಿಗೆ ಏಪ್ರಿಲ್ 4ರಂದು 1,03,558 ಪ್ರಕರಣಗಳು ಪತ್ತೆಯಾಗಿದ್ದವು. ನಂತರ ಏಪ್ರಿಲ್ 5ರಂದು 96,982, ಏಪ್ರಿಲ್ 6ರಂದು 1,15,736, ಏಪ್ರಿಲ್ 7ರಂದು 1,26,789, ಏಪ್ರಿಲ್ 8ರಂದು 1,31,968, ಏಪ್ರಿಲ್ 9ರಂದು 1,45,384, ಏಪ್ರಿಲ್ 10ರಂದು 1,52,879, ಏಪ್ರಿಲ್ 11ರಂದು 1,68,912, ಏಪ್ರಿಲ್ 12ರಂದು 1,61,736, ಏಪ್ರಿಲ್ 13ರಂದು 1,84,372, ಏಪ್ರಿಲ್ 14ರಂದು 2,00,739, ಏಪ್ರಿಲ್ 15ರಂದು 2,17,353, ಏಪ್ರಿಲ್ 16ರಂದು 2,34,692, ಏಪ್ರಿಲ್ 17ರಂದು 2,61,500 ಏಪ್ರಿಲ್ 18ರಂದು 2,73,810, ಏಪ್ರಿಲ್ 19ರಂದು 2,59,170, ಏಪ್ರಿಲ್ 20ರಂದು 2,95,041, ಏಪ್ರಿಲ್ 21ರಂದು 3,14,835, ಏಪ್ರಿಲ್ 22ರಂದು 3,32,730, ಏಪ್ರಿಲ್ 23ರಂದು 3,46,786, ಏಪ್ರಿಲ್ 24ರಂದು 3,49,691, ಏಪ್ರಿಲ್ 25ರಂದು 3,52,991, ಏಪ್ರಿಲ್ 26ರಂದು 3,23,144, ಏಪ್ರಿಲ್ 27ರಂದು 3,60,960, ಏಪ್ರಿಲ್ 28ರಂದು 3,23,144, ಏಪ್ರಿಲ್ 29ರಂದು 3,86,452, ಏಪ್ರಿಲ್ 30ರಂದು 4,01,993, ಮೇ 1ರಂದು 3,92,488, ಮೇ 2ರಂದು 3,68,147, ಮೇ 3ರಂದು 3,57,229, ಮೇ 4ರಂದು 3,82,315 ಹಾಗೂ ಮೇ 5ರಂದು 4,12,262 ಪ್ರಕರಣಗಳು ಕಂಡುಬಂದಿದ್ದವು. ಮೇ 6ರಂದು 4,14,188 ಪ್ರಕರಣಗಳು ಪತ್ತೆಯಾಗಿವೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ