• ಹೋಂ
  • »
  • ನ್ಯೂಸ್
  • »
  • Corona
  • »
  • Chhota Rajan: ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಭೂಗತ ಲೋಕದ ದೊರೆ ಛೋಟಾ ರಾಜನ್ ಕೋವಿಡ್​ನಿಂದ ಸಾವು!

Chhota Rajan: ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಭೂಗತ ಲೋಕದ ದೊರೆ ಛೋಟಾ ರಾಜನ್ ಕೋವಿಡ್​ನಿಂದ ಸಾವು!

ಛೋಟಾ ರಾಜನ್ (ಸಂಗ್ರಹ ಚಿತ್ರ)

ಛೋಟಾ ರಾಜನ್ (ಸಂಗ್ರಹ ಚಿತ್ರ)

ಭೂಗತ ಲೋಕದ ಪಾತಕಿ ಛೋಟಾ ರಾಜನ್​ನನ್ನು  2015 ರಲ್ಲಿ ಇಂಡೋನೇಷ್ಯಾದಿಂದ ಹಸ್ತಾಂತರಿಸಿದ ನಂತರ ಹೆಚ್ಚಿನ ಭದ್ರತೆಯೊಂದಿಗೆ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಬಳಿಕ ಜೈಲಿನಲ್ಲಿ ಅನಾರೋಗ್ಯಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದ ಕಾರಣ ಏಪ್ರಿಲ್ 26ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಛೋಟಾ ರಾಜನ್ ಕೊನೆಯುಸಿರೆಳೆದಿದ್ದಾನೆ.

ಮುಂದೆ ಓದಿ ...
  • Share this:

ನವದೆಹಲಿ: ಭೂಗತ ಲೋಕದ ದೊರೆ ರಾಜೇಂದ್ರ ನಿಕಾಲ್ಜೆ ಅಲಿಯಾಸ್ ಛೋಟಾ ರಾಜನ್ ಕೋವಿಡ್ -19ನಿಂದ ದೆಹಲಿಯ ಆಲ್​ ಇಂಡಿಯಾ ಇನ್ಸ್​ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಆಸ್ಪತ್ರೆಯಲ್ಲಿ ಇಂದು (ಮೇ 7) ಮೃತಪಟ್ಟಿರುವುದಾಗಿ ವರದಿಗಳು ತಿಳಿಸಿವೆ. 62 ವರ್ಷದ ಛೋಟಾ ರಾಜನ್ ಅವರು ಏಪ್ರಿಲ್ 26ರಂದು ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್-19 ಪರೀಕ್ಷೆ ನಡೆಸಿದಾಗ ಪಾಸಿಟಿವ್ ವರದಿ ಬಂದಿತ್ತು.  

ಛೋಟಾ ರಾಜನ್​ಗೆ ಕೊರೋನಾ ಪಾಸಿಟಿವ್ ಬಂದಿರುವುದರಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರುಪಡಿಸಲು ಸಾಧ್ಯವಿಲ್ಲ ಎಂದು ತಿಹಾರ್ ಜೈಲಿನ ಸಹಾಯಕ ಜೈಲರ್​ ಸೆಷನ್ಸ್​ ಕೋರ್ಟ್​ನಲ್ಲಿ ತಿಳಿಸಿದ್ದರು. ಆ ಬಳಿಕ ಏಪ್ರಿಲ್ 26ರಂದು ರಾಜನ್​ನನ್ನು  ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನು ಓದಿ: Oxygen Crisis: ದೆಹಲಿಗೆ ಪ್ರತಿದಿನ 700 ಮೆ.ಟನ್ ಆಕ್ಸಿಜನ್ ಸರಬರಾಜು ಮಾಡಿ; ಕೇಂದ್ರಕ್ಕೆ ಸುಪ್ರೀಂ ತಾಕೀತು!

ಮುಂಬೈನಲ್ಲಿ ಸುಲಿಗೆ ಮತ್ತು ಕೊಲೆಗೆ ಸಂಬಂಧಿಸಿದ ಸುಮಾರು 70 ಕ್ರಿಮಿನಲ್ ಪ್ರಕರಣಗಳನ್ನು ರಾಜನ್ ಎದುರಿಸುತ್ತಿದ್ದಾನೆ. ಅವುಗಳನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲಾಯಿತು. ಅವರನ್ನು ವಿಚಾರಣೆಗೆ ಒಳಪಡಿಸಲು ವಿಶೇಷ ನ್ಯಾಯಾಲಯವನ್ನು ರಚಿಸಲಾಯಿತು.

ಭೂಗತ ಲೋಕದ ಪಾತಕಿ ಛೋಟಾ ರಾಜನ್​ನನ್ನು  2015 ರಲ್ಲಿ ಇಂಡೋನೇಷ್ಯಾದಿಂದ ಹಸ್ತಾಂತರಿಸಿದ ನಂತರ ಹೆಚ್ಚಿನ ಭದ್ರತೆಯೊಂದಿಗೆ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಬಳಿಕ ಜೈಲಿನಲ್ಲಿ ಅನಾರೋಗ್ಯಕ್ಕೆ ತುತ್ತಾದ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷೆ ಮಾಡಲಾಗಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ವರದಿ ಬಂದ ಕಾರಣ ಏಪ್ರಿಲ್ 26ರಂದು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಛೋಟಾ ರಾಜನ್ ಕೊನೆಯುಸಿರೆಳೆದಿದ್ದಾನೆ.

First published: