HOME » NEWS » Coronavirus-latest-news » UNION GOVERNMENT WANTS TO COLLECT INFORMATION ABOUT WHO TESTED POSITIVE AFTER TAKEN VACCINE DBDEL LG

ಲಸಿಕೆ ಪಡೆದ ಬಳಿಕವೂ ಕೊರೋನಾ ಪಾಸಿಟಿವ್ ಆದವರೆಷ್ಟು? ಎಂಬ ಮಾಹಿತಿ ಕಲೆಹಾಕಲು ಮುಂದಾದ ಕೇಂದ್ರ

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಗಳನ್ನು ಹಾಕುವ ಕೆಲಸವನ್ನು ಕೂಡ ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 8,70,77,474 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ.

news18-kannada
Updated:April 7, 2021, 12:13 PM IST
ಲಸಿಕೆ ಪಡೆದ ಬಳಿಕವೂ ಕೊರೋನಾ ಪಾಸಿಟಿವ್ ಆದವರೆಷ್ಟು? ಎಂಬ ಮಾಹಿತಿ ಕಲೆಹಾಕಲು ಮುಂದಾದ ಕೇಂದ್ರ
ಸಾಂದರ್ಭಿಕ ಚಿತ್ರ
  • Share this:
ನವದೆಹಲಿ(ಏ.‌ 7): ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದೆ. ಈಗ ಪ್ರತಿ ದಿನ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕಂಡು ಬರಲು ಆರಂಭಿಸಿವೆ. ಇದೂ ಅಲ್ಲದೆ ಲಸಿಕೆ ಪಡೆದವರು ಕೂಡ ಕೊರೋನಾ ಪಾಸಿಟಿವ್ ಆಗುತ್ತಿದ್ದಾರೆ. ಇದು ಇನ್ನೊಂದು ಬಗೆಯ ಭಯ ಸೃಷ್ಟಿ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಲಸಿಕೆ ಪಡೆದ ಬಳಿಕವೂ ಕೊರೋನಾ ಪಾಸಿಟಿವ್ ಆದವರು ಎಷ್ಟು? ಎಂಬ ಮಾಹಿತಿ ಕಲೆಹಾಕಲು ಮುಂದಾಗಿದೆ.

ಲಸಿಕೆ ಪಡೆದವರು ಕೂಡ ಕೊರೋನಾ ಪಾಸಿಟಿವ್ ಆಗುತ್ತಿರುವುದರಿಂದ ಆತಂಕಕ್ಕೆ ಈಡಾಗಿರುವ ಕೇಂದ್ರ ಆರೋಗ್ಯ ಇಲಾಖೆಯು ಈ ಬಗ್ಗೆ ಮಾಹಿತಿ ಕಲೆ ಹಾಕಲು ನಿರ್ಧರಿಸಿದೆ. ಅದಕ್ಕಾಗಿ ಹೊಸ ಫಾರ್ಮ್ ಒಂದನ್ನು ಬಿಡುಗಡೆ ಮಾಡಲು ನಿಶ್ಚಯಿಸಿದೆ.‌ ಸದ್ಯ ಕೊರೋನಾ ಟೆಸ್ಟ್ ಮಾಡುವ ವೇಳೆ ಮಾಹಿತಿ ಸಂಗ್ರಹಿಸುವ ಫಾರ್ಮ್ ನಲ್ಲಿ ಇನ್ನು ಮುಂದೆ ಹೊಸ ಹೊಸ ಕಾಲಂಗಳನ್ನು ಅಳವಡಿಸಲು ನಿರ್ಧರಿಸಿದೆ.

ಚೆನಾಬ್ ನದಿಗೆ ಪ್ರಪಂಚದ ಅತಿ ಎತ್ತರದ ಸೇತುವೆ ಕಮಾನು ನಿರ್ಮಾಣ: ಇತಿಹಾಸ ಸೃಷ್ಟಿ

ಇನ್ನು ಮುಂದೆ ಕೇಂದ್ರ ಆರೋಗ್ಯ ಇಲಾಖೆ ಕೊರೋನಾ ಟೆಸ್ಟ್ ಮಾಡುವ ವೇಳೆ ನೀವು ಈಗಾಗಲೇ ಲಸಿಕೆ ಪಡೆದಿದ್ದೀರಾ? ಲಸಿಕೆ ಪಡೆದ ಮೇಲೆ ಕೊರೊನಾ ಪಾಸಿಟಿವ್ ಬಂದಿದೆಯೇ ? ಯಾವ ಕೊರೋನ ಲಸಿಕೆ ಪಡೆದಿದ್ದೀರಿ? (ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್) ಲಸಿಕೆ ಪಡೆದ ದಿನಾಂಕ ಮತ್ತು ನೀವು ಪಾಸಿಟೀವ್ ಆದ ನಡುವೆ ಎಷ್ಟು ದಿನಗಳ ಅಂತರವಿತ್ತು? ಎಂಬ ಸಮರ್ಪಕ ಮಾಹಿತಿ ಸಂಗ್ರಹಿಸಲಾಗುತ್ತದೆ.

ಮಂಗಳವಾರ 1,15,736 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 59,856 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ 1,28,01,785ಕ್ಕೆ ಏರಿಕೆ ಆಗಿದೆ.‌ ಮಂಗಳವಾರ ಒಂದೇ ದಿನ ಕೊರೋನಾಗೆ 630 ಜನರು ಬಲಿ ಆಗಿದ್ದಾರೆ. ಈವರೆಗೆ ಕೊರೋನಾ ರೋಗದಿಂದ ಸತ್ತವರ ಸಂಖ್ಯೆ 1,66,177ಕ್ಕೆ ಏರಿಕೆ ಆಗಿದೆ.

ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಸಿಕೆಗಳನ್ನು ಹಾಕುವ ಕೆಲಸವನ್ನು ಕೂಡ ಹಂತ ಹಂತವಾಗಿ ತೀವ್ರಗೊಳಿಸಲಾಗುತ್ತದೆ. ಈವರೆಗೆ ದೇಶಾದ್ಯಂತ ಒಟ್ಟು 8,70,77,474 ಜನರಿಗೆ ಲಸಿಕೆ ಹಾಕಲಾಗಿದೆ. ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ಕೊರೋನಾ ಲಸಿಕೆ ಹಾಕಲಾಗುತ್ತಿದೆ.

ದೇಶದಲ್ಲಿ ದಾಖಲಾಗುತ್ತಿರುವ ಒಟ್ಟು ಕೊರೋನಾ ಪ್ರಕರಣಗಳ ಪೈಕಿ ಶೇಕಡಾ 90ರಷ್ಟು ಮಹಾರಾಷ್ಟ್ರ, ಕರ್ನಾಟಕ, ಪಂಜಾಬ್, ಕೇರಳ, ಛತ್ತೀಸ್ಗಢ, ಉತ್ತರ ಪ್ರದೇಶ, ಗುಜರಾತ್, ತಮಿಳುನಾಡು, ದೆಹಲಿ, ಮಧ್ಯಪ್ರದೇಶ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಕಂಡು ಬರುತ್ತಿವೆ. ಈ‌ ಹಿನ್ನೆಲೆಯಲ್ಲಿ ಈ 11 ರಾಜ್ಯಗಳ ಆರೋಗ್ಯ ಸಚಿವ ಜೊತೆ ಮಂಗಳವಾರ (ಏಪ್ರಿಲ್ 6) ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಸಭೆ ನಡೆಸಿದ್ದಾರೆ.‌
Youtube Video

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ಸಭೆಯಲ್ಲಿ ಕೊರೊನಾ ನಿಯಂತ್ರಿಸಲು ಕೈಗೊಳ್ಳಬೇಕಾದ ಕಠಿಣ ಕ್ರಮಗಳ ಬಗ್ಗೆ ಚರ್ಚೆ ಆಗಿದೆ. ಅದೇ ದಿನ ದೇಶದಲ್ಲಿ ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಪತ್ತೆ ಆಗಿವೆ.
Published by: Latha CG
First published: April 7, 2021, 12:13 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories