Unlock 2.0: ಡಿಗ್ರಿ ಮತ್ತು ಪಿಜಿ ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲು ಕೇಂದ್ರದ ಅನುಮತಿ

ಕೇಂದ್ರ ಸರ್ಕಾರದ ಮಾರ್ಗಸೂಚಿ ನೀಡಿರುವ ನಿಯಮಗಳ ಪ್ರಕಾರ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಸಂಬಂಧ ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿಗೆ ಪತ್ರ ಬರೆದಿರುವ ಗೃಹ ಸಚಿವಾಲಯ ವಿವಿ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ ಬಗ್ಗೆ ಪ್ರಸ್ತಾಪಿಸಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ನವದೆಹಲಿ(ಜು.07): ಮಾರಕ ಕೊರೋನಾ ವೈರಸ್​​ ತೀವ್ರಗೊಳ್ಳುತ್ತಿದ್ದಂತೆಯೇ ದೇಶಾದ್ಯಂತ ಮಾರ್ಚ್​​ 25ನೇ ತಾರೀಕಿನಿಂದಲೇ ಎಲ್ಲಾ ಶಾಲಾ-ಕಾಲೇಜುಗಳು ಬಂದ್​​ ಮಾಡಲಾಗಿತ್ತು. ಇದಾದ ನಂತರ ಹಲವು ದಿನಗಳ ಲಾಕ್​ಡೌನ್​​ ಬಳಿಕ ಜೂನ್​​​ 1ರಿಂದ ಒಂದು ತಿಂಗಳು ಅನ್​​ಲಾಕ್ 1.0 ಜಾರಿಗೊಳಿಸಲಾಗಿತ್ತು. ಈ ಬೆನ್ನಲ್ಲೀಗ ಇದೇ ತಿಂಗಳು ಜುಲೈ 1ರಿಂದ ಭಾರತದಲ್ಲಿ ಅನ್​​ಲಾಕ್​​​ 2.0 ಘೋಷಿಸಲಾಗಿದೆ. ಇದರ ಭಾಗವಾಗಿ ರೆಡ್​ ಜೋನ್​​ ಹೊರತುಪಡಿಸಿ ಕೊರೋನಾ ಕಡಿಮೆ ಇರುವ ಪ್ರದೇಶಗಳಲ್ಲಿ ಹಲವು ಚಟುವಟಿಕೆಗಳು ಶುರು ಮಾಡಲು ಅನುಮತಿ ನೀಡಿದೆ.


  ಇನ್ನು, ಅನ್​​ಲಾಕ್​​​ 2.0 ಜುಲೈ ತಿಂಗಳಾಂತ್ಯದವರೆಗೂ ಜಾರಿಯಲ್ಲಿರಲಿದೆ. ಹಲವು ರೀತಿಯ ಕಾರ್ಯಚಟುವಟಿಕೆಗಳಿಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ ಶಾಲಾ-ಕಾಲೇಜುಗಳು ತೆರೆಯುವುದಕ್ಕೆ ನಿರ್ಬಂಧ ಹೇರಿದೆ. ಹೀಗಿರುವಾಗ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಹಲವು ದಿನಗಳಿಂದ ಮುಂದೂಡುತ್ತಲ್ಲೇ ಬರುತ್ತಿದ್ದ ಪರೀಕ್ಷೆಗಳನ್ನು ನಡೆಸುವಂತೆ ವಿವಿ ಹಾಗೂ ಶೈಕ್ಷಣಿಕ ಸಂಸ್ಥೆಗಳಿಗೆ ಕೇಂದ್ರ ಗೃಹ ಸಚಿವಾಲಯ ಸೋಮವಾರ ಅವಕಾಶ ಮಾಡಿಕೊಟ್ಟಿದೆ

  .

  ಕೇಂದ್ರ ಸರ್ಕಾರದ ಮಾರ್ಗಸೂಚಿ ನೀಡಿರುವ ನಿಯಮಗಳ ಪ್ರಕಾರ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈ ಸಂಬಂಧ ಕೇಂದ್ರ ಉನ್ನತ ಶಿಕ್ಷಣ ಕಾರ್ಯದರ್ಶಿಗೆ ಪತ್ರ ಬರೆದಿರುವ ಗೃಹ ಸಚಿವಾಲಯ ವಿವಿ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದ ಬಗ್ಗೆ ಪ್ರಸ್ತಾಪಿಸಿದೆ.

  ಇದನ್ನೂ ಓದಿ: Covid 19 Health Bulletin; ಕರ್ನಾಟಕದಲ್ಲಿ ಒಂದೇ ದಿನ 1843 ಜನರಿಗೆ ಕೊರೋನಾ ಸೋಂಕು, 30 ಸಾವು; ಬೆಂಗಳೂರಿನಲ್ಲಿ ಭಯದ ವಾತಾವರಣ

  ಪದವಿ ಮತ್ತು ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಪರೀಕ್ಷೆಗಳನ್ನು ನಡೆಸಲೇಬೇಕು. ಶೈಕ್ಷಣಿಕ ಕ್ಯಾಲೆಂಡರ್ ಕುರಿತು ಯುಜಿಸಿ ಮಾರ್ಗಸೂಚಿಗಳು ಮತ್ತು ಕೇಂದ್ರದ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್(ಎಸ್‌ಒಪಿ) ನಿಯಮಗಳ ಅಡಿಯಲ್ಲಿ ಸೆಪ್ಟೆಂಬರ್​ ಅಂತ್ಯದೊಳಗೆ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ನಡೆಯಬೇಕು ಎಂದು ಆದೇಶಿಸಿಲಾಗಿದೆ.
  Published by:Ganesh Nachikethu
  First published: