ಕೊರೋನಾ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ದೇಶದ ಅರ್ಥ ವ್ಯವಸ್ಥೆ ಸರ್ವನಾಶ; ರಾಹುಲ್ ಗಾಂಧಿ ಎಚ್ಚರಿಕೆ

ಕೊರೋನಾ ಪ್ರಸ್ತುತ ದೇಶದ ಎದುರು ನಿಂತಿರುವ ಅತಿದೊಡ್ಡ ಸಮಸ್ಯೆ. ಈ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳದಿದ್ದರೆ, ಭಾರತದ ಅರ್ಥ ವ್ಯವಸ್ಥೆ ಸರ್ವನಾಶವಾಗಲಿದೆ ಎಂದು ರಾಹುಲ್ ಗಾಂಧಿ ಎಚ್ಚರಿಕೆ ನೀಡಿದೆ.

ರಾಹುಲ್ ಗಾಂಧಿ.

ರಾಹುಲ್ ಗಾಂಧಿ.

 • Share this:
  ನವ ದೆಹಲಿ (ಮಾರ್ಚ್ 13); ಇಡೀ ವಿಶ್ವವನ್ನೇ ತಲ್ಲಣಕ್ಕೆ ದೂಡಿರುವ ಮಾರಣಾಂತಿಕ ಕೊರೋನಾ ವೈರಸ್ ಬಾರತಕ್ಕೂ ಕಾಲಿಟ್ಟಿದೆ. ಅಷ್ಟೇ ಅಲ್ಲ, ಸಾಕಷ್ಟು ಭೀತಿಯನ್ನೂ ಸೃಷ್ಟಿಸಿದೆ. ಆದರೆ, ಇದರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಜರುಗಿಸದಿದ್ದಲ್ಲಿ ಈ ದೇಶದ ಜನ ಮತ್ತು ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ಸರ್ವನಾಶವಾಗಲಿದೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಎಚ್ಚರಿಕೆ ನೀಡಿದ್ದಾರೆ.

  ಮಾರಣಾಂತಿಕ ಕೊರೋನಾ ವೈರಸ್ ವಿಶ್ವದಾದ್ಯಂತ 3.900 ಜನರ ಸಾವಿಗೆ ಕಾರಣವಾಗಿದೆ. ಭಾರತದಲ್ಲೂ 75 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದ್ದು ಓರ್ವ ವೃದ್ಧ ಬಲಿಯಾಗಿದ್ದಾರೆ. ಅಲ್ಲದೆ, ಕೊರೋನಾ ಎಫೆಕ್ಟ್​ನಿಂದಾಗಿ ಭಾರತ ಷೇರುಪೇಟೆ ಕಳೆದ ಮೂರು ವರ್ಷಗಳಲ್ಲೇ ಅತ್ಯಂತ ದೊಡ್ಡ ಮಟ್ಟದ ಕುಸಿತ ಅನುಭವಿಸಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿದೆ. ಅಂದಾಜಿನ ಪ್ರಕಾರ ಕಳೆದ ಎರಡು ದಿನದಲ್ಲಿ ಭಾರತ ಷೇರು ಮಾರುಕಟ್ಟೆ ಸುಮಾರು 15 ಲಕ್ಷ ಕೋಟಿ ಹಣವನ್ನು ಕಳೆದುಕೊಂಡಿದೆ.  ಈ ಕುರಿತು ಟ್ವಿಟ್ ಮಾಡುವ ಮೂಲಕ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ರಾಹುಲ್ ಗಾಂಧಿ, “ಕೊರೋನಾ ಪ್ರಸ್ತುತ ದೇಶದ ಎದುರು ನಿಂತಿರುವ ಅತಿದೊಡ್ಡ ಸಮಸ್ಯೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳದಿದ್ದರೆ, ಭಾರತದ ಅರ್ಥ ವ್ಯವಸ್ಥೆ ಸರ್ವನಾಶವಾಗಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ದೇಶದಲ್ಲಿ ಇಷ್ಟೊಂದು ಅನಾಹುತ ಸಂಭವಿಸಿದರೂ ಏನೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರಕ್ಕೆ ಮಂಕು ಕವಿದಿದೆ ಎಂದು ಕಿಡಿಕಾರಿದ್ದಾರೆ.

  ಇದನ್ನೂ ಓದಿ : ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಹೆಂಡತಿಗೂ ಕೊರೋನಾ ಸೋಂಕು; ವಿಶ್ವಾದ್ಯಂತ 4,900 ಬಲಿ
  First published: