• ಹೋಂ
  • »
  • ನ್ಯೂಸ್
  • »
  • Corona
  • »
  • Unlock Karnataka: ಮತ್ತಷ್ಟು ನಿಯಮ ಸಡಿಲ, ರಾತ್ರಿ 10ರಿಂದ ನೈಟ್ ಕರ್ಫ್ಯೂ, ಸಿನಿಮಾ ಥಿಯೇಟರ್, ಕಾಲೇಜುಗಳು ಓಪನ್

Unlock Karnataka: ಮತ್ತಷ್ಟು ನಿಯಮ ಸಡಿಲ, ರಾತ್ರಿ 10ರಿಂದ ನೈಟ್ ಕರ್ಫ್ಯೂ, ಸಿನಿಮಾ ಥಿಯೇಟರ್, ಕಾಲೇಜುಗಳು ಓಪನ್

ಸಿಎಂ ಯಡಿಯೂರಪ್ಪ.

ಸಿಎಂ ಯಡಿಯೂರಪ್ಪ.

Karnataka Unlock: ಇನ್ಮೇಲೆ ನೈಟ್ ಕರ್ಫ್ಯೂ ರಾತ್ರಿ 10ರಿಂದ ಬೆಳಗ್ಗೆ 5ರವರಗೆ ಮಾತ್ರ ಇರಲಿದೆ. ಅದೇ ರೀತಿ ಸಿನಿಮಾ ಥಿಯೇಟರ್​ಗಳು ಶೇಕಡಾ 50ರಷ್ಟಯ ಆಸನಗಳೊಂದಿಗೆ ತೆರೆಯಬಹುದಾಗಿದ್ದು ಉನ್ನತ ಶಿಕ್ಷಣದ ಕಾಲೇಜುಗಳು ತೆರೆಯಲಿವೆ. ಆದರೆ ಇವೆಲ್ಲದಕ್ಕೂ ಒಂದಷ್ಟು ನಿಯಮಗಳಿವೆ, ಅವುಗಳ ಪಾಲನೆ ಕಡ್ಡಾಯ. ಉಳಿದಂತೆ ಇನ್ಯಾವ ನಿಯಮಗಳ ಸಡಿಲಿಕೆಯಾಗಿದೆ..ಪೂರ್ತಿ ವಿವರ ಇಲ್ಲಿದೆ..

ಮುಂದೆ ಓದಿ ...
  • Share this:

Karnataka Unlock: ಕೋವಿಡ್ ನಿಯಮಗಳನ್ನು ಹಂತಹಂತವಾಗಿ ಸಡಿಲಿಸಿ ಜನಜೀವನವನ್ನು ಸರಾಗ ಮಾಡಿಕೊಡುವ ಪ್ರಕ್ರಿಯೆ ರಾಜ್ಯದಲ್ಲಿ ಮುಂದುವರೆದಿದೆ. ಸದ್ಯ ಸೋಂಕಿನ ಪ್ರಮಾಣ ಸ್ವಲ್ಪಮಟ್ಟಿಗೆ ಹತೋಟಿಯಲ್ಲಿ ಇರುವುದರಿಂದ ಅನ್​ಲಾಕ್ ಪ್ರಕ್ರಿಯೆ ನಡೆಯುತ್ತಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ ಎಸ್ ಯಡ್ಯೂರಪ್ಪ ಇಂದು ಸಚಿವರುಗಳ ಜೊತೆ ಸ್ವಗ್ರಹದಲ್ಲೇ ಸಭೆ ನಡೆಸಿದ್ರು. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ನಡೆದ ಸಭೆಯಲ್ಲಿ ಸದ್ಯ ರಾಜ್ಯದ ಪರಿಸ್ಥಿತಿ ಹೇಗಿದೆ, ಕೆಲವು ನಿಯಮಗಳನ್ನು ಸಡಿಲ ಮಾಡಿದ್ದು ಪ್ರಯೋಜನವಾಗಿದೆಯಾ ಕೋವಿಡ್ ಸ್ಥಿತಿಗತಿ ಹೇಗಿದೆ ಎನ್ನುವುದರ ಬಗ್ಗೆ ವಿವರವಾಗಿ ಚರ್ಚಿಸಲಾಯ್ತು. ನಂತರ ಅನ್​ಲಾಕ್​ ನ ಮುಂದಿನ ಹಂತದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಸಚಿವರುಗಳಾದ ಅಶ್ವತ್ಥನಾರಾಯಣ್, ಆರ್ ಅಶೋಕ್, ಅರವಿಂದ ಲಿಂಬಾವಳಿ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಉಪಸ್ಥಿತರಿದ್ದರು.


ಇದರಂತೆ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್ -19 ರ ಕುರಿತು ಚರ್ಚೆ ನಡೆಸಿದ ನಂತರ ನೈಟ್ ಕರ್ಪ್ಯುನ್ನು ರಾತ್ರಿ 10 ರಿಂದ ಬೆಳಗ್ಗೆ 5 ರ ವರಗೆ ವಿಧಿಸಲು ತೀರ್ಮಾನಿಸಲಾಯಿತು. ಸಿನಿಮಾ ಥಿಯೇಟರ್, ರಂಗಮಂದಿರ 50 ಪರ್ಸೆಂಟ್ ತೆರೆಯಲು ಅವಕಾಶ ನೀಡಲು ತೀರ್ಮಾನಿಸಲಾಯಿತು. ದೀರ್ಘಕಾಲದ ನಂತರ ಸಿನಿಮಾ ಥಿಯೇಟರ್​ಗಳು ತೆರೆಯುತ್ತಿವೆ. ಕೇವಲ ಅರ್ಧದಷ್ಟು ವೀಕ್ಷಕರಿಗೆ ಮಾತ್ರ ಅನುಮತಿ ಇದ್ದರೂ ಕೂಡಾ ಇದಕ್ಕೆ ದೊರಕುವ ಪ್ರತಿಕ್ರಿಯೆ ಮತ್ತು ಅಲ್ಲಿ ಕೋವಿಡ್ ನಿಯಮಗಳ ಪಾಲನೆಯ ಬಗ್ಗೆ ಗಮನಿಸಿ ನಂತರ ಮುಂದಿನ ತೀರ್ಮಾನ ತೆಗೆದುಕೊಳ್ಳುವ ಕುರಿತು ಚರ್ಚಿಸಲಾಯಿತು.


ಇದನ್ನೂ ಓದಿ: SSLC Exam: ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಏನೆಲ್ಲಾ ತಯಾರಿ ಮಾಡಿಕೊಳ್ಬೇಕು ? ವ್ಯವಸ್ಥೆ ಹೇಗಿದೆ ? ಫುಲ್ ಡೀಟೆಲ್ಸ್..


ಇದರೊಂದಿಗೆ ಬಹುಕಾಲದ ಬೇಡಿಕೆ ಎಂಬಂತೆ ಉನ್ನತ ಶಿಕ್ಷಣವನ್ನು ಜುಲೈ 26 ರಿಂದ ಪ್ರಾರಂಭ ಮಾಡಲು ಅವಕಾಶ ನೀಡಲಾಯಿತು. ಆದರೆ ಈ ತರಗತಿಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕನಿಷ್ಟ ಒಂದು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು ಎನ್ನುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪದವಿ ಮೇಲ್ಮಟ್ಟದ ಕಾಲೇಜುಗಳಿಗೆ ಮಾತ್ರ ಭೌತಿಕ ತರಗತಿಗಳನ್ನು ನಡೆಸಲು ಅನುಮತಿ ನೀಡಲಾಗುವುದು. ಮಾರ್ಗಸೂಚಿಯಲ್ಲಿ ಕಾಲೇಜುಗಳ ಕುರಿತ ಷರತ್ತುಗಳನ್ನು ತಿಳಿಸಲಾಗುವುದು. ಇನ್ನು ನೈಟ್ ಕರ್ಫ್ಯೂ ಅವಧಿಯಲ್ಲಿ ಒಂದು ಗಂಟೆ ಕಡಿತ ಮಾಡಲಾಗಿದ್ದು ರಾತ್ರಿ 9 ರ ಬದಲು 10 ಗಂಟೆಯಿಂದ ಬೆಳಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಇರಲಿದೆ.


ಬಾರ್ ಗಳಲ್ಲಿ ಮಾತ್ರ ಮದ್ಯ ಸೇವನೆಗೆ ಇದ್ದ ಶೇ.50 ರ ಮಿತಿ ಮುಂದುವರಿಕೆಯಾಗಿದೆ. ನೈಟ್ ಕರ್ಫ್ಯೂ ಅವಧಿಯಲ್ಲಿ ಒಂದು ಗಂಟೆ ಕಡಿತ ಹಿನ್ನೆಲೆಯಲ್ಲಿ ಬಾರ್ ಗಳಲ್ಲಿ ಇನ್ಮುಂದೆ ರಾತ್ರಿ 10 ತನಕ ಮದ್ಯ ಸೇವನೆಗೆ ಅವಕಾಶ ದೊರೆಯಲಿದೆ. ಇನ್ನು ಪಬ್ ಗಳಲ್ಲಿ ಮದ್ಯ ಸೇವನೆ, ನೈಟ್ ಪಾರ್ಟಿಗಳಿಗೆ ಅವಕಾಶ ಇಲ್ಲ. ಒಳಾಂಗಣ ಚಿತ್ರೀಕರಣ ಮತ್ತು ಕ್ರೀಡಾಂಗಣಗಳಿಗೂ ಅನುಮತಿ ನೀಡಿಲ್ಲ. ಉಳಿದಂತೆ ಈ ಹಿಂದೆ ಇದ್ದ ಮದುವೆಗೆ 100 ಜನರ ಮಿತಿ, ಅಂತ್ಯ ಸಂಸ್ಕಾರಕ್ಕೆ 20 ಜನರ ಮಿತಿ ಮುಂದುವರಿಕೆಯಾಗಿದೆ. ಈ ಪ್ರಮುಖ ಸಭೆಗೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಗೈರಾಗಿದ್ದು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್ಕೇಸ್ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ತಮ್ಮ ತಮ್ಮ ಸರದಿ ಬಂದಾಗ ತಪ್ಪದೇ ಲಸಿಕೆ ಪಡೆಯಬೇಕು. ಈಗಿನ ಪರಿಸ್ಥಿತಿಯಲ್ಲಿ ಲಸಿಕೆ ಒಂದೇ ಸೋಂಕಿನ ವಿರುದ್ಧ ಹೋರಾಡುವ ಮಾರ್ಗವಾಗಿದೆ. ಅತ್ಯಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಗೆ ಹೋಗುವ ಅಭ್ಯಾಸ ರೂಢಿಸಿಕೊಳ್ಳಬೇಕು.

Published by:Soumya KN
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು