HOME » NEWS » Coronavirus-latest-news » USE EMPTY GOVERNMENT BUILDINGS FOR TREATING CORONA PATIENCE HD KUMARASWAY SUGGESTED GNR

ಕೊರೋನಾ ವೈರಸ್​​: ‘ಸೋಂಕಿತರ ಚಿಕಿತ್ಸೆಗಾಗಿ ಖಾಲಿಯಿರುವ ಸರ್ಕಾರಿ ಕಟ್ಟಡಗಳನ್ನು ಬಳಸಿ‘ - ಎಚ್​​ಡಿಕೆ

ಹಾಗೆಯೇ ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ ಎಂದು ಕಿವಿಮಾತು ತಿಳಿಸಿದರು.

news18-kannada
Updated:March 15, 2020, 3:50 PM IST
ಕೊರೋನಾ ವೈರಸ್​​: ‘ಸೋಂಕಿತರ ಚಿಕಿತ್ಸೆಗಾಗಿ ಖಾಲಿಯಿರುವ ಸರ್ಕಾರಿ ಕಟ್ಟಡಗಳನ್ನು ಬಳಸಿ‘ - ಎಚ್​​ಡಿಕೆ
ಹೆಚ್​.ಡಿ. ಕುಮಾರಸ್ವಾಮಿ.
  • Share this:
ಬೆಂಗಳೂರು(ಮಾ.15): ಖಾಲಿಯಿರುವ ಸರ್ಕಾರಿ ಕಟ್ಟಡಗಳನ್ನು ಕೊರೋನಾ ವೈರಸ್​​​​ ಸೋಂಕಿತರಿಗೆ ಚಿಕಿತ್ಸೆ ನೀಡಲು ಬಳಸುವಂತೆ ಮಾಜಿ ಸಿಎಂ ಎಚ್​​.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್​​ ಮಾಡಿರುವ ಜೆಡಿಎಸ್​​ ವರಿಷ್ಠ ಕುಮಾರಸ್ವಾಮಿ ಕೊರೋನಾ ವೈರಸ್​​ನಿಂದ ಬಳಲುತ್ತಿರುವ ರೋಗಿಗಳಿಗೆ ಪ್ರತ್ಯೇಕ ಚಿಕಿತ್ಸೆ ನೀಡಲು ಖಾಲಿಯಿರುವ ಸರ್ಕಾರಿ ಕಟ್ಟಡಗಳನ್ನು ಬಳಕೆ ಮಾಡಿ. ಇದರ ಬದಲಿಗೆ ಇತರೆ ರೋಗಿಗಳೊಂದಿಗೆ ಕೊರೋನಾ ಸೋಂಕಿತರಿಗೂ ಚಿಕಿತ್ಸೆ ನೀಡುವುದು ಎಷ್ಟರ ಮಟ್ಟಿಗೆ ಸರಿ? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನಿಸಿದ್ದಾರೆ.

ಇನ್ನು, ಕೊರೋನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಇತರ ರೋಗಿಗಳ ಜೊತೆ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು ಎಂದು ಮತ್ತೊಂದು ಟ್ವೀಟ್​​ ಮೂಲಕ ಕುಮಾರಸ್ವಾಮಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೋನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ Quarantine ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ Quarantine ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ನಾಳೆ ವಿಶ್ವಾಸಮತ ಯಾಚನೆಗೆ ರಾಜ್ಯಪಾಲರ ಸೂಚನೆ; ಕಮಲನಾಥ್​ ಸರ್ಕಾರಕ್ಕೆ ಅಗ್ನಿಪರೀಕ್ಷೆ

ಹೀಗೆ ಮುಂದುವರಿದ ಅವರು, ಕೊರೋನಾ ವೈರಸ್​​ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದರು.

ಹಾಗೆಯೇ ಸುರಕ್ಷತಾ ಕ್ರಮಗಳನ್ನು ವಿವರಿಸುವ ವಿಚಾರ ಪ್ರಚಾರದ ಸರಕಾಗಬಾರದು. ಹಾಗೆ ಆಗಿದ್ದೇ ಆದರೆ ಜನರಲ್ಲಿ ಆತಂಕ ಸೃಷ್ಟಿಯಾಗುತ್ತದೆ. ಆತಂಕ ಸಮೂಹ ಸನ್ನಿಯಾಗಿ ಪರಿವರ್ತನೆಯಾಗಿ ಜನಜೀವನ ಮೇಲೆ ನೇತ್ಯಾತ್ಮಕ ಪರಿಣಾಮಗಳು ಉಂಟಾಗದಿರಲಿ ಎಂದು ಕಿವಿಮಾತು ತಿಳಿಸಿದರು.
First published: March 15, 2020, 3:44 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories