ನವದೆಹಲಿ (ಜು. 10): ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ದೇಶದ ಎರಡು ರಾಜ್ಯಗಳಲ್ಲಿ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಉತ್ತರ ಪ್ರದೇಶದಲ್ಲಿ ಸಂಪೂರ್ಣವಾಗಿ ಲಾಕ್ಡೌನ್ ಮಾಡಲಾಗಿದೆ. ಬಿಹಾರದಲ್ಲಿ ರಾಜಧಾನಿ ಪಾಟ್ನಾ ಸೇರಿದಂತೆ ಆರು ಜಿಲ್ಲೆಗಳಲ್ಲಿ ಮಾತ್ರ ಲಾಕ್ಡೌನ್ ಘೋಷಿಸಲಾಗಿದೆ.
ಉತ್ತರ ಪ್ರದೇಶದಲ್ಲಿ ಇಂದಿನಿಂದ ಮೂರು ದಿನಗಳವರೆಗೆ ಕಟ್ಟುನಿಟ್ಟಿನ ಲಾಕ್ಡೌನ್ ಘೋಷಣೆ ಮಾಡಿ ಅಲ್ಲಿನ ಸರ್ಕಾರ ಆದೇಶ ಹೊರಡಿಸಿದೆ. ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ. ಗ್ರಾಮೀಣ ಪ್ರದೇಶಗಳಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳಿಗೆ ಅವಕಾಶ ನೀಡಿದೆ.
ಎಲ್ಲಾ ರೀತಿಯ ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ಹಾಗೂ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಜನರಿಗೆ ಮನೆಯಿಂದ ಹೊರಗಡೆ ಬಾರದಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಭಾರತದಲ್ಲಿ ಮಾರಾಟವಾಗುವ ವಸ್ತುಗಳಿಗೆ ಉತ್ಪಾದನೆಯಾದ ದೇಶದ ಟ್ಯಾಗ್ ಹಾಕೋದು ಕಡ್ಡಾಯ; ಕೇಂದ್ರದ ಆದೇಶ
ಬಿಹಾರದಲ್ಲಿ ಭಾಗಶಃ ಲಾಕ್ಡೌನ್:
ಇನ್ನೊಂದೆಡೆ ಬಿಹಾರದಲ್ಲಿ ರಾಜಧಾನಿ ಪಾಟ್ನಾ ಸೇರಿದಂತೆ ಆರು ಜಿಲ್ಲೆಗಳಲ್ಲಿ ಮಾತ್ರ ಲಾಕ್ಡೌನ್ ಘೋಷಣೆ ಮಾಡಿ ಅಲ್ಲಿನ ಸರ್ಕಾರ ಆದೇಶ ಮಾಡಿದೆ. ಪಾಟ್ನಾ, ನವಾಡಾ, ಬಕ್ಸಾರ್, ಬಾಗಲ್ಪುರ್, ಕಿಶನ್ ಗಂಜ್ ಮತ್ತು ಪೂರ್ಣಿಯಾ ಜಿಲ್ಲೆಗಳಲ್ಲಿ ಲಾಕ್ಡೌನ್ ಘೋಷಿಸಲಾಗಿದೆ. ಹಾಲು, ತರಕಾರಿ, ದಿನಸಿ, ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್ ಸೇರಿ ಮೂಲಭೂತ ಅವಶ್ಯಕತೆ ಇರುವ ಅಂಗಡಿಗಳನ್ನು ಮಾತ್ರ ತೆರೆಯಲು ಅವಕಾಶ ನೀಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ