• Home
 • »
 • News
 • »
 • coronavirus-latest-news
 • »
 • ವಿಶಾಖಪಟ್ಟಣಂ ವಿಷಾನಿಲ ಸೋರಿಕೆ; ದುರಂತದಲ್ಲಿ ಮೃತಪಟ್ಟವರಿಗೆ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಸಂತಾಪ

ವಿಶಾಖಪಟ್ಟಣಂ ವಿಷಾನಿಲ ಸೋರಿಕೆ; ದುರಂತದಲ್ಲಿ ಮೃತಪಟ್ಟವರಿಗೆ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಸಂತಾಪ

ಹೆಚ್​.ಡಿ. ಕುಮಾರಸ್ವಾಮಿ.

ಹೆಚ್​.ಡಿ. ಕುಮಾರಸ್ವಾಮಿ.

Vizag Gas Leak: ವಿಶಾಖಪಟ್ಟಣಂನ ಆರ್​ಆರ್​ ವೆಂಕಟಾಪುರಂ ಎಂಬ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ನಡೆದಿದೆ. ಎಲ್​ಜಿ ಪಾಲಿಮರ್ಸ್ ಇಂಡಸ್ಟ್ರಿ ಎಂಬ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾದ ಕಾರಣ ಸುತ್ತಮುತ್ತಲಿನ ಮನೆಗಳಿಗೂ ವಿಷಾನಿಲ ಹರಡಿದೆ.

 • Share this:

  ಬೆಂಗಳೂರು: ಇಂದು ಮುಂಜಾನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾದ ಪರಿಣಾಮ 10  ಜನ ಸಾವನ್ನಪ್ಪಿದ್ದಾರೆ. 300ಕ್ಕೂ ಹೆಚ್ಚು ಜನರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ.


  ವಿಶಾಖಪಟ್ಟಣಂ ಅನಿಲ ದುರಂತ ಅತ್ಯಂತ ದುರದೃಷ್ಟಕರ. ಈ ದುರಂತದಲ್ಲಿ ಜೀವ ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಇಂತಹ ಘಟನೆಗಳು ಮರುಕಳಿಸಿದಂತೆ ಎಚ್ಚರವಹಿಸಬೇಕು. ಈ ಘಟನೆಯಿಂದ ಸಂಕಟಕ್ಕೆ ಒಳಗಾದವರು ಬೇಗ ಚೇತರಿಸಿಕೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.  ಇದನ್ನು ಓದಿ: Visakhapatnam Gas Leak: ವಿಶಾಖಪಟ್ಟಣಂ ರಾಸಾಯನಿಕ ಕಾರ್ಖಾನೆಯಲ್ಲಿ ವಿಷಾನಿಲ ಸೋರಿಕೆ; 10 ಸಾವು, 5,000ಕ್ಕೂ ಹೆಚ್ಚು ಜನ ಅಸ್ವಸ್ಥ


  ವಿಶಾಖಪಟ್ಟಣಂನ ಆರ್​ಆರ್​ ವೆಂಕಟಾಪುರಂ ಎಂಬ ಗ್ರಾಮದ ಬಳಿ ಇಂದು ಬೆಳಗ್ಗೆ 3 ಗಂಟೆಯ ವೇಳೆಗೆ ಈ ಅವಘಡ ನಡೆದಿದೆ. ಎಲ್​ಜಿ ಪಾಲಿಮರ್ಸ್ ಇಂಡಸ್ಟ್ರಿ ಎಂಬ ರಾಸಾಯನಿಕ ಕಾರ್ಖಾನೆಯಲ್ಲಿ ಗ್ಯಾಸ್​ ಸೋರಿಕೆಯಾದ ಕಾರಣ ಸುತ್ತಮುತ್ತಲಿನ ಮನೆಗಳಿಗೂ ವಿಷಾನಿಲ ಹರಡಿದೆ. ಇದರಿಂದ ಮುಂಜಾನೆ ವಾಕಿಂಗ್​ಗೆ ಹೊರಗೆ ಬಂದಿದ್ದ ಸಾಕಷ್ಟು ಜನರು ಅಸ್ವಸ್ಥರಾಗಿ ರಸ್ತೆಯಲ್ಲೇ ಬಿದ್ದಿದ್ದರು. ಇಬ್ಬರು ಮಕ್ಕಳು ಸೇರಿದಂತೆ 10 ಜನ ಸಾವನ್ನಪ್ಪಿದ್ದಾರೆ.


  Published by:HR Ramesh
  First published: