news18-kannada Updated:July 7, 2020, 4:18 PM IST
ವಿಪಕ್ಷ ನಾಯಕ ಸಿದ್ದರಾಮಯ್ಯ.
ಬೆಂಗಳೂರು (ಜುಲೈ 07); ಬಿಜೆಪಿ ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಟ್ವೀಟ್ ಮೂಲಕ ಸಂತೋಷ್ ಅವರನ್ನು ತಿವಿದಿರುವ ಸಿದ್ದರಾಮಯ್ಯ, "ಕಾಂಗ್ರೆಸ್ ನೀಡಿದ್ದ ಒಂದು ಕೋಟಿ ರೂಪಾಯಿ ಪರಿಹಾರದ ಲೆಕ್ಕವನ್ನು ಬಿ.ಎಲ್. ಸಂತೋಷ್ ಕೇಳುತ್ತಿದ್ದಾರೆ. ಅದನ್ನು ಕೊಡೋಣ. ಆದರೆ, ಮೊದಲು ಪ್ರತಿಯೊಬ್ಬ ಭಾರತೀಯನ ಖಾತೆಗೆ ನರೇಂದ್ರ ಮೋದಿ ಜಮೆ ಮಾಡಿರುವ 15 ಲಕ್ಷ ರೂಪಾಯಿಯ ಲೆಕ್ಕ ಕೊಡಿ, ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಿರುವ 'ಪಿಎಂ ಕೇರ್ಸ್' ನಿಧಿಯ ಲೆಕ್ಕಕೊಡಿ" ಎಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಈ ಹಿಂದೆ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸಲು ಪ್ರಯಾಣ ದರದ ಹೆಸರಿನಲ್ಲಿ ಕಾಂಗ್ರೆಸ್ ಘಟಕ ರಾಜ್ಯ ಸರ್ಕಾರಕ್ಕೆ 1 ಕೋಟಿ ರೂ. ಚೆಕ್ ನೀಡಿತ್ತು. ಇದನ್ನು ಪ್ರಶ್ನೆ ಮಾಡಿದ್ದ ಬಿ.ಎಲ್. ಸಂತೋಷ್ ಕಾಂಗ್ರೆಸ್ ನೀಡಿದ್ದ 1 ಕೋಟಿ ಲೆಕ್ಕ ಕೇಳಿದ್ದರು.
ಇದಕ್ಕೆ ಟ್ವೀಟ್ ಮೂಲಕ ಕಟುವಾಗಿ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, "ಮೊದಲು ಪ್ರಧಾನಿ ನರೇಂದ್ರ ಮೋದಿ ಬಡ ಜನರ ಖಾತೆಗೆ ಹಾಕಿರುವ 15 ಲಕ್ಷದ ಲೆಕ್ಕ ಕೊಡಲಿ. ಪಿಎಂ ಕೇರ್ಸ್ಗೆ ಸಾರ್ವಜನಿಕರು ನೀಡಿರುವ ಹಣದ ಲೆಕ್ಕ ಕೊಡಲಿ. ಆನಂತರ ಕಾಂಗ್ರೆಸ್ ನೀಡಿರುವ 1 ಕೋಟಿ ಪರಿಹಾರ ಹಣದ ಲೆಕ್ಕ ನೀಡಲು ನಾವು ಸಿದ್ದ" ಎಂದು ಕಿಡಿಕಾರಿದ್ದಾರೆ.
ಇದೇ ಸಂದರ್ಭದಲ್ಲಿ ಸರಣಿ ಟ್ವೀಟ್ ಮೂಲಕ ಬಿ.ಎಲ್. ಸಂತೋಷ್ ವಿರುದ್ಧ ಕಿಡಿಕಾರಿರುವ ಅವರು, "
ಚೀನಾ ಸೇನೆ ಎರಡು ಕಿ.ಮೀ.ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್. ಸಂತೋಷ್ ಅವರೇನು ರಕ್ಷಣಾ ಸಚಿವರೇ? ಇಲ್ಲವೇ ಸೇನಾ ಮುಖ್ಯಸ್ಥರೇ? ಈ ಹೇಳಿಕೆ ನೀಡಬೇಕಾಗಿರುವುದು ಪ್ರಧಾನ ಮಂತ್ರಿ. ಅವರಿಂದ ಹೇಳಿಕೆ ಕೊಡಿಸಿ. ಚೀನಾ ಒಳ ನುಸುಳಿಲ್ಲ ಎಂದಾದರೆ, ಹಿಂದೆ ಸರಿದದ್ದು ಎಲ್ಲಿಂದ?ಎನ್ನುವುದನ್ನೂ ತಿಳಿಸಲಿ" ಎಂದು ಆಗ್ರಹಿಸಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, "
ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಆರ್.ಎಸ್ ಎಸ್ ನಾಯಕ ಸಂತೋಷ್ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ ನನ್ನ ಕಚೇರಿಗೆ ಬಂದರೆ ನಾನು ನಡೆಸಿದ್ದ ಅಧಿಕಾರಿಗಳ ಸಭೆಯ ವಿವರವೂ ಸೇರಿದಂತೆ ನಿಮ್ಮ ಸರ್ಕಾರಕ್ಕೆ ಬುದ್ದಿ ಹೇಳಿ ತಿದ್ದಲು ಏನೆಲ್ಲ ಮಾಡಿದ್ದೇನೆ ಎಂಬ ವಿವರ ನೀಡುವೆ" ಎಂದಿದ್ದಾರೆ.
ಇದನ್ನೂ ಓದಿ : ಕೊರೋನಾ ಭೀತಿ: ಚಂಡೀಗರ್ನಿಂದ ಬೆಂಗಳೂರಿಗೆ ಬಂದ ಹೆಂಡತಿಯನ್ನು ಮನೆಗೆ ಸೇರಿಸದ ಗಂಡ
ಇನ್ನೂ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿ.ಎಲ್. ಸಂತೋಷ್ ಸಿಎಂ ಯಡಿಯೂರಪ್ಪ ಅವರನ್ನು ಪ್ರಶಂಸಿಸಿದ್ದರು. ಇದನ್ನೂ ಟೀಕಿಸಿರುವ ಸಿದ್ದರಾಮಯ್ಯ, "ಸಂತೋಷ್ ಅವರೇ ಬಿಎಸ್ವೈ
ಅವರಿಗೆ ನೀವು ನೀಡಿರುವ ಶಹಭಾಸ್ ಗಿರಿ ಮನಸ್ಸಿನಿಂದ ಬಂದದ್ದೋ, ನಾಲಿಗೆಯಿಂದಲೋ? ನೀವು ಆಗಾಗ ಕರ್ನಾಟಕಕ್ಕೆ ಬಂದು ಅವರ ವಿರುದ್ಧ ಸಹದ್ಯೋಗಿಗಳನ್ನು ಎತ್ತಿಕಟ್ಟುವುದನ್ನು ನಿಲ್ಲಿಸಿದರೆ ಅವರು ನಿಮಗೆ ಶಹಭಾಸ್ಗಿರಿ ಕೊಡಬಹುದೇನೋ ?" ಎಂದು ಕಿಚಾಯಿಸಿದ್ದಾರೆ.
Published by:
MAshok Kumar
First published:
July 7, 2020, 4:18 PM IST