news18-kannada Updated:June 10, 2020, 11:13 AM IST
ಸಿದ್ದರಾಮಯ್ಯ.
ಬೆಂಗಳೂರು: ಜೂನ್ 14ರಂದು ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಆದರೆ, ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ಕೊಡದೇ ಇರುವುದು ಸರ್ಕಾರದ ದಮನಕಾರಿ ನೀತಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಮೇಲೆ ಬಿಜೆಪಿ ಗದಾ ಪ್ರಹಾರ ಮಾಡಲು ಹೊರಟಿದೆ. ಕಾರ್ಯಕ್ರಮದಲ್ಲಿ ನೂರೈವತ್ತಲ್ಲ ಅರವತ್ತು ಜನರೂ ಸೇರುತ್ತಿರಲಿಲ್ಲ. ಕಾನೂನು ಪ್ರಕಾರ ನಾವು ಏನು ಕಾರ್ಯಕ್ರಮ ಮಾಡಬೇಕೋ ಅದನ್ನು ಮಾಡುತ್ತೇವೆ ಎಂದು ಹೇಳಿದರು.
ಹಾಗಾದರೆ ಬಿಹಾರದಲ್ಲಿ, ಉತ್ತರಪ್ರದೇಶದಲ್ಲಿ ಅನುಮತಿ ಕೊಟ್ಟಿದ್ದು ಯಾಕೆ? ಪಶ್ಚಿಮಬಂಗಾಳದಲ್ಲಿ ಅಮಿತ್ ಶಾ ವರ್ಚುವಲ್ ರ್ಯಾಲಿಗೆ ಯಾಕೆ ಅನುಮತಿ ಕೊಟ್ರಿ? ಅವರಿಗೊಂದು ನೀತಿ, ನಮಗೊಂದು ನೀತಿಯಾ? ಇವೆಲ್ಲಾ ಬಿಜೆಪಿ ಮಾಡುತ್ತಿರುವ ಷಡ್ಯಂತ್ರ ಎಂದು ವಾಗ್ದಾಳಿ ನಡೆಸಿದರು.
ಇದನ್ನು ಓದಿ: ಜೂ.14ರಂದು ನಡೆಯಬೇಕಿದ್ದ ಡಿಕೆಶಿ ಪದಗ್ರಹಣಕ್ಕೆ ಅನುಮತಿ ನಿರಾಕರಿಸಿದ ರಾಜ್ಯ ಸರ್ಕಾರ
ಇದೇ ಜೂನ್ 14ನೇ ತಾರೀಕಿನಂದು ಡಿ.ಕೆ.ಶಿವಕುಮಾರ್ ಅವರು ಪದಗ್ರಹಣಕ್ಕೆ ಮುಂದಾಗಿದ್ದರು. ಅದಕ್ಕಾಗಿ ಸಾಕಷ್ಟು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದರು. ಆದರೆ, ರಾಜ್ಯ ಸರ್ಕಾರ ಯಾವುದೇ ರಾಜಕೀಯ ಕಾರ್ಯಕ್ರಮಕ್ಕೆ ಅವಕಾಶ ಇಲ್ಲ ಎಂದು ಹೇಳಿದೆ. ಕೇಂದ್ರ ಸರ್ಕಾರ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಮದುವೆ, ಶವಸಂಸ್ಕಾರಕ್ಕೆ ಮಾತ್ರ ಅವಕಾಶ ನೀಡಿದೆ. ರಾಜಕೀಯ ಕಾರ್ಯಕ್ರಮಗಳಿಗೆ ನೀಡಿಲ್ಲ. ಹೀಗಾಗಿ ಪದಗ್ರಹಣ ಕಾರ್ಯಕ್ರಮಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಡಿಕೆಶಿಗೆ ಬರೆದ ಪತ್ರದಲ್ಲಿ ರಾಜ್ಯ ಸರ್ಕಾರ ಉಲ್ಲೇಖಿಸಿದೆ.
First published:
June 10, 2020, 11:13 AM IST