ಬೆಂಗಳೂರು (ಏ. 5): ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹರಡುತ್ತಿರುವುದರಿಂದ ಅದನ್ನು ಎದುರಿಸಲು ಒಗ್ಗಟ್ಟು ಪ್ರದರ್ಶಿಸಲು ಇಂದು ರಾತ್ರಿ 9 ಗಂಟೆಗೆ ದೀಪ ಅಥವಾ ಟಾರ್ಚ್ ಬೆಳಗಿಸಲು ಪ್ರಧಾನಿ ನರೇಂದ್ರ ಮೋದಿ ಕರೆನೀಡಿದ್ದಾರೆ. ಈ ನಡೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವಿಟ್ಟರ್ನಲ್ಲಿ ಟೀಕಾಪ್ರಹಾರ ನಡೆಸಿದ್ದಾರೆ.
ಏ. 6ರಂದು ಬಿಜೆಪಿ ಸಂಸ್ಥಾಪನಾ ದಿನ. ಈ ದಿನವನ್ನು ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕೊರೋನಾ ಸಂಕಷ್ಟವನ್ನು ದುರುಪಯೋಗ ಮಾಡಿಕೊಂಡರೆ? 1980ರ ಏ. 6ರಂದು ಬಿಜೆಪಿ ಅಸ್ತಿತ್ವಕ್ಕೆ ಬಂದ ದಿನ. ಇಂದು ರಾತ್ರಿ ಬಿಜೆಪಿಗೆ 40 ವರ್ಷ ತುಂಬುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಬಿಜೆಪಿಯ ಸಂಸ್ಥಾಪನಾ ದಿನ ಆಚರಿಸಲು ಕೊರೋನ ಸಂಕಷ್ಟವನ್ನು ಪ್ರಧಾನಿ ದುರುಪಯೋಗ ಮಾಡಿಕೊಂಡರೇ?
6 ಎಪ್ರಿಲ್ 1980 ಬಿಜೆಪಿ ಸಂಸ್ಥಾಪನಾ ದಿನ. ಇಂದಿನ ದಿನ 5-04-2020ಕ್ಕೆ ಬಿಜೆಪಿಗೆ ನಲವತ್ತು ವರ್ಷ ತುಂಬುತ್ತವೆ.
1/4
— H D Kumaraswamy (@hd_kumaraswamy) April 5, 2020
ತನ್ನ ಸಂಸ್ಥಾಪನಾ ದಿನದ ಸಂಭ್ರಮೋತ್ಸವವನ್ನು ಕೊರೋನಾ ಸಂಕಷ್ಟದ ದಿನಗಳಲ್ಲಿ ನೇರಾನೇರ ಆಚರಿಸಲು ಹಿಂಜರಿದಿರುವ ಬಿಜೆಪಿ ಪರೋಕ್ಷವಾಗಿ ಇಡೀ ದೇಶದ ಜನರ ಕೈಯಲ್ಲಿ ದೀಪ ಬೆಳಗಿಸಿ, ತನ್ನ ಭಂಡತನವನ್ನು ಮೆರೆಯುತ್ತಿದೆಯೇ? ಎಂದು ಮಾಜಿ ಸಿಎಂ ಟ್ವೀಟ್ ಮೂಲಕ ಬಿಜೆಪಿ ನಾಯಕರ ಅಸಲಿ ಉದ್ದೇಶದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.
ತನ್ನ ಸಂಸ್ಥಾಪನಾ ದಿನದ ಸಂಭ್ರಮೋತ್ಸವವನ್ನು ಕೊರೋನ ಸಂಕಷ್ಟದ ದಿನಗಳಲ್ಲಿ ನೇರಾ ನೇರ ಆಚರಿಸಲು ಹಿಂಜರಿದ ಬಿಜೆಪಿ ಪರೋಕ್ಷವಾಗಿ ಇಡೀ ದೇಶದ ಜನತೆಯ ಕೈಯಲ್ಲಿ ದೀಪ ಬೆಳಗಿಸಿ ತನ್ನ ಭಂಡತನವನ್ನು ಮೆರೆಯುತ್ತಿದೆಯೇ?
2/4
— H D Kumaraswamy (@hd_kumaraswamy) April 5, 2020
ದೇಶದ ಸಂಕಟವನ್ನು ಬಗೆ ಹರಿಸುವ ಯಾವುದೇ ಮಾರ್ಗೋಪಾಯಗಳನ್ನು ದೇಶಕ್ಕೆ ಹೇಳದೇ ಪ್ರಧಾನಿ ಏಪ್ರಿಲ್ 5 ನ್ನೇ ಆಯ್ದುಕೊಂಡದ್ದಕ್ಕೆ ಬೇರೆ ಏನು ವೈಜ್ಞಾನಿಕ, ವೈಚಾರಿಕ ಕಾರಣ ಎಂಬುದನ್ನು ಸ್ಪಷ್ಟ ಪಡಿಸಬೇಕು.
ದೇಶ ಹಿಂದೆಂದೂ ಕಂಡರಿಯದ ಕಷ್ಟದ ದಿನಗಳಲ್ಲಿ ಇರುವಾಗ ದೀಪ ಬೆಳಗಿಸಿ ಒಗ್ಗಟ್ಟು ಪ್ರದರ್ಶಿಸುವ ನೆಪದಲ್ಲಿ ಈ ತರದ ತೋರಿಕೆಯ ಸಂಭ್ರಮ ಬೇಕೇ?
3/4
— H D Kumaraswamy (@hd_kumaraswamy) April 5, 2020
ಇಡೀ ಜಗತ್ತು ಕೊರೋನಾ ಮಾರಿಯಿಂದ ತತ್ತರಿಸಿ ಹೋಗಿದೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಮರೆಮಾಚಿ, ಅಕಾಲಿಕ ದೀಪಾವಳಿ ಮಾಡುವುದು ಬೇಕಿತ್ತಾ? ಎಂದು ಟ್ವೀಟ್ ಮೂಲಕ ಪ್ರಶ್ನಿಸಿರುವ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ, ಕರುಣಾಳು ಬಾ ಬೆಳಕೆ ಮುಸುಕಿದೀ ಮಬ್ಬಿನಲಿ ಕವಿತೆಯ ಸಾಲುಗಳನ್ನು ಟ್ವೀಟ್ ಮಾಡಿದ್ದಾರೆ.
ಜಗತ್ತು ಕೊರೋನಾ ಮಹಾಮಾರಿಯಿಂದ ತತ್ತರಿಸುವ ಸಂದರ್ಭದಲ್ಲಿ ಇಂತಹ ರಹಸ್ಯ ಕಾರ್ಯಸೂಚಿ ಅರ್ಥಾತ್ ಪರದೆ ಹಿಂದಿನ ಸತ್ಯ ಮರೆಮಾಚಿ ಅಕಾಲಿಕ ದೀಪಾವಳಿ ಮಾಡಬೇಕೆ?
ಕರುಣಾಳು ಬಾ ಬೆಳಕೆ
ಮುಸುಕಿದೀ ಮಬ್ಬಿನಲಿ..
ಕೈ ಹಿಡಿದು
ನಡೆಸೆನ್ನನು.....
4/4
— H D Kumaraswamy (@hd_kumaraswamy) April 5, 2020
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ