HOME » NEWS » Coronavirus-latest-news » WIFE DEATH FROM HEART ATTACK AFTER HEARING HER HUSBAND DEATH NEWS IN CHIKKAMAGALURU RHHSN VCTV

ಸಾವಿನಲ್ಲೂ ಒಂದಾದ ದಂಪತಿ; ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಸಾವು!

ಪತಿ ಮೃತ ಪಟ್ಟ ಸುದ್ದಿ ಕೇಳಿ ಪತ್ನಿ ಸೌಮ್ಯ ಕೂಡ ವಿಷಯ ತಿಳಿದ ಹತ್ತೇ ನಿಮಿಷದಲ್ಲಿ  ಹೃದಯಾಘಾತಕ್ಕೊಳಗಾಗಿ ಮನೆಯಲ್ಲಿ ಮೃತಪಟ್ಟಿದ್ದಾರೆ. ಹರೀಶ್ ಹಾಗೂ ಸೌಮ್ಯಾ ದಂಪತಿಗೆ ಕೋವಿಡ್ ಸೋಂಕು ಇರಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

news18-kannada
Updated:May 12, 2021, 7:02 AM IST
ಸಾವಿನಲ್ಲೂ ಒಂದಾದ ದಂಪತಿ; ಪತಿ ಸಾವಿನ ಸುದ್ದಿ ಕೇಳಿ ಪತ್ನಿಯೂ ಹೃದಯಾಘಾತದಿಂದ ಸಾವು!
ಪ್ರಾತಿನಿಧಿಕ ಚಿತ್ರ (ಫೋಟೋ: ಗೂಗಲ್​)
  • Share this:
ಚಿಕ್ಕಮಗಳೂರು: ಪತಿಯ ಸಾವಿನ ಸುದ್ದಿ ಕೇಳಿ ಪತ್ನಿಯೂ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯಲ್ಲಿ ನಡೆದಿದೆ.  ನ್ಯುಮೋನಿಯಾದಿಂದ ಕಾಯಿಲೆಯಿಂದ ಬಳಲುತ್ತಿದ್ದ ಕೋಟೆ ಬಡಾವಣೆ ನಿವಾಸಿ ಹರೀಶ್ ಅವರನ್ನು ನಗರದ ಕೆ.ಆರ್.ಎಸ್ ಆಸ್ಪತ್ರೆಗೆ ಸೋಮವಾರ ಮಧ್ಯಾಹ್ನ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರಿಗೆ ಆಕ್ಸಿಜನ್ ನೀಡಿದ್ದು, ಆಕ್ಸಿಜನ್ ಖಾಲಿಯಾಗಿದ್ದರಿಂದ ವೈದ್ಯರು ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದರು. ಆ ಬಳಿಕ ಕುಟುಂಬಸ್ಥರು ಹರೀಶ್ ಅವರನ್ನು ನಗರದ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲ ಕಾಲ ಚಿಕಿತ್ಸೆ ನೀಡುತ್ತಿರುವಾಗಲೇ ಚಿಕಿತ್ಸೆ ಫಲಕಾರಿಯಾಗದೇ ಹರೀಶ್ ಹೋಲಿಗ್ರಾಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇನ್ನೂ ತಂದೆ ಹರೀಶ್ ಮೃತಪಟ್ಟ ಸುದ್ದಿಯನ್ನು ಪಿಯುಸಿ ಓದುತ್ತಿರುವ ಮಗ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಪತಿ ಮೃತ ಪಟ್ಟ ಸುದ್ದಿ ಕೇಳಿ ಪತ್ನಿ ಸೌಮ್ಯ ಕೂಡ ವಿಷಯ ತಿಳಿದ ಹತ್ತೇ ನಿಮಿಷದಲ್ಲಿ  ಹೃದಯಾಘಾತಕ್ಕೊಳಗಾಗಿ ಮನೆಯಲ್ಲಿ ಮೃತಪಟ್ಟಿದ್ದಾರೆ. ಹರೀಶ್ ಹಾಗೂ ಸೌಮ್ಯಾ ದಂಪತಿಗೆ ಕೋವಿಡ್ ಸೋಂಕು ಇರಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಪ್ಪ-ಅಮ್ಮನನ್ನು ಕಳೆದುಕೊಂಡ ಮಗ ಹಾಗೂ ಸಂಬಂಧಿಕರ ನೋವು ನೋಡುಗರ ಕಣ್ಣಲ್ಲೂ ನೀರು ತರಿಸುವಂತಿತ್ತು.

ಇದನ್ನು ಓದಿ: ರಾಜ್ಯದ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಜತೆಗೆ 6 ವೆಂಟಿಲೇಟರ್ ಬೆಡ್ ಅಳವಡಿಕೆ; ಸಚಿವ ಕೆ. ಸುಧಾಕರ್

ಹಳ್ಳಿ-ಹಳ್ಳಿಗೂ ವ್ಯಾಪಿಸಿದ ಹೆಮ್ಮಾರಿ ಕೊರೋನಾ ಸೋಂಕು

ತೋಟದಲ್ಲಿ ಕೂಲಿ ಕೆಲಸ ಮಾಡುವ 19 ಕುಟುಂಬಗಳ 28 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಇಡೀ ಒಂದು ಹಳ್ಳಿಯೇ ಆತಂಕಕ್ಕೀಡಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಉಳುವಾಗಿಲು ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಭೇಟಿ ನೀಡಿರುವ ತಹಸೀಲ್ದಾರ್ ಕಾಂತರಾಜು ನೇತೃತ್ವದ ತಂಡ ಗ್ರಾಮಸ್ಥರಿಗೆ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿದೆ. ಪಾಸಿಟಿವ್ ಬಂದಿರುವ 20 ಕುಟುಂಬಗಳಿಗೂ ತಿಂಗಳಿಗೆ ಆಗುವಷ್ಟು ರೇಷನ್ ನೀಡಿ 15 ದಿನಗಳ ಕಾಲ ಯಾರೂ ಮನೆಯಿಂದ ಹೊರಬಾರದಂತೆ ಸೂಚನೆ ನೀಡಿದ್ದಾರೆ.
Youtube Video

ಒಂದೇ ಹಳ್ಳಿಯ 28 ಜನರಿಗೆ ಕೊರೋನಾ ಪಾಸಿಟಿವ್ ಬಂದಿರೋ ಹಿನ್ನೆಲೆ ಅಧಿಕಾರಿಗಳು ಮೈಕ್‍ನಲ್ಲಿ ಊರಿನ ಜನ ಸ್ವಯಂ ಪ್ರೇರಿತರಾಗಿ ಕೋವಿಡ್ ಟೆಸ್ಟ್​ಗೆ ಒಳಪಡುವಂತೆ ಸೂಚಿಸಿದ್ದಾರೆ. ಆರೋಗ್ಯ ಸಿಬ್ಬಂದಿಗಳು ಪ್ರತಿ ದಿನ ಹಳ್ಳಿಗೆ ಭೇಟಿ ನೀಡಿ ಹಳ್ಳಿಗರ ಆರೋಗ್ಯದ ಬಗ್ಗೆ ನಿಗಾ ವಹಿಸುವಂತೆ ಸೂಚಿಸಿದ್ದಾರೆ. ಕೂಲಿ ಕಾರ್ಮಿಕರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದರಿಂದ ತೋಟದ ಕೆಲಸಕ್ಕೆ ಹೋಗುತ್ತಿದ್ದ, ಹೋಗಿದ್ದ ಅಕ್ಕಪಕ್ಕದ ಹಳ್ಳಿಗರಲ್ಲೂ ಆತಂಕ ಮನೆ ಮಾಡಿದೆ. ಹೆಮ್ಮಾರಿ ಕೊರೋನಾ ಮಲೆನಾಡು ಭಾಗದಲ್ಲಿ ಹೆಚ್ಚಾಗಿ ವ್ಯಾಪಿಸಿದ್ಯಾ ಎಂಬ ಅನುಮಾನ ಉಂಟಾಗಿದೆ. ಮೂರು ದಿನಗಳ ಹಿಂದಷ್ಟೆ ತಾಲೂಕಿನ ಹಾರ್ಜಿಹಳ್ಳಿ ಗ್ರಾಮದಲ್ಲೂ ಕೂಡ 31 ಕೂಲಿ ಕಾರ್ಮಿಕರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು.
Published by: HR Ramesh
First published: May 12, 2021, 7:02 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories