ಯಾದಗಿರಿ ರೈತರ ಗಾಯಕ್ಕೆ ಬರೆ ಎಳೆದ ಬಿರುಗಾಳಿ ಸಹಿತ ಮಳೆ; ಭತ್ತದ ಬೆಳೆ ಸಂಪೂರ್ಣ ನಾಶ
ಇದೇ ತಿಂಗಳ 7ರಂದು ಬಿರುಗಾಳಿ ಸಹಿತ ಮಳೆಗೆ ಕೂಡ ಬೆಳೆ ಹಾನಿಯಾಗಿತ್ತು ಈಗ ಮತ್ತೆ ನಿನ್ನೆ ಸುರಿದ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
news18-kannada Updated:April 22, 2020, 4:28 PM IST

ನಾಶವಾದ ಬೆಳೆ
- News18 Kannada
- Last Updated: April 22, 2020, 4:28 PM IST
ಯಾದಗಿರಿ (ಏ.19): ಒಂದು ಕಡೆ ಸಾಲಗಾರರ ಕಾಟ. ಮತ್ತೊಂದೆಡೆ ಬಿರುಗಾಳಿ ಸಹಿತ ಮಳೆಗೆ ಯಾದಗಿರಿ ಜಿಲ್ಲೆಯ ರೈತರು ಅಕ್ಷರಶಃ ಈಗ ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಶನಿವಾರ ರಾತ್ರಿ ಸುರಿದ ಮಳೆಗೆ ಭತ್ತದ ಬೆಳೆ ಈಗ ಮಣ್ಣು ಪಾಲಾಗಿದೆ. ಯಾದಗಿರಿ ಜಿಲ್ಲೆಯ ಬ್ಬೆತುಮಕೂರ, ಹೆಡಗಿಮುದ್ರಾ, ಠಾಣಾಗುಂದಿ, ನಾಯ್ಕಲ್, ಮನಗನಾಳ, ಐಕೂರ ಮೊದಲಾದ ಕಡೆ ಭತ್ತದ ಬೆಳೆ ಹಾಗೂ ಸಜ್ಜೆ ಬೆಳೆ ನೆಲ ಕಚ್ಚಿದೆ.
ಇದೇ ತಿಂಗಳ 7ರಂದು ಬಿರುಗಾಳಿ ಸಹಿತ ಮಳೆಗೆ ಕೂಡ ಬೆಳೆ ಹಾನಿಯಾಗಿತ್ತು ಈಗ ಮತ್ತೆ ನಿನ್ನೆ ಸುರಿದ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಸಾಲ ಶೂಲ ಮಾಡಿದ ಬೆಳೆದ ಭತ್ತದ ಬೆಳೆ ಹಾನಿಯಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಈ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ಕೂಡ ಇತ್ತೀಚೆಗೆ ಯಾದಗಿರಿಗೆ ಆಗಮಿಸಿ ಸಭೆ ನಡೆಸಿ ಬೆಳೆ ಹಾನಿಯಾದ ಬಗ್ಗೆ ಸಮೀಕ್ಷೆ ನಡೆಸಬೇಕೆಂದು ಸೂಚನೆ ಕೂಡ ನೀಡಿದ್ದಾರೆ. ಸದ್ಯಕ್ಕೆ 3 ಸಾವಿಕ್ಕು ಹೆಚ್ಚು ಎಕರೆ ಪ್ರದೇಶದ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಬೆಳೆ ಹಾನಿಗೊಳಗಾದ ರೈತ ಮಹೇಶಗೌಡ ಮಾಲಿಪಾಟೀಲ ನ್ಯೂಸ್ 18 ಕನ್ನಡದ ಜೊತೆ ಮಾತನಾಡಿ, “ಸುಮಾರು 18 ಲಕ್ಷ ರೂ. ಖರ್ಚು ಮಾಡಿ 40 ಎಕರೆ ಪ್ರದೇಶದಲ್ಲಿ ಭತ್ತದ ಬೆಳೆ ಹಾನಿಯಾಗಿದೆ ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕೆಂದು,” ನೋವು ತೊಡಿಕೊಂಡರು. ಇನ್ನೇನು ಭತ್ತ ಕಟಾವು ಮಾಡಿ ಭತ್ತ ರಾಶಿ ಮಾಡಬೇಕೆನ್ನುವಷ್ಟರಲ್ಲಿಯೇ ಭತ್ತದ ಗದ್ದೆ ಹಾಳಾಗಿದೆ.
ಇದನ್ನೂ ಓದಿ: ಕೊರೋನಾ ಕ್ರಮದ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗ; ವರದಿಯಲ್ಲೇನಿದೆ?
ಈ ಬಗ್ಗೆ ನ್ಯೂಸ್ 18 ಕನ್ನಡದ ಜೊತೆ ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೇವಿಕಾ ಅವರು ಮಾತನಾಡಿ, ಬೆಳೆ ಹಾನಿಯಾದ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದರು. ಸರ್ಕಾರ ಸಮೀಕ್ಷೆ ಪೂರ್ಣಗೊಳಿಸಿ ಬೆಳೆ ಹಾನಿಯಾದ ಅನ್ನದಾತರಿಗೆ ಹೆಚ್ಚಿನ ಪರಿಹಾರ ಕಲ್ಪಿಸಿ ಅನ್ನದಾತರ ಜೀವ ಉಳಿಸುವ ಕಾರ್ಯ ಮಾಡಬೇಕಿದೆ.
(ವರದಿ: ನಾಗಪ್ಪ ಮಾಲಿಪಾಟೀಲ)
ಇದೇ ತಿಂಗಳ 7ರಂದು ಬಿರುಗಾಳಿ ಸಹಿತ ಮಳೆಗೆ ಕೂಡ ಬೆಳೆ ಹಾನಿಯಾಗಿತ್ತು ಈಗ ಮತ್ತೆ ನಿನ್ನೆ ಸುರಿದ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಸಾಲ ಶೂಲ ಮಾಡಿದ ಬೆಳೆದ ಭತ್ತದ ಬೆಳೆ ಹಾನಿಯಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ.