• ಹೋಂ
 • »
 • ನ್ಯೂಸ್
 • »
 • Crime
 • »
 • Bengaluru: ಸಾರ್ವಜನಿಕರ ಎದುರೇ ರೌಡಿಶೀಟರ್​ ಲೊಡ್ಡೆ ಪ್ರವೀಣನ ಮೇಲೆ ಡೆಡ್ಲಿ ಅಟ್ಯಾಕ್​​

Bengaluru: ಸಾರ್ವಜನಿಕರ ಎದುರೇ ರೌಡಿಶೀಟರ್​ ಲೊಡ್ಡೆ ಪ್ರವೀಣನ ಮೇಲೆ ಡೆಡ್ಲಿ ಅಟ್ಯಾಕ್​​

ರೌಡಿಶೀಟರ್ ಲೊಡ್ಡೆ ಪ್ರವೀಣ

ರೌಡಿಶೀಟರ್ ಲೊಡ್ಡೆ ಪ್ರವೀಣ

ರೌಡಿಶೀಟರ್ ಲೊಡ್ಡೆ ಪ್ರವೀಣ ಮೇಲೆ ಹಲ್ಲೆ ಮಾಡಿರುವ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಕೆಂಪೇಗೌಡ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

 • News18 Kannada
 • 3-MIN READ
 • Last Updated :
 • Bangalore [Bangalore], India
 • Share this:

ಬೆಂಗಳೂರು: ಸಾರ್ವಜನಿಕರ ಎದುರಲ್ಲೇ ರೌಡಿಶೀಟರ್ (Rowdy Sheeter) ಲೊಡ್ಡೆ ಪ್ರವೀಣನ ಮೇಲೆ ಸಿನಿಮೀಯ ರೀತಿಯಲ್ಲಿ (Filmy Style) ಹಲ್ಲೆ ನಡೆಸಿ ಕೊಲೆಗೆ ಮಾಡಲು ಮುಂದಾದ ಘಟನೆ ಚಾಮರಾಜಪೇಟೆಯ (Chamrajpet) ಧೋಬಿ ಘಾಟ್​​ (Dhobi Ghat ) ಬಳಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಲೊಡ್ಡೆ ಪ್ರವೀಣ ಕೆಜಿ ನಗರದ (KG Nagar) ರೌಡಿಶೀಟರ್​ ಆಗಿದ್ದಾನೆ. ಈತನ ಮೇಲೆ ಸುಮಾರು ಆರು ಮಂದಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಲೊಡ್ಡೆ ಪ್ರವೀಣ ಗಾಯಗೊಂಡಿದ್ದು, ಆತನಿಗೆ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಕೊಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹಣಕಾಸು ವಿಚಾರಕ್ಕೆ (Finance Matter) ಅಟ್ಯಾಕ್ ಮಾಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.


ರೌಡಿಶೀಟರ್ ಲೊಡ್ಡೆ ಪ್ರವೀಣ ಮೇಲೆ ಹಲ್ಲೆ ಮಾಡಿರುವ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಕೆಂಪೇಗೌಡ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


ಇದನ್ನೂ ಓದಿ: Bengaluru: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್​ಗೆ ED ಶಾಕ್; ₹114 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು


ಘಟನೆ ಬಗ್ಗೆ ಮಾಹಿತಿ ನೀಡಿರುವ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಅವರು, ಪ್ರವೀಣ್ ಹಾಗೂ ಸ್ವಾಮಿ ಮೇಲೆ ಹಲ್ಲೆ ಮಾಡಿದ್ದಾರೆ. ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಪ್ರವೀಣ್ ಮೇಲೆ ಕೊಲೆ ಸೇರಿ ಹಲವು ಪ್ರಕರಣಗಳಿವೆ. ಸದ್ಯ ಆರೋಪಿಗಳನ್ನ ಪತ್ತೆ ಹಚ್ಚುವ ಕಾರ್ಯದಲ್ಲಿದ್ದೇವೆ. 6 ಜನ ಬೈಕ್ ನಲ್ಲಿ ಬಂದು ಹಲ್ಲೆ ಮಾಡಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಆರೋಪಿಗಳ ಹುಡುಕಾಟ ಮುಂದುವರೆಸಿದ್ದೇವೆ ಎಂದು ತಿಳಿಸಿದ್ದಾರೆ.


ಮಾದಕ ವಸ್ತು ಮಾರಾಟ ಮಾಡ್ತಿದ್ದ ನೈಜೀರಿಯಾ ಪ್ರಜೆ ಬಂಧನ


ಮಾದಕ ವಸ್ತು ಮಾರಾಟ ಮಾಡಲು ಬಂದಿದ್ದ ವೇಳೆ ನೈಜೀರಿಯಾ ಪ್ರಜೆಯನ್ನು ಜಯನಗರ ಪೊಲೀಸರು ಬಂಧನ ಮಾಡಿದ್ದಾರೆ. ಬಂಧಿತನನ್ನು ಇನಾಜಿ ಎಮುಲ್ಲಾ ಎಂದು ಗುರುತಿಸಲಾಗಿದೆ. ಆರೋಪಿ ಜಯನಗರದ ಪಾರ್ಕ್ ಬಳಿ ಮಾದಕ ವಸ್ತು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ.
ಇದನ್ನೂ ಓದಿ: Hassan: ಹಿಂದೂ ಸಂಘಟನೆಗಳ ಪ್ರತಿಭಟನೆಯಲ್ಲಿ ಕುರಾನ್ ಜಿಂದಾಬಾದ್ ಎಂದು ಕೂಗಿದ ಮುಸ್ಲಿಂ ಯುವಕ

top videos


  ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದು, 300 ಗ್ರಾಂ ಎಂಡಿಎಂಎ ವಶಕ್ಕೆ ಪಡೆದುಕೊಂಡಿದ್ದಾರೆ. ಡಿಯೋ ಬೈಕ್ ಆರೋಪಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ. ಪಾಸ್ ಪೋರ್ಟ್, ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಆರೋಪಿ ದೇಶದಲ್ಲಿ ಉಳಿದುಕೊಂಡು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  First published: