• ಹೋಂ
  • »
  • ನ್ಯೂಸ್
  • »
  • Crime
  • »
  • Bengaluru: ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರು, ಬೆತ್ತಲೆಯಾಗಿ ಮಹಡಿಯಿಂದ ಬಿದ್ದ ವ್ಯಕ್ತಿ ಸಾವು

Bengaluru: ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರು, ಬೆತ್ತಲೆಯಾಗಿ ಮಹಡಿಯಿಂದ ಬಿದ್ದ ವ್ಯಕ್ತಿ ಸಾವು

ಮೃತ ಮೊಹಮ್ಮದ್  ಹುಸೇನ್

ಮೃತ ಮೊಹಮ್ಮದ್ ಹುಸೇನ್

ಪ್ರಕರಣವೊಂದರಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲು ಪೊಲೀಸರು ತೆರಳಿದ ಸಂದರ್ಭದಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಆತ ಸಾವನ್ನಪ್ಪಿದ್ದಾನೆ.

  • News18 Kannada
  • 4-MIN READ
  • Last Updated :
  • Bangalore [Bangalore], India
  • Share this:

ಬೆಂಗಳೂರು: ಪೊಲೀಸರು (Police) ವಶಕ್ಕೆ ಪಡೆಯಲು ತೆರಳಿದ್ದ ವೇಳೆ ವ್ಯಕ್ತಿಯೊಬ್ಬ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. 4ನೇ ಮಹಡಿಯಿಂದ ಜಿಗಿದು 31 ವರ್ಷದ ಮೊಹಮ್ಮದ್ ಹುಸೇನ್ ಸಾವನ್ನಪ್ಪಿದ್ದಾನೆ. ಬೊಮ್ಮನಹಳ್ಳಿ (Bommana Halli) ಬೇಗೂರು ರಸ್ತೆಯಲ್ಲಿ (Begur Road) ನಡೆದಿದೆ. ಮಹಮ್ಮದ್ ಹುಸೇನ್​ನನ್ನು ವಶಕ್ಕೆ ಪಡೆಯಲು ನಾಲ್ವರು ಪೊಲೀಸರ ತಂಡ ತೆರಳಿತ್ತು. ನಾಲ್ಕನೇ ಮಹಡಿಯ ಟೆರೇಸ್ ಮೇಲಿಂದ ವಶಕ್ಕೆ ಪಡೆಯುತ್ತಿದ್ದ ವೇಳೆ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ. ಹುಸೇನ್ ಬೆತ್ತಲೆಯಾಗಿ ಬಿದ್ದಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ (MLA Satish Reddy) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಪ್ರಕರಣದ ಸಂಬಂಧ ಪ್ರತಿಕ್ರಿಯೆ ನೀಡಿರುವ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ, ಮಹಡಿ ಮೇಲಿಂದ ಬಿದ್ದ ಮೊಹಮ್ಮದ್ ಹುಸೇನ್ ನನಗೆ ತಿಳಿದಿರುವವನೇ. ನನ್ನ ಫ್ರೆಂಡ್ ಮಗ ಈತ, ನಾನು ಆಸ್ಪತ್ರೆಗೆ ಭೇಟಿ ನೀಡಿದ್ದೀನಿ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಾಳೆ ಮ್ಯಾಜಿಸ್ಟ್ರೇಟ್ ಕೋರ್ಟ್ ಒಪ್ಪಿಗೆ ಪಡೆದು ಮರಣೋತ್ತರ ಪರೀಕ್ಷೆ ನಡೆಸುತ್ತಾರೆ ಎಂದು ತಿಳಿಸಿದ್ದಾರೆ.




ಇದನ್ನೂ ಓದಿ: Bengaluru: ಲಂಚ ಪಡೆಯುತ್ತಿದ್ದ ವೇಳೆ ರೆಡ್​ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಪಿಎಸ್​​ಐ; ಮೂವರು ಅರೆಸ್ಟ್​​


ಬೈಕ್ ಸವಾರನ ಮೇಲೆ ಬಿದ್ದ ಮರದ ರೆಂಬೆ


ಕಳೆದ ಕೆಲ ದಿನಗಳಿಂದ ಸಿಲಿಕಾನ್ ಸಿಟಿಯಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಒಂದಲ್ಲ‌ ಒಂದು ಅವಾಂತರ ಮಾಡುತ್ತಿದ್ದಾನೆ. ಆದರೆ ಮಳೆಯ ಎಫೆಕ್ಟ್ ಮಾತ್ರ ಮುಂದುವರಿತಾನೇ ಇದೆ. ಚಲಿಸ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಬೈಕ್ ಸವಾರ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.

top videos


    ನಿನ್ನೆ ಶ್ರೀಧರ್ ಎಂಬುವವರು ಜೆಪಿ ನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿರುವವಾಗ ಅವಘಡ ನಡೆದಿದೆ. ಘಟನೆಯಲ್ಲಿ ಶ್ರೀಧರ್ ಕಾಲು ಮುರಿದು ತಲೆಗೆ ಗಂಭೀರ ಗಾಯವಾಗಿದೆ. ಬಿಬಿಎಂಪಿ ಮರಗಳ ನಿರ್ವಹಣೆ ಬಗ್ಗೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಸರ್ಕಾರ ನೆರವಿಗೆ ಧಾವಿಸುವಂತೆ ಮನವಿ ಮಾಡುತ್ತಿದ್ದಾರೆ. ಜೆ.ಪಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಧರ್ ಗೆ ಚಿಕಿತ್ಸೆ ನೀಡಲಾಗುತ್ತಿದೆ.

    First published: