ದಾವಣಗೆರೆ: ಎರಡು ಕುಟುಂಬಗಳ (Family) ನಡುವಿನ ಜಗಳದಲ್ಲಿ (Fight) ತಮ್ಮನೇ ಸಹೋರಿಯನ್ನು (Sister) ಕೊಲೆ ಮಾಡಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳೆಹಳ್ಳಿ ನಡೆದಿದೆ. ಆಸ್ತಿ ವಿಚಾರವಾಗಿ ಅಕ್ಕನನ್ನೇ ತಮ್ಮ (Brother) ಕೊಲೆಗೈದಿದ್ದು, ಮೃತ ಮಹಿಳೆಯನ್ನು (Woman) 68 ವರ್ಷದ ಅಕ್ಕಮಹಾದೇವಿ ಎಂದು ಗುರುತಿಸಲಾಗಿದೆ. ಪ್ರಭಾಕರ್ (65) ಸಹೋದರಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ.
ಎರಡು ಕುಟುಂಬಗಳ ನಡುವೆ ಕಳೆದ 15 ವರ್ಷಗಳಿಂದ ಜಮೀನಿನ ವಿಚಾರಕ್ಕಾಗಿ ಇಬ್ಬರ ನಡುವೆ ಗಲಾಟೆ ನಡೆಯುತಿತ್ತಂತೆ. ಆದರೆ ನಿನ್ನೆ ಕೋರ್ಟ್ ಆದೇಶದಂತೆ ಜಮೀನು ಅಳತೆಗೆ ಅಧಿಕಾರಿಗಳು ಬಂದ ಸಂದರ್ಭದಲ್ಲಿ ರೊಚ್ಚಿಗೆದ್ದ ತಮ್ಮ ಪ್ರಭಾಕರ್ ದೊಣ್ಣೆಯಿಂದ ಅಕ್ಕನ ಮೇಲೆ ಹಲ್ಲೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲೇ ಕುಸಿದು ಬಿದ್ದು ಅಕ್ಕಮಹಾದೇವಿ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಆರೋಪಿ ಪ್ರಭಾಕರ್, ಪೊಲೀಸ್ ಠಾಣೆಗೆ ಬಂದು ತಪ್ಪೊಪ್ಪಿಕೊಂಡ ಶರಣಾಗಿದ್ದಾನೆ. ಘಟನೆ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮಂಡ್ಯ : ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವು
ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಟಿ.ಎಸ್.ಛತ್ರದ ಗ್ರಾಮದ ರಾಜು ಮೃತ ವ್ಯಕ್ತಿ.
ಮಾವಿನಕಾಯಿ ಕೀಳಲು ರಾಜು ಮರ ಏರಿದ್ದರು. ಈ ವೇಳೆ ವಿದ್ಯುತ್ ತಗುಲಿದ್ದರಿಂದ ರಾಜು ಮೃತರಾಗಿದ್ದಾರೆ. ಘಟನಾ ಸ್ಥಳಕ್ಕೆ ಸೆಸ್ಕಾಂ ಅಧಿಕಾರಿಗಳು ಮತ್ತು ಪೊಲೀಸರು ಭೇಟಿ ನೀಡಿದ್ದಾರೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ನೇಣು ಬಿಗಿದುಕೊಂಡು ಹೆಡ್ ಕಾನ್ಸಟೇಬಲ್ ಆತ್ಮಹತ್ಯೆ
ನೇಣು ಬಿಗಿದುಕೊಂಡು ಹೆಡ್ ಕಾನ್ಸ್ಟೇವಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದ ಡಿಎಆರ್ ಹೆಡ್ ಕ್ವಾರ್ಟರ್ಸ್ ನಲ್ಲಿ ನಡೆದಿದೆ. ಪಾಂಡುರಂಗ (47) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಕಾನ್ಸ್ಟೇವಲ್ ಆಗಿದ್ದು, ಮೃತ ಪಾಂಡುರಂಗ ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಚಿಮ್ಮನಚೋಡ್ ಗ್ರಾಮದ ನಿವಾಸಿಯಾಗಿದ್ದರು.
ನಿನ್ನೆ ರಾತ್ರಿ 10 ಗಂಟೆಗೆ ಕೆಲಸ ಮುಗಿಸಿ ಮನೆಗೆ ತೆರಳಿದ್ದ ಪಾಂಡುರಂಗ ಪತ್ನಿಯೊಂದಿಗೆ ರೂಮ್ನಲ್ಲಿ ಮಲಗಿದ್ದರಂತೆ. ಬೇಸಿಗೆಯ ಕಾರಣ ಅವರ ಇಬ್ಬರು ಮಕ್ಕಳು ಮನೆಯ ಮೇಲ್ಚಾವಣಿಗೆ ತೆರಳಿ ಮಲಗಿಕೊಂಡಿದ್ದಾರೆ. ಬೆಳಗ್ಗೆ ಎದ್ದು ನೋಡಿದರೆ ಪಾಂಡುರಂಗ ಅವರು ಮನೆಯ ಅಡುಗೆ ಕೊಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನೆ ಸಂಬಂಧ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ