ಮೈಸೂರು: ವಂಚನೆ, ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳ ಆರೋಪಿ ಕೆ.ಎಸ್. ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿಯನ್ನು (Santro Ravi) ಸಿಐಡಿ ಕಸ್ಟಡಿಗೆ ಒಪ್ಪಿಸಿ ಮೈಸೂರಿನ 6ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಆದೇಶಿಸಿದೆ. ಕರ್ನಾಟಕ ಸರ್ಕಾರ (Karnataka Government) ಪ್ರಕರಣವನ್ನು ಸಿಐಡಿಗೆ (CID) ಒಪ್ಪಿಸಿರುವುದರಿಂದ ಸ್ಯಾಂಟ್ರೋ ರವಿಯನ್ನು ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಹಾಗಾಗಿ ನ್ಯಾಯಾಲಯವು ಮಂಗಳವಾರ ಆರೋಪಿ ಸ್ಯಾಂಟ್ರೋ ರವಿಯನ್ನು ಜನವರಿ 30ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಈ ಮೊದಲು ರವಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದ ವೇಳೆ ಪೊಲೀಸರು 15 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮಾಡಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿ ನ್ಯಾಯಾಂಗ ಬಂಧನಕ್ಕೆ (Judicial Custody) ಆದೇಶಿಸಿತ್ತು. ಇದೀಗ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿರುವುದರಿಂದ ನ್ಯಾಯಾಲಯವು ಒಪ್ಪಿಗೆ ಸಿಐಡಿ ಕಸ್ಟಡಿಗೆ ನೀಡಲು ಆದೇಶಿಸಿದೆ.
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್. ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯ ಹೊಣೆಯನ್ನುಸಿಐಡಿ ಕೈಗೆತ್ತಿಕೊಂಡಿದೆ. ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಬಂದಿದ್ದು, ಪ್ರಾಥಮಿಕ ಮಾಹಿತಿ ಕಲೆ ಹಾಕಿದೆ. ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ನೇತೃತ್ವದ ತಂಡ ಸೋಮವಾರ ಸಂಜೆ ನಗರಕ್ಕೆ ಆಗಮಿಸಿ ಮೈಸೂರಿನ ವಿಜಯನಗರ ಉಪವಿಭಾಗದ ಎಸಿಪಿ ಶಿವಶಂಕರ್ರಿಂದ ಮಾಹಿತಿ ಸಂಗ್ರಹಿಸಿದೆ.
ಇದನ್ನೂ ಓದಿ: Santro Ravi: ಸಿಐಡಿ ಹೆಗಲಿಗೆ ಸ್ಯಾಂಟ್ರೋ ರವಿ ಪ್ರಕರಣ; ಕೇಸ್ ವರ್ಗಾಯಿಸುವಂತೆ ಸರ್ಕಾರ ನಿರ್ದೇಶನ, ರವಿಗೆ ಜೈಲೇ ಗತಿ
ಹಲವು ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದ್ದು, ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಆಗಮಿಸಿ ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದೆ. ಸಿಐಡಿ ಡಿವೈಎಸ್ಪಿ ನರಸಿಂಹಮೂರ್ತಿ ನೇತೃತ್ವದ ತಂಡ ಸೋಮವಾರ ಸಂಜೆ ನಗರಕ್ಕೆ ಆಗಮಿಸಿ ಮೈಸೂರಿನ ವಿಜಯನಗರ ಉಪವಿಭಾಗದ ಎಸಿಪಿ ಶಿವಶಂಕರ್ರಿಂದ ಮಾಹಿತಿ ಸಂಗ್ರಹಿಸಿದೆ.
ಪಾರದರ್ಶಕ ತನಖೆಗಾಗಿ ಸಿಐಡಿಗೆ ಪ್ರಕರಣ
ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿ ವಹಿಸಿರುವ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ " ಸ್ಯಾಂಟ್ರೋ ರವಿ ಪ್ರಕರಣವನ್ನು ಮೈಸೂರು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಆದರೆ ತನಿಖೆ ಪಾರದರ್ಶಕವಾಗಿ ನಡಿಬೇಕು. ಯಾವುದೇ ಒತ್ತಡ ಇರಬಾರದು. ಹೀಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸುವ ನಿರ್ಣಯ ತೆಗೆದುಕೊಂಡಿದ್ದೇನೆ.
ಸಿಐಡಿ ಪಿಎಸ್ಐ ಹಗರಣ ತನಿಖೆ ಮಾಡಿದ್ದರು, ಈ ಪ್ರಕರಣದ ತನಿಖೆಯನ್ನು ತನಿಖೆ ಮಾಡಲು ಅವರಿಗೆ ವಹಿಸಿದ್ದೇವೆ. ತನಿಖೆ ಉತ್ತಮ ರೀತಿಯಲ್ಲಿ ಆಗಬೇಕು, ಆರೋಪಿಗೆ ಶಿಕ್ಷೆ ಆಗಬೇಕು ಎಂಬ ಬದ್ಧತೆಯಿಂದ ತನಿಖೆ ನಡೆಯಬೇಕು. ಅವನ ಮೇಲೆ ಅತ್ಯಾಚಾರ, ಕೊಲೆ ಬೆದರಿಕೆ, ಹಲ್ಲೆ, ವರದಕ್ಷಿಣೆ ಕಿರುಕುಳ ಪ್ರಕರಣಗಳಿದ್ದು ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ಸಿಐಡಿಗೆ ಒಪ್ಪಿಸುವಷ್ಟು ಗಂಭೀರತೆ ಇತ್ತಾ?
ಈ ಪ್ರಕರಣವನ್ನು ಸಿಐಡಿಗೆ ವಹಿಸುವಂತಹ ಗಂಭೀರವಾದ ಕೇಸ್ ಆಗಿತ್ತಾ ಎಂದು ಪ್ರಶ್ನಿಸಿದ್ದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಗಂಭೀರ ಕೇಸ್ ಅಂತಾ ಅಲ್ಲ, ಸಾರ್ವಜನಿಕವಾಗಿ ಚರ್ಚೆ ಆಗಿರುವ ಪ್ರಕರಣವಾಗಿರುವ ಕಾರಣ ಪಾರದರ್ಶಕವಾಗಿ ತನಿಖೆಯಾಗಿ, ಮುಖವಾಡ ಕಳಚಿ ಹೊರಗೆ ತರಬೇಕು. ಕಳೆದ 20 ವರ್ಷಗಳಲ್ಲಿ ರವಿ ಯಾರೆಲ್ಲ ಜೊತೆಗೆ ಸಂಬಂಧ ಇಟ್ಟುಕೊಂಡಿದ್ದ?, ಏನಾಗಿದೆ ಎಂಬುದು ತನಿಖೆಯಿಂದ ಹೊರಬರಬೇಕು. ಹೀಗಾಗಿ ಸಿಐಡಿಗೆ ತನಿಖೆಗೆ ಒಪ್ಪಿಸಿದ್ದೇನೆ. ತನಿಖೆ ಮಾಡಿಸಿದ್ರು ಕಷ್ಟ, ತನಿಖೆ ಮಾಡಸಿದಿದ್ದರೂ ಕಷ್ಟ, ಹೀಗೆ ಹೇಳಿದ್ರೆ ಏನು ಮಾಡೋಕೆ ಆಗಲ್ಲ. ಸರ್ಕಾರ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ. ಏನ್ ದಾಖಲಾತಿದೆ, ಅದನ್ನು ವಿಸ್ತರಿಸಿಕೊಂಡು ಹೋಗಿದ್ದೇವೆ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಸ್ಯಾಂಟ್ರೋ ರವಿ ಮೇಲೆ ಮತ್ತೊಂದು ಪ್ರಕರಣ
ಸ್ಯಾಂಟ್ರೊ ರವಿ ವಿರುದ್ಧ ಪರಿಶಿಷ್ಟ ಮಹಿಳೆ ಮೇಲಿನ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ಗೂಂಡಾಗಿರಿ ಆರೋಪದ ಮೇಲೆ ಮೈಸೂರಿನ ವಿಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ಆತನ ಪತ್ನಿ ಎನ್ನಲಾದ ಮಹಿಳೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ರವಿ ಸೇರಿ ಇಬ್ಬರ ವಿರುದ್ಧ ಮತ್ತೊಂದು ದೂರು ನೀಡಿದ್ದಾರೆ. 2022ರ ಸೆಪ್ಟೆಂಬರ್ 22ರಂದು ನಾನು ದೇವರಾಜ ಮಾರುಕಟ್ಟೆಗೆ ಹೋಗಿದ್ದ. ಈ ವೇಳೆ ನನ್ನ ಸ್ಕೂಟರ್ಗೆ ಡಿಕ್ಕಿ ಹೊಡೆದ ಸ್ಯಾಂಟ್ರೋ ರವಿ ಹಾಗೂ ಪ್ರಕಾಶ್ ಎಂಬುವವರು, ಸ್ಕೂಟರ್ ಡಿಕ್ಕಿಯಲ್ಲಿ ಇಟ್ಟಿದ್ದ ಚೆಕ್ಬುಕ್ ಕಳವು ಮಾಡಿದ್ದಾರೆ. ಇದರಲ್ಲಿ ನಾನು ಸಹಿ ಮಾಡಿಟ್ಟಿದ್ದ 2 ಎರದು ಚೆಕ್ಗಳನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಮತ್ತೆರಡನ್ನು ಹಾಗೆ ಇಟ್ಟುಕೊಂಡಿದ್ದಾರೆ. ಸೆಪ್ಟೆಂಬರ್ 24ರಂದೂ ಚೆಕ್ ಬುಕ್ ಕಳವು ಪ್ರಕರಣವನ್ನು ದಾಖಲಿಸಿದ್ದೇನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ