ರಾಮನಗರ: ಪ್ರೀತಿಗೆ (Love) ಪೋಷಕರು (Parents) ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರೇಮಿಗಳು (Lovers) ರಾಮದೇವರ ಬೆಟ್ಟದ (Ramadevara Betta ) ಬಂಡೆ ಮೇಲಿಂದ ಕೆಳಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಯುವಕನ (Young Man) ಸ್ಥಿತಿ ಗಂಭೀರವಾಗಿದ್ದು, ಯುವತಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಮದೇವರ ಬೆಟ್ಟದ ನಿರ್ಜನ ಪ್ರದೇಶಕ್ಕೆ ಬಂದಿರುವ ಪ್ರೇಮಿಗಳು ದೊಡ್ಡ ಬಂಡೆಯೊಂದರ ಮೇಲಿನಿಂದ ಹಳಕ್ಕೆ ಹಾಕಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನು, ಆತ್ಮಹತ್ಯೆಗೆ ಯತ್ನಿಸಿದ ಇಬ್ಬರು ಪ್ರೇಮಿಗಳು ಬೆಂಗಳೂರಿನ (Bengaluru) ಕತ್ತರಿಗುಪ್ಪೆ ನಿವಾಸಿಗಳು ಎಂಬ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆಗೂ ಮುನ್ನ ಮನೆಗೆ ಫೋನ್ (Phone) ಮಾಡಿರುವ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗುವುದಾಗಿ ಹೇಳಿದ್ದರು ಎನ್ನಲಾಗಿದೆ.
ಗಾಯಗೊಂಡಿರುವ ಯುವಕ-ಯುವತಿಯನ್ನು ಸ್ಥಳೀಯರು ನಿವಾಸಿಗಳು ರಕ್ಷಣೆ ಮಾಡಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದರು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಪ್ರೇಮಿಗಳಿಬ್ಬರು ಪ್ರಥಮ ವರ್ಷದ ಬಿ.ಎ ವ್ಯಾಸಂಗ ಮಾಡುತ್ತಿದ್ದರು. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಹಿತ್ಯ (19), ಚೇತನ್(19) ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಿಗಳಾಗಿದ್ದಾರೆ.
ಇದನ್ನೂ ಓದಿ: Karnataka Election: ರಾಜ್ಯದಲ್ಲಿ ಸದ್ದು ಮಾಡ್ತಿದೆ ಝಣ-ಝಣ ಕಾಂಚಾಣ; ಕಾರ್ನಲ್ಲಿತ್ತು ₹ 67 ಲಕ್ಷ ಹಣ, 16 ಕೆಜಿ ಬೆಳ್ಳಿ!
ಅನುಮಾನಸ್ಪದ ರೀತಿಯಲ್ಲಿ ಶವಗಳು ಪತ್ತೆ
ವಿಜಯಪುರದ ರಾಜಧಾನಿ ಹೋಟೆಲ್‌ನಲ್ಲಿ ಅನುಮಾನಸ್ಪದ ರೀತಿಯಲ್ಲಿ ಎರಡು ಶವ ಪತ್ತೆ ಆಗಿವೆ. ಬಳ್ಳಾರಿಯ ಸಿ. ಇಂದ್ರಕುಮಾರ್ ಹಾಗೂ ಮತ್ತೋರ್ವ ರಕ್ತದ ಮಡುವಿನಲ್ಲಿ ಪತ್ತೆ ಆಗಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಪೊಲೀಸ್ ತನಿಖೆ ಬಳಿಕ ತಿಳಿದು ಬರಬೇಕಿದೆ. ವ್ಯಕ್ತಿಯೊಬ್ಬ ತನ್ನ ಜೊತೆಗಿದ್ದ ವ್ಯಕ್ತಿಗೆ ಚಾಕುವಿಂದ ಹತ್ಯೆ ಮಾಡಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಕೃಷ್ಣಪುರ ತಂಡಾ ನಿವಾಸಿ ಸಿ.ಇಂದ್ರಕುಮಾರ ಕೊಲೆಯಾಗಿದ್ದು, ಈತನನ್ನು ಕೊಲೆ ಮಾಡಿದ ಇನ್ನೊಬ್ಬ ವ್ಯಕ್ತಿಯ ಹೆಸರು ತಿಳಿದು ಬಂದಿಲ್ಲ. ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲಾಡ್ಜ್ ರೂಮ್ ನಂಬರ 114 ನಲ್ಲಿ ಎರಡು ಶವಗಳು ಪತ್ತೆಯಾಗಿವೆ.
ಇಂದ್ರಕುಮಾರ ಎಂಬಾತ ಮಾರ್ಚ್ 22ರಂದು ಲಾಡ್ಜ್ ಆಗಮಿಸಿ ಆಧಾರ ಕಾರ್ಡ್ ತೋರಿಸಿ ರೂಮ್ ನಂ 114 ಪಡೆದು ಕೊಂಡಿದ್ದನು. ನಂತರ ಇತನ ರೂಮ್ ಗೆ ಇನ್ನೊಬ್ಬ ವ್ಯಕ್ತಿ ಯಾವಾಗ ಬಂದಿದ್ದಾನೆ ಎನ್ನುವುದು ಸ್ವತಃ ಲಾಡ್ಜ್ ಸಿಬ್ಬಂದಿ ಹಾಗೂ ಮಾಲೀಕರಿಗೂ ಗೊತ್ತಾಗಿಲ್ಲ. ಎರಡು ದಿನ ರೂಮ್ ಬಾಗಿಲು ಸಹ ತೆರೆದಿರಲಿಲ್ಲ.
ಇಂದು ಬೆಳಗ್ಗೆ 10ಗಂಟೆ ಸುಮಾರಿಗೆ ರೂಮ್ ನಿಂದ ಕೆಟ್ಟ ವಾಸನೆ ಬರಲು ಆರಂಭಿಸಿದಾಗ ಲಾಡ್ಜ್ ಸಿಬ್ಬಂದಿ ಮಾಸ್ಟರ್ ಕೀ ಬಳಸಿ ರೂಮ್ ತೆಗೆದಾಗ ಕೊಲೆ ನಡೆದಿರುವದು ಬೆಳಕಿಗೆ ಬಂದಿದೆ. ಇಂದ್ರಕುಮಾರ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ಆತನ ಮೇಲೆ ಕೊಲೆ ಮಾಡಿದ ಇನ್ನೊಬ್ಬ ವ್ಯಕ್ತಿಯ ಶವ ಬಿದ್ದಿರುವದು ಪತ್ತೆಯಾಗಿದೆ.
ಇದರ ಜೊತೆಗೆ ರೂಮ್ನಲ್ಲಿ ಒಂದು ಬೈಕ್ ಕೀ ಪತ್ತೆಯಾಗಿದೆ. ಆ ಬೈಕ್ ವಿಜಯಪುರ ತಾಲೂಕಿನ ಅರಕೇರಿ ನಿವಾಸಿಯೊಬ್ಬರ ಹೆಸರಿನಲ್ಲಿ ರಿಜಿಸ್ಟರ್ ಹೊಂದಿದೆ. ಇಬ್ಬರ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಇದು ಜೋಡಿ ಕೊಲೆಯೋ ಅಥವಾ ಜೋಡಿ ಆತ್ಮಹತ್ಯೆಯೋ ಎನ್ನುವದು ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ. ಸ್ಥಳಕ್ಕೆ ಎಸ್ಪಿ ಆನಂದಕುಮಾರ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ