• ಹೋಂ
 • »
 • ನ್ಯೂಸ್
 • »
 • Crime
 • »
 • Terrible Accident: ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲಿಯೇ 6 ಮಂದಿ ಸಾವು, ₹2 ಲಕ್ಷ ಪರಿಹಾರ ಘೋಷಿಸಿದ ಸಿಎಂ

Terrible Accident: ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲಿಯೇ 6 ಮಂದಿ ಸಾವು, ₹2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಭೀಕರ ರಸ್ತೆ ಅಪಘಾತ

ಭೀಕರ ರಸ್ತೆ ಅಪಘಾತ

ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡೆದಿದೆ.

 • News18 Kannada
 • 3-MIN READ
 • Last Updated :
 • Bangalore [Bangalore], India
 • Share this:

ಕೊಪ್ಪಳ: ಲಾರಿಗೆ ಟಾಟಾ ಇಂಡಿಕಾ‌ (TATA Indica Car) ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡೆದಿದೆ. ಕಾರಿನಲ್ಲಿದ್ದ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ,ರಾಖಿ, ರಶ್ಮೀಕಾ ಎಂದು ಗುರುತಿಸಲಾಗಿದೆ. ವಿಜಯಪುರಿಂದ (Vijayapura) ಬೆಂಗಳೂರಿಗೆ (Bengaluru) ಹೊರಟಿದ್ದ ಕಾರು, ಕಲಕೇರಿ ಬಳಿ ಲಾರಿಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತಕ್ಕೆ ಕಾರಿನ ಟೈರ್ ಬ್ಲಾಸ್ಟ್​ (Tyre Burst) ಆಗಿದ್ದೆ ಕಾರಣ ಎನ್ನಲಾಗಿದ್ದು, ಟೈರ್ ಬ್ಲಾಸ್ಟ್​ ಆಗುತ್ತಿದ್ದಂತೆ ಇನ್ಮೊಂದು ರಸ್ತೆಗೆ ಬಂದ ಕಾರು ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.


ಕಾರಿನಲ್ಲೇ ಆರು ಮೃತದೇಹಗಳು ಸಿಕ್ಕಿ ಹಾಕಿಕೊಂಡಿದ್ದು, ಅಪಘಾತದ ರಭಸಕ್ಕೆ ದೇಹಗಳು ಛಿದ್ರ ಛಿದ್ರವಾಗಿದೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಹೊರಗಡೆ ತೆಗೆಯಲು ಹರಸಾಹಸ ಪಡುವಂತಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಸಿಂಧನೂರು ಮೂಲದವರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Crime News: RTI ಕಾರ್ಯಕರ್ತ ನಿಗೂಢ ಸಾವು! ಪೊಲೀಸರ ಮೇಲೆಯೇ ಕುಟುಂಬಸ್ಥರ ಆರೋಪ


ಭೀಕರ ಅಪಘಾತ ಬಗ್ಗೆ ಸಂತಾಪ ಸೂಚಿಸಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ ಎಂದು ಬರೆದುಕೊಂಡಿದ್ದಾರೆ.ಗೆಳೆಯನನ್ನೇ ಕೊಲೆಗೈದಿದ್ದ ಆರೋಪ ಬಂಧನ


ಚಾಕುವಿನಿಂದ ಇರಿದು ಸ್ನೇಹಿತನ ಕೊಲೆ ಮಾಡಿದ್ದ ಆರೋಪಿಯನ್ನು ಬೆಂಗಳೂರಿನ ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶ ಮೂಲದ ಮನೋಹರ್ ವರ್ಮಾ ಕೊಲೆ ಆರೋಪಿಯಾಗಿದ್ದು, ವಿರೇಂದ್ರಕುಮಾರ್ (29) ಎಂಬಾತನನ್ನು ಬಾಡಿಗೆ ಮನೆಯಲ್ಲಿ ಚಾಕುವಿನಿಂದ ಇರಿದು ಬಳಿಕ ಕಾಲಿನಿಂದ ಕುತ್ತಿಗೆಗೆ ತುಳಿದು ಆರೋಪಿ ಕೊಲೆಗೈದಿದ್ದ.


ಮೇ 27ರ ರಾತ್ರಿ ನಗರದ ಸಾದರಮಂಗಲದ ಬಾಡಿಗೆ ಮನೆಯಲ್ಲಿ ಕೃತ್ಯ ನಡೆದಿತ್ತು. ವೃತ್ತಿಯಲ್ಲಿ ಪೇಂಟರ್ ಆಗಿದ್ದ ವಿರೇಂದ್ರ‌ಕುಮಾರ್ ಕೆಲಸ ಅರಸಿ ಬಂದು ಕಾಡುಗೋಡಿಯಲ್ಲಿ ನೆಲೆಸಿದ್ದ. ಆರೋಪಿ ಬಂಧಿಸಿದ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

First published: