ವಲ್ಲಭಭಾಯಿ ಪಟೇಲರ ಪ್ರತಿಮೆ ನಿರ್ಮಾಣ ಮಾಡಿದ ತಂಡದಿಂದ 108 ‌ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಾಣ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 23 ಎಕರೆ ಪ್ರದೇಶದಲ್ಲಿ 78 ಕೋಟಿ ರೂ. ವೆಚ್ಚದ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ‌ ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿ ಮತ್ತು ಕೆಂಪೇಗೌಡರ ಕಂಚಿನ ಪ್ರತಿಮೆ ಮಾದರಿ ಅನಾವರಣಗೊಳಿಸಲಾಯಿತು.

ಕೆಂಪೇಗೌಡ ಪ್ರತಿಮೆ ಮಾದರಿ ಬಿಡುಗಡೆ ಮಾಡಿದ ಮುಖಂಡರು.

ಕೆಂಪೇಗೌಡ ಪ್ರತಿಮೆ ಮಾದರಿ ಬಿಡುಗಡೆ ಮಾಡಿದ ಮುಖಂಡರು.

  • Share this:
ದೇವನಹಳ್ಳಿ: ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಚಾಲನೆ ನೀಡುವ ಮೂಲಕ ಬೆಂಗಳೂರು ನಗರ ನಿರ್ಮಾತೃ ನಾಡಪ್ರಭು ಕೆಂಪೇಗೌಡರಿಗೆ ಸರ್ಕಾರದ ವತಿಯಿಂದ  ಗೌರವ ಸಲ್ಲಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ 23 ಎಕರೆ ಪ್ರದೇಶದಲ್ಲಿ 78 ಕೋಟಿ ರೂ. ವೆಚ್ಚದ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ‌ ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ ಹಾಗೂ ಸೆಂಟ್ರಲ್ ಪಾರ್ಕ್ ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿ ಮತ್ತು ಕೆಂಪೇಗೌಡರ ಕಂಚಿನ ಪ್ರತಿಮೆ ಮಾದರಿ ಅನಾವರಣಗೊಳಿಸಿದರು. ಸುಮಾರು 35x35 ಅಡಿ ಅಗಲ, 18 ಅಡಿ ಎತ್ತರದ (ಪೆಡಲ್) ಅಡಿ ಪಾಯದ 90 ಎತ್ತರದ ಬೃಹತ್ ಕಂಚಿನ ಪ್ರತಿಮೆ ಅನಾವರಣ ಆಗಲಿದೆ. ಇದಕ್ಕಾಗಿ ಸರ್ದಾರ್ ವಲ್ಲಭಭಾಯಿ ಪಟೇಲರ ಪ್ರತಿಮೆ ನಿರ್ಮಾಣ ಮಾಡಿದ ತಂಡ ಒಂದು ವರ್ಷಗಳ ಕಾಲ ಶ್ರಮಿಸಲಿದೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ಅವರು, ಚತುರ ಆಡಳಿತಗಾರರಾಗಿದ್ದ ಕೆಂಪೇಗೌಡರಿಗೆ ಬೆಂಗಳೂರನ್ನು ಯೋಜನಾ ಬದ್ಧವಾಗಿ ನಿರ್ಮಿಸಿದ ಕೀರ್ತಿ ಸಲ್ಲುತ್ತದೆ. ಶಾಶ್ವತ ನದಿ ಮೂಲಗಳಿಲ್ಲದ ನಗರದಲ್ಲಿ ನೀರಿನ ಸೆಲೆ ಹೆಚ್ಚಿಸಲು ಹಲವು ಕೆರೆಗಳನ್ನು ನಿರ್ಮಿಸಿದ ಖ್ಯಾತಿಯೂ ಅವರಿಗಿದೆ ಎಂದು ಕೆಂಪೇಗೌಡರ ಕೊಡುಗೆ ಸ್ಮರಿಸಿದರು. ಜೊತೆಗೆ ಬೆಂಗಳೂರು ಮಹಾನಗರದಲ್ಲಿ ಮೂಲ ಸೌಕರ್ಯವನ್ನು ಬಲ ಪಡಿಸುವುದರೊಂದಿಗೆ ಆರೋಗ್ಯ, ಘನತ್ಯಾಜ್ಯ ವಿಲೇವಾರಿ, ಇನ್ನಿತರ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದರು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಜಗದ್ಗುರು ಡಾ. ನಿರ್ಮಲಾನಂದನಾಥ‌ ಮಹಾಸ್ವಾಮಿ, ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮಿ, ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿ, ಗುರುಗುಂಡ ಬ್ರಹ್ಮೇಶ್ವರ ಮಠದ ಶ್ರೀ ನಂಜಾವದೂತ ಮಹಾಸ್ವಾಮಿ ಹಾಗೂ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಸೇರಿ ಅನೇಕ ಸಾಧು ಸಂತರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು.

ಇದನ್ನು ಓದಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬಳಿಕ ಅಂತರ್ ಜಿಲ್ಲಾ ಪ್ರಯಾಣ ನಿರ್ಬಂಧ ಸೇರಿ ಹಲವು ಕಠಿಣ ಕ್ರಮ ಜಾರಿ; ಸಚಿವ ಆರ್.ಅಶೋಕ್

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಉಪಸ್ಥಿತಿಯಲ್ಲಿ, ಉಪ ಮುಖ್ಯಮಂತ್ರಿ ಹಾಗೂ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಾ. ಸಿ.ಎನ್.ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿಗಳಾದ ಗೋವಿಂದ.ಎಂ.ಕಾರಜೋಳ, ಲಕ್ಷ್ಮಣ ಸವದಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್, ಸಚಿವರುಗಳಾದ ಕೆ.ಗೋಪಾಲಯ್ಯ, ಬಿ.ಎ ಬಸವರಾಜು(ಬೈರತಿ), ಕೆ.ಸಿ.ನಾರಾಯಣಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್,  ಸಂಸದರಾದ ಬಿ.ಎನ್.ಬಚ್ಚೇಗೌಡ, ಡಿ.ಕೆ.ಸುರೇಶ್, ತೇಜಸ್ವಿ ಸೂರ್ಯ, ಶಾಸಕರಾದ ಡಿ.ಕೆ.ಶಿವಕುಮಾರ್, ಎಲ್.ಎನ್.ನಿಸರ್ಗ ನಾರಾಯಣಸ್ವಾಮಿ, ಟಿ.ವೆಂಕಟರಮಣಯ್ಯ, ಶರತ್‌ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಹೆಚ್.ಎಂ.ರೇವಣ್ಣ, ಎಸ್.ರವಿ, ಪುಟ್ಟಣ್ಣ, ಅ.ದೇವೇಗೌಡ, ಸಿನಿಮಾ ನಟರಾದ ಪುನೀತ್‌ ರಾಜ್‌ಕುಮಾರ್, ಜಗ್ಗೇಶ್‌ ಸೇರಿ ಹಲವು ನಾಯಕರು ಕೆಂಪೇಗೌಡ ಜಯಂತ್ಯುತ್ಸವದಲ್ಲಿ ಪಾಲ್ಗೊಂಡಿದ್ದರು.
First published: