ಕೊರೋನಾ ಕಾಟಕ್ಕೆ ಹೈದ್ರಾಬಾದ್ ಕರ್ನಾಟಕ ತತ್ತರ; ಶುಕ್ರವಾರ ಒಂದೇ ದಿನ 155 ಪ್ರಕರಣ ದೃಢ!

ಕಲ್ಯಾಣ ಕರ್ನಾಟಕದಲ್ಲಿ ಇಂದು 155 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 43 ಮಕ್ಕಳಿದ್ದಾರೆ. ಕಲ್ಯಾಣ ಕರ್ನಾಟಕದ ಸೋಂಕಿತರ ಸಂಖ್ಕೆ 1499 ಗೆ ಏರಿಕೆಯಾಗಿದೆ. ಈ ಪೈಕಿ ಬಹುತೇಕ ಸೋಂಕಿತರು ಮಹಾರಾಷ್ಟ್ರದಿಂದ ವಾಪಸ್ಸಾದ ವಲಸಿಗರಾಗಿದ್ದಾರೆ ಎಂಬುದು ಉಲ್ಲೇಖಾರ್ಹ. 

news18-kannada
Updated:June 6, 2020, 7:02 AM IST
ಕೊರೋನಾ ಕಾಟಕ್ಕೆ ಹೈದ್ರಾಬಾದ್ ಕರ್ನಾಟಕ ತತ್ತರ; ಶುಕ್ರವಾರ ಒಂದೇ ದಿನ 155 ಪ್ರಕರಣ ದೃಢ!
ಸಾಂದರ್ಭಿಕ ಚಿತ್ರ
  • Share this:
ಕಲಬುರ್ಗಿ; ಹೈದ್ರಾಬಾದ್‌ ಕರ್ನಾಟಕ ಭಾಗದಲ್ಲಿ ಶುಕ್ರವಾರವೂ ಸಹ ಕೊರೋನಾ ಕೇಕೆ ಮುಂದುವರೆದಿದ್ದು, ಒಂದೇ ದಿನದಲ್ಲಿ ಸುಮಾರು 155 ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಸೋಂಕಿನ ಪ್ರಮಾಣ ಇನ್ನೂ ಹೆಚ್ಚಾಗುವ ಸಾಧ್ಯತೆಯನ್ನು ತೆರೆದಿಟ್ಟಿದೆ.

ಈ ಭಾಗದ ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚು ಪ್ರಕರಣಗಳು ಕಾಣಿಸಿವೆ. ಯಾದಗಿರಿ ಜಿಲ್ಲೆಯಲ್ಲಿ 74 ಪ್ರಕರಣಗಳು ದೃಢಪಟ್ಟಿದ್ದರೆ, ಕಲಬುರ್ಗಿ ಜಿಲ್ಲೆಯಲ್ಲಿ 42 ಜನರಿಗೆ ಸೋಂಕು ದೃಢಗೊಂಡಿದೆ. ಬೀದರ್ ಜಿಲ್ಲೆಯಲ್ಲಿ 39 ಪ್ರಕರಣಗಳು ದಾಖಲಾಗಿವೆ. ಆದರೆ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಯಾವುದೇ ಪ್ರಕರಣಗಳಿಲ್ಲ ಎಂಬುದೇ ತುಸು ಸಮಾಧಾನಕರ ಸಂಗತಿ.

ಕಲ್ಯಾಣ ಕರ್ನಾಟಕದಲ್ಲಿ ಇಂದು 155 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಪೈಕಿ 43 ಮಕ್ಕಳಿದ್ದಾರೆ. ಕಲ್ಯಾಣ ಕರ್ನಾಟಕದ ಸೋಂಕಿತರ ಸಂಖ್ಕೆ 1499 ಗೆ ಏರಿಕೆಯಾಗಿದೆ. ಈ ಪೈಕಿ ಬಹುತೇಕ ಸೋಂಕಿತರು ಮಹಾರಾಷ್ಟ್ರದಿಂದ ವಾಪಸ್ಸಾದ ವಲಸಿಗರಾಗಿದ್ದಾರೆ ಎಂಬುದು ಉಲ್ಲೇಖಾರ್ಹ.

ಕಲಬುರ್ಗಿಯಲ್ಲಿ ನಿನ್ನೆ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ. ಆದರೆ, ಶುಕ್ರವಾರ ಒಂದೇ 42 ಜನರಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ 15 ಮಕ್ಕಳು, 7 ಮಹಿಳೆಯರು ಮತ್ತು 20 ಪುರುಷರಿದ್ದಾರೆ. 26 ವರ್ಷದ ಪುರುಷ ಪP-4446 ಟ್ರಾವೆಲ್ ಹಿಸ್ಟರಿ ಸಿಕ್ಕಿಲ್ಲ. 46 ವರ್ಷದ ಪುರುಷ P-4493 ತೆಲಂಗಾಣದಿಂದ ವಾಪಸ್ಸಾಗಿದ್ದಾರೆ.

ಉಳಿದಂತೆ 40 ಜನ ಮಹಾರಾಷ್ಟ್ರದಿಂದ ವಾಪಸ್ಸಾದ ವಲಸಿಗರಾಗಿದ್ದಾರೆ. ಎಲ್ಲರೂ ಕ್ವಾರಂಟೈನ್ ಕೇಂದ್ರದಲ್ಲಿದ್ದವರಾಗಿದ್ದಾರೆ. ಹೀಗಾಗಿ ಅಲ್ಲೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : ಕರ್ನಾಟಕದಲ್ಲಿಂದು ದಾಖಲೆಯ 515 ಕೊರೋನಾ ಕೇಸ್​!; ಉಡುಪಿಯೊಂದರಲ್ಲೇ 204 ಸೋಂಕಿತರು ಪತ್ತೆ
First published: June 6, 2020, 7:02 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading