ಚಿಕ್ಕಮಗಳೂರಿನಲ್ಲಿ ಕೊರೋನಾ ಸ್ಫೋಟ; ಒಂದೇ ದಿನ 23 ಜನರಿಗೆ ಸೋಂಕು, ಓರ್ವ ಮಹಿಳೆ ಸಾವು

ಜಿಲ್ಲೆಯಲ್ಲಿ ಕೋವಿಡ್-19ನಿಂದ 3ನೇ ಸಾವು ಸಂಭವಿಸಿದೆ. ನಗರದ ಉಪ್ಪಳ್ಳಿ ಬಡಾವಣೆಯ 52 ವರ್ಷದ ಮಹಿಳೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದು, ಮಾದರಿ ಪರೀಕ್ಷಿಸಿದಾಗ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 

news18-kannada
Updated:July 9, 2020, 5:30 PM IST
ಚಿಕ್ಕಮಗಳೂರಿನಲ್ಲಿ ಕೊರೋನಾ ಸ್ಫೋಟ; ಒಂದೇ ದಿನ 23 ಜನರಿಗೆ ಸೋಂಕು, ಓರ್ವ ಮಹಿಳೆ ಸಾವು
ಸಾಂದರ್ಭಿಕ ಚಿತ್ರ
  • Share this:
ಚಿಕ್ಕಮಗಳೂರು (ಜುಲೈ 09): ಕಾಫಿನಾಡಿನಲ್ಲಿ ಇಂದು ಎಂಎಲ್‌ಸಿ ಸೇರಿದಂತೆ 23 ಮಂದಿಗೆ ಕೊರೋನಾ ವಕ್ಕರಿಸಿದ್ದು, ಕೆಎಸ್ಆರ್‌ಸಿ ಡ್ರೈವರ್ ನಿಂದ ಬರೋಬರಿ 8 ಮಂದಿಯಲ್ಲಿ ಕೊರೋನಾ ಕಾಣಿಸಿಕೊಂಡಿದ್ದರೆ,  ಬಿಜೆಪಿ-ಜೆಡಿಎಸ್ ಮುಖಂಡರೂ ಈ ಸೋಂಕಿಗೆ ತುತ್ತಾಗಿದ್ದಾರೆ. ಹೀಗಾಗಿ ಸಮಾನ್ಯವಾಗಿ ಉಬಯ ಪಕ್ಷದ ನೂರಾರು ಜನ ಕಾರ್ಯಕರ್ತರಲ್ಲೂ ಆತಂಕ ಮನೆ ಮಾಡಿದೆ.

ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಬುಧವಾರ ಒಂದೇ ದಿನ 23 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 123ಕ್ಕೆ ಏರಿಕೆಯಾಗಿದೆ. ಅಲ್ಲದೆ, ನಗರದ ಉಪ್ಪಳ್ಳಿ ಬಡಾವಣೆಯಲ್ಲಿ 52 ವರ್ಷದ ಮಹಿಳೆಯೊಬ್ಬರು ಕೊರೊನಾದಿಂದ ಮೃತಪಟ್ಟಿದ್ದಾರೆ.

ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡರಿಗೂ ಕೊರೋನಾ ಸೋಂಕು ತಗುಲಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಪ್ರಾಥಮಿಕ ಸಂಪರ್ಕದಿಂದ ಎಸ್.ಎಲ್. ಬೋಜೇಗೌಡ ಅವರಿಗೆ ಸೋಂಕು ತಗುಲಿದೆ ಎನ್ನಲಾಗಿದೆ. ಬಿಜೆಪಿ ಹಿರಿಯ ಮುಖಂಡರ ಸಂಪರ್ಕದಲ್ಲಿದ್ದ ಮತ್ತಿಬ್ಬರು ಬಿಜೆಪಿ ಮುಖಂಡರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ.

ನಗರದಲ್ಲಿ ಕೆಎಸ್‌ಆರ್‌ಟಿಸಿ ಚಾಲಕರೊಬ್ಬರಿಂದ ಕುಟುಂಬಸ್ಥರೂ ಸೇರಿದಂತೆ 8 ಜನರಿಗೆ ಸೋಂಕು ತಗುಲಿದ್ದರೆ, ಕಡೂರು ತಾಲೂಕಿನ ಕೆಎಸ್‌ಆರ್‌ಟಿಸಿ ಚಾಲಕರೊಬ್ಬರಿಂದ ಇಬ್ಬರಿಗೆ ಕೊರೋನಾ ಹಬ್ಬಿದೆ. ಕೊಪ್ಪ ತಾಲೂಕು ಬಾಳಗಡಿ ಗ್ರಾ.ಪಂ. ಸಹಾಯಕನಿಗೆ ಸೋಂಕು ತಗುಲಿದ್ದು, ಕಚೇರಿಯನ್ನು ಸೀಲ್‌ಡೌನ್ ಮಾಡಲಾಗಿದೆ.

ಕೊರೋನಾಗೆ ಮಹಿಳೆ ಬಲಿ

ಜಿಲ್ಲೆಯಲ್ಲಿ ಕೋವಿಡ್-19ನಿಂದ 3ನೇ ಸಾವು ಸಂಭವಿಸಿದೆ. ನಗರದ ಉಪ್ಪಳ್ಳಿ ಬಡಾವಣೆಯ 52 ವರ್ಷದ ಮಹಿಳೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದು, ಮಾದರಿ ಪರೀಕ್ಷಿಸಿದಾಗ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದನ್ನೂ ಓದಿ: CoronaVirus: ತುಮಕೂರಿನಲ್ಲಿ ನಿಯಂತ್ರಣಕ್ಕೆ ಸಿಗದ ಕೊರೋನಾ; ಭಯದಲ್ಲಿ ದಿನದೂಡುತ್ತಿದ್ದಾರೆ ಜನ

ಮಹಿಳೆ ಇತ್ತೀಚೆಗಷ್ಟೇ ಬೆಂಗಳೂರಿಗೆ ಹೋಗಿಬಂದಿದ್ದರು. ಮಂಗಳವಾರ ಉಸಿರಾಟದ ತೀವ್ರ ಸಮಸ್ಯೆ ಎದುರಾಗಿದ್ದು, ಕೆಲ ಹೊತ್ತಿನಲ್ಲೇ ಮೃತಪಟ್ಟಿದ್ದಾರೆ. ಈ ಹಿಂದೆ ಅಜ್ಜಂಪುರ ತಾಲೂಕು ಡಣಾಯಕಪುರದ ಒಬ್ಬರು ಮಹಿಳೆ ಹಾಗೂ ಕಡೂರಿನ ಒಬ್ಬರು ಶಿಕ್ಷಕರು ಕೊರೋನಾದಿಂದ ಮೃತಪಟ್ಟಿದ್ದರು. ಇಂದು ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಮೂರಕ್ಕೇರಿದೆ.
Published by: MAshok Kumar
First published: July 9, 2020, 5:29 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading