ಹಾಸನ ಜಿಲ್ಲೆಯಲ್ಲಿಂದು 31 ಕೊರೋನಾ ಪ್ರಕರಣಗಳು ಪತ್ತೆ; ಇಬ್ಬರು ಸೋಂಕಿಗೆ ಬಲಿ

ಇದುವರೆಗೆ 515 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 232 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 24 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು.

news18-kannada
Updated:July 16, 2020, 7:11 PM IST
ಹಾಸನ ಜಿಲ್ಲೆಯಲ್ಲಿಂದು 31 ಕೊರೋನಾ ಪ್ರಕರಣಗಳು ಪತ್ತೆ; ಇಬ್ಬರು ಸೋಂಕಿಗೆ ಬಲಿ
ಸಾಂದರ್ಭಿಕ ಚಿತ್ರ
  • Share this:
ಹಾಸನ(ಜು.16): ಜಿಲ್ಲೆಯಲ್ಲಿ ಇಂದು ಎರಡು ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ ಹೊಸದಾಗಿ 31 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 771 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಇದುವರೆಗೆ 515 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 232 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 24 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದರು.

ಇಂದು ಮೃತಪಟ್ಟ 75 ವರ್ಷದ ವ್ಯಕ್ತಿ ಅರಕಲಗೂಡು ತಾಲ್ಲೂಕಿಗೆ ಸೇರಿದವರಾಗಿದ್ದು, ಸಕ್ಕರೆ ಕಾಯಿಲೆ, ರಕ್ತದ ಒತ್ತಡ ಹಾಗೂ ಉಸಿರಾಟದ ತೊಂದರೆಯಿಂದ ಜು.4 ರಂದು ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಹಾಗೂ 65 ವರ್ಷದ ಮಹಿಳೆ ಅವರಿಗೆ ಸಕ್ಕರೆ ಕಾಯಿಲೆ, ರಕ್ತದ ಒತ್ತಡ ಹಾಗೂ ಕಿಡ್ನಿಗೆ ಸಂಬಂಧಿಸಿದ ಕಾಯಿಲೆಯಿದ್ದು. 15 ದಿನಗಳ ಹಿಂದೆ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸರ್ಕಾರದ ನಿಯಮಾನುಸಾರ ಅವರ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ಡಾ. ಸತೀಶ್ ಮಾಹಿತಿ ನೀಡಿದರು.

ಕ್ವಾರಂಟೈನ್​ ಸೆಂಟರ್​​​​ನಲ್ಲಿದ್ದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಸೆಕ್ಯೂರಿಟಿ ಗಾರ್ಡ್​​

ಹೊಸದಾಗಿ ಇಂದು ಪತ್ತೆಯಾದ 31 ಪ್ರಕರಣಗಳಲ್ಲಿ ಒಬ್ಬರು ಆಲೂರು ತಾಲ್ಲೂಕಿನವರು, ಅರಸೀಕೆರೆ ತಾಲ್ಲೂಕಿನ ಇಬ್ಬರು, ಬೇಲೂರು ತಾಲ್ಲೂಕಿನಲ್ಲಿ ಒಬ್ಬರು, ಚನ್ನರಾಯಪಟ್ಟಣ ತಾಲ್ಲೂಕಿನ 3 ಮಂದಿ, ಸಕಲೇಶಪುರ ತಾಲ್ಲೂಕಿನ 6 ಜನ, 16 ಹಾಸನ ತಾಲ್ಲೂಕಿಗೆ ಸೇರಿದವರಾಗಿದ್ದಾರೆ ಹಾಗೂ ಬೇರೆ ಜಿಲ್ಲೆಯಿಂದ ಬಂದ ಇಬ್ಬರು ಒಟ್ಟಾರೆ 31 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದರು.

ಕೋವಿಡ್-19 ಉಲ್ಬಣವಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಕೊರೋನಾ ಸೋಂಕು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಹೇಳಿದರು.
Published by: Latha CG
First published: July 16, 2020, 7:11 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading