ಶಿವಮೊಗ್ಗ(ಸೆಪ್ಟೆಂಬರ್. 16): ಜಿಲ್ಲೆಯಲ್ಲಿರುವ ಪಾರಂಪರಿಕ ಕಟ್ಟಡಗಳು, ಸ್ಮಾರಕಗಳು, ಅರಮನೆ, ದೇವಸ್ಥಾನಗಳನ್ನು 3 ಡಿ ಲೇಸರ್ ತಂತ್ರಜ್ಞಾನ ಬಳಸಿ ಡಿಜಿಟಲೀಕರಣಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲೆಯ 12 ಪಾರಂಪರಿಕ ಕಟ್ಟಡ, ಅರಮನೆ, ಸ್ಮಾರಕಗಳನ್ನು ಈ ಕಾರ್ಯಕ್ಕಾಗಿ ಗುರುತಿಸಲಾಗಿದೆ. ಮುಂದಿನ ದಿನಗಳಲ್ಲಿ ಸ್ಮಾರಕಗಳು ಯಾವುದೇ ಕಾರಣಕ್ಕೂ ಹಾನಿಗೊಳಗಾದರೆ, ಕಟ್ಟಡಗಳ ಮರು ನಿರ್ಮಾಣಕ್ಕೆ ಈ ತಂತ್ರಜ್ಞಾನ ಸಹಕಾರಿಯಾಗಲಿದೆ. ಜಿಲ್ಲೆಯ ಪಾರಂಪರಿಕ ಕಟ್ಟಡಗಳ 3 ಡಿ ಡಿಜಿಟಲೀಕರಣ ಕಾರ್ಯ ರಾಜ್ಯ ಪುರಾತತ್ವ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರ ವಿದ್ಯಾ ಮಂಡಳಿಯ ಸಹಯೋಗದೊಂದಿಗೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ 12 ಪಾರಂಪರಿಕ ಕಟ್ಟಡ, ಅರಮನೆ, ಸ್ಮಾರಕಗಳನ್ನು ಈ ಕಾರ್ಯಕ್ಕಾಗಿ ಗುರುತಿಸಲಾಗಿದೆ. ಇವುಗಳಲ್ಲಿ ಶಿವಮೊಗ್ಗ ನಗರದ ಶಿವಪ್ಪ ನಾಯಕ ಅರಮನೆ, ಕೋಟೆ ಆಂಜನೇಯ ದೇವಾಲಯ, ಭೀಮೇಶ್ವರ ದೇವಾಲಯ, ಕುಸ್ಕೂರಿನ ಭೀಮೇಶ್ವರ ದೇವಾಲಯ, ಭದ್ರಾವತಿಯ ಲಕ್ಷ್ಮೀ ನರಸಿಂಹ ದೇವಾಲಯ, ಹೊಸನಗರ ತಾಲೂಕಿನ ಸಾಲಗೇರಿಯ ಉಮಾಪತಿ ದೇವಾಲಯ, ಶಿವಪ್ಪ ನಾಯಕನ ಗೋಪುರ, ಶಿಕಾರಿಪುರ-ಚಿಕ್ಕಮಾಗಡಿ ಜೈನ ಬಸ್ತಿ, ನರಸಾಪುರ ಬಸದಿ, ಸೊರಬ ತಾಲೂಕಿನ ಪುರ ಗ್ರಾಮದ ಸೋಮೇಶ್ವರ ದೇವಾಲಯ, ದವನಿ ಭೈಲಿನ ಕಪಿಲೇಶ್ವರ ದೇವಾಲಯಗಳು ಸೇರಿವೆ.
ಮುಂದಿನ ದಿನಗಳಲ್ಲಿ ಸ್ಮಾರಕಗಳು ಯಾವುದೇ ಕಾರಣಕ್ಕೂ ಹಾನಿಗೊಳಗಾದರೆ, ಕಟ್ಟಡಗಳ ಮರು ನಿರ್ಮಾಣಕ್ಕೆ ಈ ತಂತ್ರಜ್ಞಾನ ಸಹಕಾರಿಯಾಗಲಿದೆ. ಇದರಿಂದ ಸ್ಮಾರಕಗಳ ಯಥಾವತ್ತಾದ 3ಡಿ ವರ್ಚುವಲ್ ವಲ್ರ್ಡ್ ಅನ್ನು ರಚಿಸಬಹುದಾಗಿದೆ. 3 ಡಿ ಸ್ಕ್ಯಾನಿಂಗ್ ಸರ್ವೆ ಮಾಡುವ ಸ್ಮಾರಕಗಳ 33 ಅಂಶಗಳನ್ನು ಕ್ರೋಢೀಕರಿಸಲಾಗುತ್ತದೆ. ಅವುಗಳಲ್ಲಿ ಪ್ರಮುಖವಾಗಿ ಸ್ಮಾರಕಗಳ ಅಳತೆ, ಆಳ, ಅಗಲ, ಸ್ಮಾರಕಕ್ಕೆ ಬಳಸಲಾಗಿರುವ ಸಾಮಾಗ್ರಿ, ನಿರ್ಮಾಣಗೊಂಡ ವರ್ಷ, ಯಾರ ಕಾಲದಲ್ಲಿ ನಿರ್ಮಾಣಗೊಂಡಿದೆ, ವರ್ಷ ಮತ್ತು ಐತಿಹಾಸಿಕ ವಿವರಗಳು, ವಾಸ್ತು ಶಿಲ್ಪದ ಶೈಲಿಯನ್ನು ಸಹ ಕ್ರೋಢೀಕರಿಸಿ ಸಂಗ್ರಹಿಸಲಾಗುತ್ತದೆ.
ಇದನ್ನೂ ಓದಿ : ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ; ಪರಿಷತ್ ಸದಸ್ಯರ ಜತೆ ಚರ್ಚಿಸಿದ ಡಿಸಿಎಂ ಅಶ್ವತ್ಥ್ ನಾರಾಯಣ್
ಇದರೊಂದಿಗೆ ಜಿಯೋ ವಿಶೇಷ ತಂತ್ರಜ್ಞಾನವನ್ನು ಇದರಲ್ಲಿ ಅಡಕಗೊಳಿಸಿ, ಸ್ಮಾರಕಗಳ ಜಿಪಿಎಸ್ ಲೊಕೇಶನ್, ಛಾಯಾಚಿತ್ರ ಇರಲಿದ್ದು, ಅವುಗಳ ಮೇಲೆ ಕ್ಲಿಕ್ ಮಾಡಿದಾಗ ಹತ್ತಿರದ ಊರು, ತಲುಪುವ ವ್ಯವಸ್ಥೆ ಮುಂತಾದ ವಿವರಗಳು ಸಹ ಪ್ರವಾಸಿಗರಿಗೆ ಲಭ್ಯವಾಗಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ