ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 10 ವರ್ಷದಲ್ಲಿ 40 ಸಾವಿರ ಎಕರೆ ಕಾನು ಅರಣ್ಯ ರಕ್ಷಣೆ : ಅನಂತ ಹೆಗಡೆ ಅಶೀಸರ

ಜಿಲ್ಲೆಯಲ್ಲಿ ಮುಂದಿನ ನಾಲ್ಕು ವರ್ಷಗಳಲ್ಲಿ 70 ಸಾವಿರ ಎಕರೆ ಕಾನು ಅರಣ್ಯ ಪ್ರದೇಶ  ಸಂರಕ್ಷಿಸುವ ಗುರಿ ಹೊಂದಲಾಗಿದೆ. ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ

ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ

ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ

  • Share this:
ಶಿವಮೊಗ್ಗ(ಆಗಸ್ಟ್​. 11): ಜಿಲ್ಲೆಯಲ್ಲಿ ಸುಮಾರು 2 ಲಕ್ಷ  ಎಕರೆಯಷ್ಟಿದ್ದ ಕಾನು ಅರಣ್ಯ ಪ್ರದೇಶ ಇದೀಗ 1.40 ಲಕ್ಷ ಎಕರೆಗೆ ಇಳಿದಿದೆ. ಕಳೆದ ನಾಲ್ಕ 10 ವರ್ಷದಲ್ಲಿ 40 ಸಾವಿರ ಎಕರೆ ಕಾನು ಅರಣ್ಯ ಪ್ರದೇಶ ರಕ್ಷಣೆ ಮಾಡಲಾಗಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಇನ್ನೂ 70 ಸಾವಿರ ಎಕರೆ ಕಾನು ಅರಣ್ಯ ಪ್ರದೇಶ ಸಂರಕ್ಷಿಸುವ ಗುರಿಯನ್ನು ಹೊಂದಲಾಗಿದೆ ಎಂದು ಕರ್ನಾಟಕ ಜೀವವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಕಾನು ಅರಣ್ಯಗಳು ಕುರಿತಾದ ವರದಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮುಂದಿನ ನಾಲ್ಕು ವರ್ಷಗಳಲ್ಲಿ 70 ಸಾವಿರ ಎಕರೆ ಕಾನು ಅರಣ್ಯ ಪ್ರದೇಶ  ಸಂರಕ್ಷಿಸುವ ಗುರಿ ಹೊಂದಲಾಗಿದೆ. ಕ್ರಿಯಾ ಯೋಜನೆ ರೂಪಿಸಲಾಗುತ್ತಿದೆ. ಈ ಕುರಿತು ಪರಿಶೀಲಿಸಲು ಭಾರತೀಯ ವಿಜ್ಞಾನ ಸಂಸ್ಥೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಕಂದಾಯ ಅರಣ್ಯ ಭೂಮಿ (ಡೀಮ್ಡ್ ಅರಣ್ಯ)ವಿದ್ದು, ಇದರಲ್ಲಿ ಬಹುತೇಕ ಕಾನು ಅರಣ್ಯವಾಗಿದೆ. ಪ್ರತಿ ಗ್ರಾಮದ ಕಾನು ಅರಣ್ಯಗಳನ್ನು ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಜಂಟಿ ಸಮೀಕ್ಷೆ ನಡೆಸಿ ಜಿಪಿಎಸ್ ಮೂಲಕ ಗಡಿ ಗುರುತಿಸಿ ನಕ್ಷೆ ರಚಿಸಬೇಕು. ಜಲಾನಯನ ಅಭಿವೃದ್ಧಿ ಯೋಜನೆಗಳಲ್ಲಿ ಕಾನು ಅರಣ್ಯ ಸಂರಕ್ಷಣೆಯನ್ನೂ ಸೇರಿಸಬೇಕು. ಈ ವ್ಯಾಪ್ತಿಯಲ್ಲಿ ಕಿರು ಅರಣ್ಯ ಉತ್ಪತ್ತಿ ಸಂಗ್ರಹಕ್ಕೆ ಕಡಿವಾಣ ಹಾಕಬೇಕು ಇತ್ಯಾದಿ ಶಿಫಾರಸುಗಳನ್ನು ವರದಿಯಲ್ಲಿ ಮಾಡಲಾಗಿದೆ ಎಂದರು.

ಇದನ್ನೂ ಓದಿ  : ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶಿಷ್ಟಾಚಾರ ಉಲ್ಲಂಘನೆ ; ಶಾಸಕಿಯ ಸಹೋದರನಿಂದ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ.!

ಇದೇ ವೇಳೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಮಾತನಾಡಿ, ಪ್ರಸ್ತುತ ಜಿಲ್ಲೆಯಲ್ಲಿ ಕಾನು ಅರಣ್ಯವನ್ನು ಯಾವುದೇ ಉದ್ದೇಶಕ್ಕೆ ಮಂಜೂರು ಮಾಡಲಾಗುತ್ತಿಲ್ಲ. ಈ ಕುರಿತಾದ 43 ಪ್ರಕರಣಗಳನ್ನು ಜಿಲ್ಲಾ ಮಟ್ಟದ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಲಾಗಿದ್ದು, ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಅನಧಿಕೃತವಾಗಿ ಮಂಜೂರು ಮಾಡಲಾಗಿರುವ ಕಂದಾಯ ಅರಣ್ಯ ಭೂಮಿಯನ್ನು ಮರುಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸುವಂತೆ ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಾಗರ ವಿಭಾಗದಲ್ಲಿ 210 ಕಾನು ಪ್ರದೇಶ ವ್ಯಾಪ್ತಿಯಲ್ಲಿ 370 ಕಿ. ಮೀ ಕಂದಕ ತೋಡಿ ಗಡಿಯನ್ನು ಗುರುತಿಸಿ ಅಭಿವೃದ್ಧಿಪಡಿಸಲಾಗಿದೆ. ಇನ್ನುಳಿದ 62 ಕಾನು ಪ್ರದೇಶದ 124 ಕಿ.ಮೀ ವ್ಯಾಪ್ತಿಯಲ್ಲಿ ಕಂದಕ ತೋಡಿ ನಾಮಫಲಕ ಹಾಕುವ ಕಾರ್ಯ ಪ್ರಗತಿಯಲ್ಲಿದೆ ಎಂದು ಸಾಗರ ವಿಭಾಗ ಡಿಎಫ್ಒ ಮೋಹನ್ ಕುಮಾರ್ ಮಾಹಿತಿ ನೀಡಿದರು.
Published by:G Hareeshkumar
First published: