HOME » NEWS » District » 50 ADDITIONAL VENTILATOR DISTRIBUTION TO GADAGA DISTRICT SAYS MINISTER CC PATIL RHHSN SKG

ಗದಗ ಜಿಲ್ಲೆಗೆ 50 ವೆಂಟಿಲೇಟರ್ ಹಂಚಿಕೆ, 5890 ಎಲ್‌ಪಿಎಂ ಆಕ್ಸಿಜನ್ ಉತ್ಪಾದನಾ ಘಟಕ ಶೀಘ್ರದಲ್ಲಿಯೇ ಆರಂಭ; ಸಚಿವ ಸಿ.ಸಿ.ಪಾಟೀಲ್

ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ 14 ದಿನಗಳ ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರು  ನಿಯಮಗಳನ್ನು ಪಾಲಿಸಬೇಕು.  ಅನಗತ್ಯ ಸಂಚಾರ ಮಾಡದೇ ಮನೆಯಲ್ಲಿಯೇ ಇರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸೋಂಕಿನ ಸರಪಳಿಯನ್ನು ತುಂಡಿರಿಸುವಲ್ಲಿ ಸಹಕಾರ ನೀಡಬೇಕೆಂದು ವಿನಂತಿಸಿದರು.

news18-kannada
Updated:May 11, 2021, 6:39 PM IST
ಗದಗ ಜಿಲ್ಲೆಗೆ 50 ವೆಂಟಿಲೇಟರ್ ಹಂಚಿಕೆ, 5890 ಎಲ್‌ಪಿಎಂ ಆಕ್ಸಿಜನ್ ಉತ್ಪಾದನಾ ಘಟಕ ಶೀಘ್ರದಲ್ಲಿಯೇ ಆರಂಭ; ಸಚಿವ ಸಿ.ಸಿ.ಪಾಟೀಲ್
ಸಚಿವ ಸಿ.ಸಿ.ಪಾಟೀಲ್
  • Share this:
ಗದಗ: ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಅಗತ್ಯವಿರುವ ಆಮ್ಲಜನಕ ಉತ್ಪಾದನಾ ಘಟಕಗಳು ಜಿಲ್ಲೆಗೆ ಮಂಜೂರಾಗಿವೆ. 1000 ಎಲ್.ಪಿ.ಎಂ. ಉತ್ಪಾದನಾ ಘಟಕವನ್ನು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಮೆಡಿಕಲ್ ಆಕ್ಸಿಜನ್ ಜನರೇಷನ್ ಪ್ಲಾಂಟ್ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ ಸಿಎಸ್‌ಆರ್ ಅನುದಾನದಿಂದ ಕೋರಿಕೆಯ ಮೇರೆಗೆ ನೀಡಿದ್ದಾರೆ. ಅದಕ್ಕಾಗಿ ಜೋಶಿಯವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರು ತಿಳಿಸಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್, ಗದಗ ಜಿಲ್ಲೆಯಲ್ಲಿ ಒಟ್ಟಾರೆ 5,890 ಎಲ್‌ಪಿಎಮ್ ಪ್ರಾಣವಾಯು ಆಮ್ಲಜನಕ ಉತ್ಪಾದನಾ ಘಟಕ ಆರಂಭಕ್ಕೆ  ಸತತ ಪ್ರಯತ್ನದಿಂದ ಅನುಮತಿ ದೊರೆತಿದೆ. ಕೇಂದ್ರ ಗಣಿ ಭೂ ವಿಜ್ಞಾನ ಇಲಾಖೆಯಿಂದ 1000 ಎಲ್.ಪಿ.ಎಮ್, ರಾಜ್ಯ ಸರ್ಕಾರದಿಂದ 3000 ಎಲ್.ಪಿ.ಎಮ್, ಜಿಲ್ಲೆಗೊಂದು ಘಟಕ ಯೋಜನೆಯಡಿ 1,500 ಎಲ್.ಪಿ.ಎಮ್ , ನರಗುಂದ ಆಸ್ಪತ್ರೆಗೆ 390 ಎಲ್.ಪಿ.ಎಮ್. ಉತ್ಪಾದನಾ ಘಟಕಗಳು ಮಂಜೂರಾಗಿದ್ದು, ಘಟಕಗಳ ಕಾರ್ಯಾರಂಭಕ್ಕೆ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಶೀಘ್ರವೇ 3000ಎಲ್.ಪಿ.ಎಂ.ಆಕ್ಸಿಜನ್ ಉತ್ಪಾದನಾ ಘಟಕ ಆರಂಭಕ್ಕೆ ಪ್ರಯತ್ನಿಸಲಾಗುತ್ತಿದೆ ಎಂದರು.

ಈ ದೊಡ್ಡ ಪ್ರಮಾಣದ ಆಕ್ಸಿಜನ್ ಉತ್ಪಾದನಾ ಘಟಕ ಜಿಲ್ಲೆಗೆ ಮಂಜೂರು ಮಾಡಿದ್ದು  ಮಹತ್ವದ ಕಾರ್ಯವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಜನತೆಗೆ ಆಕ್ಸಿಜನ್ ಉತ್ಪಾದನಾ ಘಟಕದ ಸೌಲಭ್ಯ ದೊರೆಯಲಿದೆ. ರಾಜ್ಯ ಸರ್ಕಾರ ಗದಗ ಜಿಮ್ಸ್ ಆಸ್ಪತ್ರೆಗೆ 50 ವೆಂಟಿಲೇಟರ್‌ಗಳನ್ನು  ಪೂರೈಕೆ ಮಾಡಿದೆ. ಜಿಲ್ಲೆಯಲ್ಲಿ ಈಗಾಗಲೇ 38 ವೆಂಟಿಲೇಟರ್‌ಗಳಿವೆ. ಜಿಲ್ಲೆಯ ಸೋಂಕಿತರ ಚಿಕಿತ್ಸೆಗೆ ಹೆಚ್ಚುವರಿ ವೆಂಟಿಲೇಟರ್‌ಗಳು ಅಗತ್ಯವಿದೆಯೆಂದು ಬೇಡಿಕೆಯಿತ್ತು. ಸತತ ಪ್ರಯತ್ನದ ಫಲವಾಗಿ ಜಿಲ್ಲೆಗೆ ಹೆಚ್ಚುವರಿಯಾಗಿ 50 ವೆಂಟಿಲೇಟರ್ ಗಳನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಇವುಗಳಲ್ಲಿ 10 ವೆಂಟಿಲೇಟರ್‌ಗಳನ್ನು ಈಗಾಗಲೇ ಅಳವಡಿಸಲಾಗಿದೆ. ಉಳಿದಿರುವ ವೆಂಟಿಲೇಟರ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿವೆ ಎಂದರು.

ಒಟ್ಟು 88 ವೆಂಟಿಲೇಟರ್ ಸೌಲಭ್ಯವುಳ್ಳ ಬೆಡ್ ಗಳನ್ನು ಹೊಂದಿರುವ ಗದಗ ಜಿಲ್ಲಾ ಆಸ್ಪತ್ರೆಯು ( ಜಿಮ್ಸ್ ) ರಾಜ್ಯದಲ್ಲಿಯೇ ಅತೀ ಹೆಚ್ಚು ವೆಂಟಿಲೇಟರ್ ಸೌಲಭ್ಯವುಳ್ಳ ಜಿಲ್ಲಾಸ್ಪತ್ರೆಯಾಗಿ ಮಾರ್ಪಾಡಾಗಿದೆ. ಇದಕ್ಕೆ ಸಹಕರಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಜಿಲ್ಲೆಯಲ್ಲಿ 200 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ನ್ನು ಮೊರಾರ್ಜಿ ವಸತಿ ಶಾಲೆ  ಹಾಗೂ ಪಶು ವೈದ್ಯಕೀಯ ಕಾಲೇಜಿನಲ್ಲಿ ಆರಂಭಿಸಲು ಸಿದ್ಧತೆ ನಡೆದಿವೆ. ಸದ್ಯದಲ್ಲೇ ಕಾರ್ಯಾರಂಭ ಮಾಡುವ ಮೂಲಕ ಸೋಂಕಿತರಿಗೆ ಚಿಕಿತ್ಸೆ ಒದಗಿಸಲಿದೆ. ಗದಗ ಜಿಲ್ಲೆಯಲ್ಲಿ ಸದ್ಯ 2450 ಕೋವ್ಯಾಕ್ಸಿನ್ ಲಸಿಕೆ ಹಾಗೂ  16500 ಕೋವಿ ಶೀಲ್ಡ್ ಲಸಿಕೆ ಲಭ್ಯವಿದೆ. ಇಂದಿನಿಂದ 18 ವಯೋಮಾನದ ಮೇಲ್ಪಟ್ಟ ಆನ್ ಲೈನ್ ನೋಂದಾಯಿತ ಅರ್ಹರಿಗೆ ಲಸಿಕೆ ನೀಡಲಾಗುತ್ತಿದ್ದು, 6500 ಕೋವಿಶೀಲ್ಡ್ ಲಸಿಕೆಯನ್ನು  18 ರಿಂದ 45 ವಯೋಮಾನದ ಅರ್ಹರಿಗೆ ನೀಡಲು ಮೀಸಲಿಟ್ಟಿದೆ.  ಹಾಗೂ 45 ವಯೋಮಾನದ ಮೇಲ್ಪಟ್ಟವರು ಮೊದಲನೇ ಡೋಸ್ ಪಡೆದ ಅರ್ಹರಿಗೆ ಆದ್ಯತೆ ಮೇರೆಗೆ  ಎರಡನೇ ಡೋಸ್ ಲಸಿಕೆ ನೀಡಲು ಸೂಚಿಸಲಾಗಿದೆ. ಸೋಂಕು ಲಕ್ಷಣಗಳು ಕಂಡುಬಂದಲ್ಲಿ ಸಾರ್ವಜನಿಕರು ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಬೇಕು. ಸ್ಥಳೀಯ ವೈದ್ಯರು ಅಂತಹವರಿಗೆ ಚಿಕಿತ್ಸೆ ಒದಗಿಸುತ್ತಿದ್ದಲ್ಲಿ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಕಂಡು ಬಂದಲ್ಲಿ ತಾಲೂಕು ಆಸ್ಪತ್ರೆಗೆ ಕಳುಹಿಸಿಕೊಡಬೇಕು. ವಿನಾಕಾರಣ ಸೋಂಕಿತರು ಮನೆಯಲ್ಲಿ ಕಾಲಹರಣ ಮಾಡದೇ ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ಪಡೆಯುವ ಮೂಲಕ ಜೀವ ಹಾನಿ ತಪ್ಪಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಇದನ್ನು ಓದಿ: 2 ಕೋಟಿ ಕೋವಿಡ್ ಲಸಿಕೆಗೆ ಜಾಗತಿಕ ಟೆಂಡರ್: ಡಿಸಿಎಂ ಅಶ್ವಥ್ ನಾರಾಯಣ ನೇತೃತ್ವದ ಉನ್ನತ ಸಭೆಯಲ್ಲಿ ತೀರ್ಮಾನ

ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ 14 ದಿನಗಳ ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರು  ನಿಯಮಗಳನ್ನು ಪಾಲಿಸಬೇಕು.  ಅನಗತ್ಯ ಸಂಚಾರ ಮಾಡದೇ ಮನೆಯಲ್ಲಿಯೇ ಇರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸುವುದರೊಂದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ಸೋಂಕಿನ ಸರಪಳಿಯನ್ನು ತುಂಡಿರಿಸುವಲ್ಲಿ ಸಹಕಾರ ನೀಡಬೇಕೆಂದು ವಿನಂತಿಸಿದರು.
Youtube Video
ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು, ಜಿಲ್ಲಾ ಪಂಚಾಯತ್ ಸಿ.ಇ.ಓ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಯತೀಶ್ ಎನ್, ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ. ಸಭೆಯಲ್ಲಿ ಭಾಗಿಯಾಗಿದ್ದರು.
Published by: HR Ramesh
First published: May 11, 2021, 6:39 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories