ಲಾಕ್ ಡೌನ್ ಮೀರಿದವರಿಗೆ ಲಾಠಿ ; ಜನರ ವರ್ತನೆಗೆ ಬೇಸತ್ತು ಸಂಪೂರ್ಣ ಲಾಕ್ ಡೌನ್ ಗೆ ಮುಂದಾದ ಜಿಲ್ಲಾಡಳಿತ

ಕಳೆದ ಕೆಲ ದಿನಗಳಿಂದ ಏರಿಕೆಯಾಗುತ್ತಲೇ ಇರುವ ಸೋಂಕು. ಸಮುದಾಯಕ್ಕೆ ಹರಡಿರುವ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಜಾರಿಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ.

news18-kannada
Updated:July 12, 2020, 7:24 PM IST
ಲಾಕ್ ಡೌನ್ ಮೀರಿದವರಿಗೆ ಲಾಠಿ ; ಜನರ ವರ್ತನೆಗೆ ಬೇಸತ್ತು ಸಂಪೂರ್ಣ ಲಾಕ್ ಡೌನ್ ಗೆ ಮುಂದಾದ ಜಿಲ್ಲಾಡಳಿತ
ಸಾಂದರ್ಭಿಕ ಚಿತ್ರ
  • Share this:
ಕಲಬುರ್ಗಿ(ಜುಲೈ.12): ಕಲಬುರ್ಗಿ ಜಿಲ್ಲೆಯಲ್ಲಿ ಕೊರೋನಾ ವ್ಯಾಪಕಗೊಳ್ಳಲಾರಂಭಿಸಿದೆ. ಕೊರೋನಾ ನಿಯಂತ್ರಣಕ್ಕೆಂದು ರಾಜ್ಯ ಸರ್ಕಾರ ರವಿವಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಿದೆ. ಆದರೆ ಕಲಬುರ್ಗಿಯಲ್ಲಿ ಲಾಕ್ ಡೌನ್ ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಬೆಳಿಗ್ಗೆಯಿಂದಲೂ ರಾಜಾರೋಷವಾಗಿ ಸಂಚರಿಸುತ್ತಿರುವ ಆಟೋಗಳು. ಕಳೆದ ವಾರ ಅನಗತ್ಯವಾಗಿ ಓಡುತ್ತಿದ್ದ ಆಟೋಗಳನ್ನು ಸೀಜ್ ಮಾಡಿದ್ದ ಪೊಲೀಸರು. ಇಷ್ಟಾದರೂ ಎಚ್ಚೆತ್ತುಕೊಳ್ಳದ ಜನ. ಬೈಕ್, ಕಾರು ಮತ್ತಿತರ ವಾಹನ ಸಂಚಾರ ಎಂದಿನಂತಿದೆ. ಸಾರಿಗೆ ಬಸ್ ಸಂಚಾರ ಮಾತ್ರ ಸಂಪೂರ್ಣ ಬಂದ್ ಆಗಿದೆ. ಅಂಗಡಿ ಮುಂಗಟ್ಟುಗಳೂ ಬಂದ್ ಆಗಿವೆ.

ಆಸ್ಪತ್ರೆ ಸೇರಿದಂತೆ ಅಗತ್ಯ ಸೇವೆಗಳು ಎಂದಿನಂತಿವೆ. ಜನರ ವರ್ತನೆಗೆ ಪೊಲೀಸರು ಕುಪಿತಗೊಂಡಿದ್ದಾರೆ. ಸಂಡೇ ಸಂಪೂರ್ಣ ಲಾಕ್ ಡೌನ್ ಇದ್ದರೂ ಕಲಬುರ್ಗಿ ನಗರದಲ್ಲಿ ಬೇಕಾಬಿಟ್ಟಿ ಅಡ್ಡಾಡುತ್ತಿದ್ದವರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. ಕಳೆದ ರಾತ್ರಿ 8 ಗಂಟೆಯಿಂದಲೇ ಲಾಕ್ ಡೌನ್ ಜಾರಿಯಿದ್ದರೂ, ಲಾಕ್ ಡೌನ್ ಗೆ ಡೋಂಟ್ ಕೇರ್ ಎನ್ನದ ಜನ. ಇದರಿಂದ ಕುಪಿತಗೊಂಡ ಪೊಲೀಸರು ಅನಗತ್ಯವಾಗಿ ಸಂಚರಿಸುತ್ತಿದ್ದ ವಾಹನ ಸವಾರರಿಗೆ ಲಾಠಿ ರುಚಿ ತೋರಿಸಿದ್ದಾರೆ.

ಮಾಸ್ಕ್ ಹಾಕದೆ ಸಂಚರಿಸುತ್ತಿರುವವರಿಗೆ ಕ್ಲಾಸ್ ತೆಗೆದುಕೊಂಡು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಿದ್ದಾರೆ. ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಘಟನೆ ನಡೆದಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ರೌಂಡ್ಸ್ ಮಾಡಿದ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ, ಲಾಕ್ ಡೌನ್ ನಿಯಮ ಉಲ್ಲಂಘಿಸಿದವರಿಗೆ ಲಾಠಿ ಏಟಿನ ರುಚಿ ತೋರಿಸುತ್ತಿದ್ದಾರೆ. ಕೊರೋನಾ ವ್ಯಾಪಕಗೊಂಡಿರೋ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಟ್ಟುನಿಟ್ಟಿನ ಜಾರಿಗೆ ಪೊಲೀಸ್ ಇಲಾಖೆ ಮುಂದಾಗಿದೆ.

ಸಂಪೂರ್ಣ ಲಾಕ್ ಡೌನ್ ಗೆ ಮುಂದಾದ ಜಿಲ್ಲಾಡಳಿತ

ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೆ ಕೊರೋನಾ ವ್ಯಾಪಕಗೊಳ್ಳಲಾರಂಬಿಸಿದೆ. ದಿನೇ ದಿನೇ ಸೋಂಕು ಏರಿಕೆಯಾಗುತ್ತಿದ್ದು, ಸೋಂಕಿತರ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2024ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆಯೂ 36ಕ್ಕೆ ಏರಿಕೆಯಾಗಿದೆ. ಕಳೆದ ಕೆಲ ದಿನಗಳಿಂದ ಏರಿಕೆಯಾಗುತ್ತಲೇ ಇರುವ ಸೋಂಕು. ಸಮುದಾಯಕ್ಕೆ ಹರಡಿರುವ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ಮತ್ತೆ ಸಂಪೂರ್ಣ ಲಾಕ್ ಡೌನ್ ಜಾರಿಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ.

ಸೋಂಕಿನ ತೀವ್ರತೆ ತಡೆಗೆ ಲಾಕ್ ಡೌನ್ ಮದ್ದೆಂದು ಭಾವಿಸಿರುವ ಜಿಲ್ಲಾಡಳಿತ. ಬೆಂಗಳೂರು ಮಾದರಿಯಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡಲು ಗಂಭೀರ ಚಿಂತನೆ ನಡೆಸಿದೆ. ಜನತೆಯ ವರ್ತನೆಗೆ ಜಿಲ್ಲಾಡಳಿತ ಬೇಸರ ವ್ಯಕ್ತಪಡಿಸಿದೆ. ಮಾಸ್ಕ್ ಹಾಕದೆ ಅಡ್ಡಾಡುವ, ಸಾಮಾಜಿಕ ಅಂತರ ಕಾಪಾಡದಿರುವವರ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕು ಮತ್ತಷ್ಟು ಹೆಚ್ಚಳವಾಗುತ್ತಿದೆ. ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಮತ್ತಷ್ಟು ಬಿಗಡಾಯಿಸಲಿದೆ ಎಂಬ ಆತಂಕ ಎದುರಾಗಿದೆ.

ಇದನ್ನೂ ಓದಿ :  ಹು-ಧಾ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯಗೆ ಕೊರೋನಾ ಸೋಂಕುಸೋಂಕನ್ನು ಹತೋಟಿಗೆ ತರಲು ಮತ್ತೆ ಲಾಕ್ ಡೌನ್ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ನಾಳೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಸಭೆ ನಡೆಸಲಿದ್ದು, ಅದರಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲು ಜಿಲ್ಲಾಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಮಂಗಳವಾರದಿಂದ ಜಿಲ್ಲೆಯಲ್ಲಿ ಲಾಕ್ ಡೌನ್ ಸಾಧ್ಯತೆ ದಟ್ಟವಾಗಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಶರತ್ ಬಿ. ಈಗಾಗಲೇ ಅಧಿಕಾರಿಗಳೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಬೆಂಗಳೂರು ಮಾದರಿಯಲ್ಲಿ ನಗರ ಸೇರಿ ಜಿಲ್ಲೆಯಾದ್ಯಂತ ಲಾಕ್ ಡೌನ್ ಜಾರಿ ಸಾಧ್ಯತೆಯಿದೆ.
Published by: G Hareeshkumar
First published: July 12, 2020, 2:53 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading