ಜೈಲಿನಲ್ಲಿದ್ದುಕೊಂಡೇ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿ 

ಜಿಲ್ಲಾ ಪಂಚಾಯತ್ ಸದಸ್ಯ ಧರ್ಮಜ ಉತ್ತಪ್ಪ ನಾಮಪತ್ರ ಸಲ್ಲಿಕೆ ಮಾಡುವ ಅಗತ್ಯವಾದ ಎಲ್ಲಾ ವ್ಯವಸ್ಥೆ ಮಾಡಿ ಬೋಪಣ್ಣ ಅವರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪಿ. ಪಿ ಬೋಪಣ್ಣ

ಪಿ. ಪಿ ಬೋಪಣ್ಣ

  • Share this:
ಕೊಡಗು(ಡಿಸೆಂಬರ್​. 17): ಅತ್ಯಂತ ಕಿರಿಯ ವಯಸಿನಲ್ಲೇ ಚುನಾವಣೆಗೆ ಸ್ಪರ್ಧಿಸಿರುವವರಿದ್ದಾರೆ. ತುಂಬಾ ಇಳಿ ವಯಸ್ಸಿನಲ್ಲೂ ಚುನಾವಣೆಗೆ ಸ್ಪರ್ಧಿಸುವವರನ್ನು ನೋಡಿರುತ್ತೇವೆ. ಆದರೆ, ಇಲ್ಲೊಬ್ಬ ಅಭ್ಯರ್ಥಿ ಜೈಲಿನಲ್ಲಿದ್ದುಕೊಂಡೇ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಪಿ. ಪಿ ಬೋಪಣ್ಣ ಅವರು ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದಾರೆ. ಕೊಡಗಿನ ರಾಜಕೀಯ ಇತಿಹಾಸದಲ್ಲೇ ಮೊದಲ ಬಾರಿಗೆ ಜೈಲಿನಲ್ಲಿರುವ ವ್ಯಕ್ತಿಯೊಬ್ಬರು ಚುನಾವಣೆಗೆ ಸ್ಪರ್ಧಿಸಲು ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದಾರೆ. ಎರಡು ಅವಧಿಗೆ ಅಂದರೆ ಹತ್ತು ವರ್ಷಗಳ ಕಾಲ ಪಾಲಿಬೆಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಬೋಪಣ್ಣ ಅವರು ಸೇವೆ ಸಲ್ಲಿಸಿದ್ದರು. ಅದರೆ, ಈ ಬಾರಿ ಚುನಾವಣೆ ಗೆ ನಿಲುವ ಎಲ್ಲಾ ತಯಾರಿ ನಡೆಸುತ್ತಿರುವಾಗಲೇ ಜಾತಿ ನಿಂದಲೇ ಮತ್ತು ದೌರ್ಜನ್ಯ ಪ್ರಕರಣದಡಿಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿದರು. ಆದರೂ ಪಂಚಾಯತ್ ಚುನಾವಣೆಗೆ ನಿಲ್ಲಲು ಬೋಪಣ್ಣ ಪ್ರಯತ್ನಿಸಿ, ಇದೀಗ ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ್ದಾರೆ.

ಜೈಲಿನಲ್ಲಿ ಇದ್ದಿದ್ದರಿಂದ ನಾಮಪತ್ರ ಸಲ್ಲಿಸುವುದು ಕಷ್ಟವಾಗಿತ್ತು. ಅದಕ್ಕಾಗಿ ಜಾಮೀನು ಪಡೆಯಲು ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಕವನ್ ಅವರ ಮೂಲಕ ಜಾಮೀನು ಪಡೆಯಲು ಅಂತಿಮ ಕ್ಷಣದ ವರೆಗೂ ಪ್ರಯತ್ನ ನಡೆಸಿದರು.

ಅದು ಸಾಧ್ಯವಾಗದಿದ್ದಾಗ ನ್ಯಾಯಾಲಯದ ಒಪ್ಪಿಗೆ ಪಡೆದು ಜೈಲಿನಿಂದಲ್ಲೆ ಬೋಪಣ್ಣ ಅವರು ಸೂಚಕರ ಸಹಾಯದಿಂದ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಜಿಲ್ಲಾ ಪಂಚಾಯತ್ ಸದಸ್ಯ ಧರ್ಮಜ ಉತ್ತಪ್ಪ ನಾಮಪತ್ರ ಸಲ್ಲಿಕೆ ಮಾಡುವ ಅಗತ್ಯವಾದ ಎಲ್ಲಾ ವ್ಯವಸ್ಥೆ ಮಾಡಿ ಬೋಪಣ್ಣ ಅವರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ : ಸತೀಶ್ ಜಾರಕಿಹೋಳಿ ಆಪ್ತರ ಮೇಲೆ ಗುಂಡಿನ ದಾಳಿ; ರಾಜಕೀಯ ವೈಷಮ್ಯವೋ, ಆಸ್ತಿ ಕಲಹವೋ..!?

ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವೀರಾಜಪೇಟೆ ಶಾಸಕ ಕೆ ಜಿ ಬೋಪಯ್ಯ ಗ್ರಾಮ ಪಂಚಾಯತ್ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿರುವ ಬೋಪಣ್ಣ ಅವರು, ಆ ಗ್ರಾಮ ಪಂಚಾಯಿತಿ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿ ರಾಷ್ಟ್ರ ಪ್ರಶಸ್ತಿ ಬರುವಂತೆ ಶ್ರಮಿಸಿದ್ದಾರೆ.

ಆದೇ ಗಲಾಟೆ ವಿಷಯದಲ್ಲಿ ಜೈಲು ಸೇರಿದ್ದಾರೆ. ಆದರೂ ಚುನಾವಣೆಗೆ ಸ್ಪರ್ಧಿಸಿದ್ದು ಅವರು ಮಾಡಿರುವ ಕೆಲಸದಿಂದ ಈ ಬಾರಿಯೂ ಅವರು ಜಯಶೀಲರಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Published by:G Hareeshkumar
First published: