ಯವಕನ ಕೊಲೆ ಪ್ರಕರಣ : ಐವರು ಆರೋಪಿಗಳನ್ನು ಬಂಧಿಸಿದ ಶ್ರೀರಂಗಪಟ್ಟಣ ಪೊಲೀಸರು

ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಪ್ರಕರಣ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಕೃತ್ಯಕ್ಕೆ ಬಳಸಿದ್ದ ಕಾರು, ಮೂರು ಬೈಕ್ ಗಳು ಸೇರಿದಂತೆ ಆರೋಪಿಗಳ ಬಳಿ ಇದ್ದ ಮೊಬೈಲ್ ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

news18-kannada
Updated:October 11, 2020, 8:23 PM IST
ಯವಕನ ಕೊಲೆ ಪ್ರಕರಣ : ಐವರು ಆರೋಪಿಗಳನ್ನು ಬಂಧಿಸಿದ ಶ್ರೀರಂಗಪಟ್ಟಣ ಪೊಲೀಸರು
ಐವರು ಆರೋಪಿಗಳು
  • Share this:
ಮಂಡ್ಯ(ಅಕ್ಟೋಬರ್​. 11): ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಜಕ್ಕನಹಳ್ಳಿ ಕ್ರಷರ್ ಬಳಿ ಯುವಕನೋರ್ವನ ಬರ್ಬರ ಹತ್ಯೆ ನಡೆದಿತ್ತು.‌ ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿದ ದುಷ್ಕರ್ಮಿಗಳ ತಂಡ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಶ್ರೀರಂಗಪಟ್ಟಣದ ಗ್ರಾಮಾಂತರ ಪೊಲೀಸರು ಪ್ರಕರಣ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ‌. ಅಕ್ಟೋಬರ್ 2 ರಂದು ರಾತ್ರಿ 9 ಗಂಟೆಯಲ್ಲಿ ಶ್ರೀರಂಗಪಟ್ಟಣ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಕ್ವಾರಿಯೊಂದರ ಸಮೀಪ ಯುವಕನೋರ್ವ ಕೊಲೆಯಾಗಿತ್ತು. ಜಕ್ಕನಹಳ್ಳಿ ಗ್ರಾಮದ ಪೂರ್ಣಚಂದ್ರ(30)ಎಂಬ ಯುವಕನ ಮೇಲೆ ದಾಳಿ ಮಾಡಿ ಬರ್ಬರ ಹತ್ಯೆ ಮಾಡಿ ಪರಾರಿಯಾಗಿದರು. ಈ ವೇಳೆ ಕೊಲೆಯಾದ ಪೂರ್ಣಚಂದ್ರನ ಜೊತೆಯಲ್ಲಿದ್ದವರ ಮೇಲೂ ಹಲ್ಲೆ ಯತ್ನ ನಡೆದು ಇಬ್ಬರಿಗೆ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ರಾತ್ರಿ ನಡೆದ ಕೊಲೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿತ್ತು. ಈ ಸಂಬಂಧ ಅಂದು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದರು. 

ಇನ್ನು ಪ್ರಕರಣ ದಾಖಲಿಸಿಕೊಂಡ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಘಟನೆಯಲ್ಲಿ‌ ಗಾಯಾಳುಗಳಾಗಿದ್ದವರಿಂದ ಮಾಹಿತಿ ಸಂಗ್ರಹಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದರು. ಖಚಿತ ಮಾಹಿತಿ ಮೇರೆಗೆ ಕೊಲೆ ಆರೋಪಿಗಳು ಕೆ.ಆರ್.ನಗರದ ಸಾಲಿಗ್ರಾಮದಲ್ಲಿ ಅಡಗಿದ್ದ‌ ಮಾಹಿತಿ ಕಲೆಹಾಕಿ ಕಾರ್ಯಾಚರಣೆ ನಡೆಸಿ ವಿನಯ್ ಕುಮಾರ್, ಚಂದ್ರಶೇಖರ್, ಶ್ರೀನಿವಾಸ್, ಅಭಿಷೇಕ್ ಎನ್ನುವ ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಆರಂಭಿಸಿದರು.

ಪೊಲೀಸರ ವಿಚಾರಣೆ  ವೇಳೆ ಆರೋಪಿಗಳು ಅದೇ ಗ್ರಾಮದ ಮಂಜುನಾಥ್ ಎಂಬುವರಿಂದ 5 ಲಕ್ಷ ಸುಪಾರಿ ಪಡೆದು ಕೊಲೆ ಮಾಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರು. ಆರೋಪಿಗಳ ಮಾಹಿತಿ ಮೇರೆ ಸುಪಾರಿ ನೀಡಿದ ಜಕ್ಕನಹಳ್ಳಿಯ ಕ್ರಷರ್ ಮಾಲೀಕ ಮಂಜುನಾಥ್ ನನ್ನು ಬಂಧಿಸಿದ್ದಾರೆ. ಕೊಲೆಗೆ ವೈಯಕ್ತಿಕ ದ್ವೇಷವೇ ಕಾರಣ ಎಂದು ಸುಪಾರಿ ನೀಡಿದ್ದ ಆರೋಪಿ ಮಂಜುನಾಥ್ ಪೊಲೀಸರಿಗೆ ವಿಚಾರಣೆ ವೇಳೆ ತಿಳಿಸಿದ್ದಾರೆ‌.

ಇದನ್ನೂ ಓದಿ : Double Murder: ಚಾಕುವಿನಿಂದ ಇರಿದು ದುಷ್ಕರ್ಮಿಗಳಿಂದ ತಾಯಿ, ಮಗನ ಕೊಲೆ : ಬೆಚ್ಚಿ ಬಿದ್ದ ಮಲೆನಾಡಿನ ಜನತೆ

ಪ್ರಕರಣ ದಾಖಲಿಸಿಕೊಂಡಿದ್ದ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಪ್ರಕರಣ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಲ್ಲದೇ ಕೃತ್ಯಕ್ಕೆ ಬಳಸಿದ್ದ ಕಾರು, ಮೂರು ಬೈಕ್ ಗಳು ಸೇರಿದಂತೆ ಆರೋಪಿಗಳ ಬಳಿ ಇದ್ದ ಮೊಬೈಲ್ ಸೇರಿದಂತೆ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಭೇದಿಸಿದ ಗ್ರಾಮಾಂತರ ಪೊಲೀಸರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಅಭಿನಂದಿಸಿದ್ದು, ಪ್ರಕರಣ ಭೇದಿಸಿದ ಪೊಲೀಸರಿಗೆ ನಗದು ಬಹುಮಾನ ಘೋಷಿಸಿದ್ದಾರೆ.
Published by: G Hareeshkumar
First published: October 11, 2020, 8:11 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading