HOME » NEWS » District » ACCIDENT THREE KILLED ONE IN SERIOUS CONDITION IN HASSAN MAK

ಹಾಸನ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಸ್ಥಳದಲ್ಲೇ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ!

ಕೆಎ-19 ಎಂಜಿ 7021 ನಂಬರಿನ ಕ್ವಿಡ್ ಕಾರಿನಲ್ಲಿ ನಾಲ್ಕೂ ಜನ ಪ್ರಯಾಣ ಮಾಡಿದ್ದಾರೆ. ಕೆಂಚಟ್ಟಹಳ್ಳಿ ಬಳಿ ಹಂಪ್ಸ್ ಇದ್ದ ಕಾರಣ ಲಾರಿ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಲಾರಿ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣಕ್ಕೆ ಸಿಗದೆ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

news18-kannada
Updated:June 19, 2021, 8:24 PM IST
ಹಾಸನ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಸ್ಥಳದಲ್ಲೇ ಮೂವರು ಸಾವು, ಓರ್ವನ ಸ್ಥಿತಿ ಗಂಭೀರ!
ಸಾಂದರ್ಭಿಕ ಚಿತ್ರ.
  • Share this:
ಹಾಸನ ಜೂನ್ 19): ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ‌ ಸ್ಥಿತಿ ಗಂಭೀರವಾಗಿರುವ ಘಟನೆ ಹಾಸನ ಹೊರವಲಯದ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮೃತರಲ್ಲಿ ಓರ್ವನ ಗುರುತು ಪತ್ತೆಯಾಗಿದೆ. ಬೆಳ್ತಂಗಡಿ ಮೂಲದ ಯೋಗೇಶ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಉಳಿದ ಇಬ್ಬರ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಪೊಲೀಸರು ಗುರುತನ್ನು ಪತ್ತೆ ಹಚ್ಚುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುವನ್ನು ಜಿಲ್ಲಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೆಎ-19 ಎಂಜಿ 7021 ನಂಬರಿನ ಕ್ವಿಡ್ ಕಾರಿನಲ್ಲಿ ನಾಲ್ಕೂ ಜನ ಪ್ರಯಾಣ ಮಾಡಿದ್ದಾರೆ. ಕೆಂಚಟ್ಟಹಳ್ಳಿ ಬಳಿ ಹಂಪ್ಸ್ ಇದ್ದ ಕಾರಣ ಲಾರಿ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಈ ವೇಳೆ ಲಾರಿ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣಕ್ಕೆ ಸಿಗದೆ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಅಪಘಾತ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Swiss Bank: ಸ್ವಿಸ್ ಬ್ಯಾಂಕ್​ನಲ್ಲಿನ ಭಾರತೀಯರ ಠೇವಣಿ 20,700 ಕೋಟಿಗೆ ಏರಿಕೆ; ಕಳೆದ 13 ವರ್ಷದಲ್ಲೇ ಅತಿ ಹೆಚ್ಚು!

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
Published by: MAshok Kumar
First published: June 19, 2021, 8:24 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories