HOME » NEWS » District » AGAIN LOCKDOWN IN BANGALORE FOR CORONA CONTROL IS GOOD DICISION SAYS EX CM HD KUMARASWAMY MAK

ಕೊರೋನಾ ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಘೋಷಣೆ ಸ್ವಾಗತಾರ್ಹ; ಕುಮಾರಸ್ವಾಮಿ

ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜು. 14ರಿಂದ ಅಂದರೆ ಮಂಗಳವಾರ ರಾತ್ರಿ 8 ಗಂಟೆಯಿಂದ 1 ವಾರಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್​ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಇಂದು ಸ್ಪಷ್ಟಪಡಿಸಿದ್ದಾರೆ.

news18-kannada
Updated:July 11, 2020, 9:43 PM IST
ಕೊರೋನಾ ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಘೋಷಣೆ ಸ್ವಾಗತಾರ್ಹ; ಕುಮಾರಸ್ವಾಮಿ
ಹೆಚ್​.ಡಿ. ಕುಮಾರಸ್ವಾಮಿ.
  • Share this:
ಬೆಂಗಳೂರು (ಜುಲೈ 11); ಕೊರೋನಾ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮತ್ತೆ ಲಾಕ್‌ಡೌನ್ ಘೋಷಣೆ ಮಾಡಿರುವ ಸರ್ಕಾರ ನಿರ್ಧಾರವನ್ನು ನಾನು ಬೆಂಬಲಿಸುತ್ತೇನೆ. ಅದರಂತೆ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸಬೇಕು ಅಲ್ಲದೆ, ಇತರೆ ಜಿಲ್ಲೆಗಳಲ್ಲೂ ಲಾಕ್‌ಡೌನ್‌ ಜಾರಿಗೊಳಿಸಬೇಕೆಂದಯ ನಾನು ಒತ್ತಾಯಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜು. 14ರಿಂದ ಅಂದರೆ ಮಂಗಳವಾರ ರಾತ್ರಿ 8 ಗಂಟೆಯಿಂದ 1 ವಾರಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್​ಡೌನ್ ಜಾರಿ ಮಾಡಲಾಗುವುದು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಇಂದು ಸ್ಪಷ್ಟಪಡಿಸಿದ್ದಾರೆ.

ಜು.14ರಿಂದ ಜು.22ರವರೆಗೆ ಈ ಎರಡು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್​ಡೌನ್​ ಜಾರಿಯಾಗಲಿದೆ. ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.


ಇದರ ಬೆನ್ನಿಗೆ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ ಸೂಚಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ಕುಮಾರಸ್ವಾಮಿ, "ಕೊರೋನ ವೈರಸ್ ಸಮುದಾಯಕ್ಕೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಮನಗಂಡು ಇತರೆ ಗಂಭೀರ ಜಿಲ್ಲೆಗಳಲ್ಲಿಯೂ ಲಾಕ್ ಡೌನ್ ಮತ್ತೆ ಜಾರಿಗೊಳಿಸಿದರೆ ಸಾರ್ವಜನಿಕ ಸ್ವಾಸ್ಥ್ಯದ ಹಿತದೃಷ್ಟಿಯಿಂದ ನಾನು ಬೆಂಬಲಿಸುತ್ತೇನೆ.

ಅಲ್ಲದೆ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಲಾಕ್ ಡೌನ್ ಗೆ ಸರ್ಕಾರ ನಿರ್ಧಾರ ಮಾಡಿರುವ ಬೆನ್ನಲ್ಲೇ ಸರಕು ಸಾಗಣೆ ವಾಹನಗಳನ್ನು ಹೊರತುಪಡಿಸಿ ಅಂತರ್ ಜಿಲ್ಲಾ ಸಂಚಾರವನ್ನು ನಿರ್ಬಂಧಿಸುವಂತೆ ಒತ್ತಾಯಿಸುತ್ತೇನೆ" ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ರಾಜ್ಯದಲ್ಲಿ ಒಂದೇ ದಿನ 70 ಸಾವು; 20 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣಈ ನಡುವೆ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿರುವ ರಾಜ್ಯ ಆರೋಗ್ಯ ಇಲಾಖೆ, "ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 2,798 ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿವೆ. 70 ಮಂದಿ ಅಸುನೀಗಿದ್ಧಾರೆ. ಇಲ್ಲಿಯವರೆಗೆ ದಾಖಲಾಗಿರುವ ಕೊರೋನಾ ಪ್ರಕರಣಗಳ ಸಂಖ್ಯೆ 36,216 ತಲುಪಿದ್ದರೆ, ಸಾವಿನ ಪ್ರಮಾಣ 613ಕ್ಕೆ ಏರಿಕೆಯಾಗಿದೆ. ಇನ್ನೂ ಬೆಂಗಳೂರಿನಲ್ಲಿ ಕಳೆದ 24 ಗಂಟೆಯ ಅವಧಿಯಲ್ಲಿ  1,533 ಜನರಿಗೆ ಸೋಂಕು ಖಚಿತಪಟ್ಟಿದೆ. ಅಲ್ಲದೆ, ಸಾವಿನ ಸಂಖ್ಯೆ 229ಕ್ಕೆ ಏರಿಕೆಯಾಗಿದೆ" ಎಂದು ತಿಳಿಸಿದೆ.
Published by: MAshok Kumar
First published: July 11, 2020, 9:27 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories