ಹಾವೇರಿ; ಕೃಷಿ ವಿಜ್ಞಾನ ಕೇಂದ್ರಗಳು ರೈತರಿಗೆ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಗಳಿದ್ದಂತೆ. ರೈತರ ಬೆಳೆಗಳಿಗೆ ಯಾವ ರೋಗ ಬಂದರೂ ಸಹ ವಿಜ್ಞಾನ ಕೇಂದ್ರಗಳಲ್ಲಿ ಪರಿಹಾರ ದೊರೆಯುತ್ತದೆ ಎಂದು ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಅಶೋಕ್ ಪಿ ಹೇಳಿದ್ದಾರೆ.
ಇಂದು ವಿಶ್ವ ಮಣ್ಣು ಆರೋಗ್ಯ ದಿನಾಚರಣೆ ಪ್ರಯುಕ್ತ ಕೃಷಿ ವಿಜ್ಞಾನ ಕೇಂದ್ರ ಹನುಮನಮಟ್ಟಿ ಹಾಗೂ ಕೃಷಿ ಇಲಾಖೆ ಹಾನಗಲ್ ಇವರ ಸಂಯೋಗದೊಂದಿಗೆ ವಿಶ್ವ ಮಣ್ಣು ದಿನಾಚರಣೆಯನ್ನು ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಶೋಕ್ ಪಿ, ಏಕದಳ ಧಾನ್ಯಗಳು ಭೂಮಿಯ ಫಲವತ್ತತೆಯನ್ನು ಕಡಿಮೆ ಮಾಡುತ್ತವೆ. ಆದರೆ ದ್ವಿದಳ ಧಾನ್ಯಗಳು ಗಾಳಿಯಲ್ಲಿರುವ ಸಾರಜನಕವನ್ನು ಹೀರಿಕೊಂಡು ಭೂಮಿಯ ಫಲವತ್ತತೆಯನ್ನು ಹೆಚ್ಚಿಗೆ ಮಾಡುತ್ತೇವೆ. ಹೀಗಾಗಿ ರೈತರು ಕೇವಲ ಒಂದೇ ಬೆಳೆಗಳನ್ನು ಬೆಳೆಯದೆ ವಿವಿಧ ಬೆಳೆಗಳನ್ನು ಬೆಳೆಯಬೇಕು ಎಂದು ಮಾರ್ಗದರ್ಶನ ನೀಡಿದರು.
ಇದನ್ನು ಓದಿ: Karnataka Bandh | ರಾಮನಗರದಲ್ಲಿ ಬಂದ್ಗೆ ನೀರಸ ಪ್ರತಿಕ್ರಿಯೆ; ರೈತರು-ಪೊಲೀಸರ ನಡುವೆ ಮಾತಿನ ಚಕಮಕಿ
ಒಂದು ಬೆಳೆ ಉತ್ತಮವಾಗಿ ಬೆಳೆಯಬೇಕಾದರೆ 17 ಪೋಷಕಾಂಶಗಳ ಅವಶ್ಯಕತೆ ಇರುತ್ತದೆ ಈ ಎಲ್ಲಾ ಪೋಷಕಾಂಶಗಳು ತಿಪ್ಪೆ ಗೊಬ್ಬರದಲ್ಲಿರುತ್ತವೆ. ಹೀಗಾಗಿ ರೈತರು ರಾಸಾಯನಿಕ ಗೊಬ್ಬರಗಳನ್ನು ಕಡಿಮೆ ಮಾಡಿ, ತಿಪ್ಪೆ ಗೊಬ್ಬರಗಳನ್ನು ಹೆಚ್ಚಾಗಿ ಬಳಸಬೇಕು ಎಂದು ರೈತರಿಗೆ ಕಿವಿಮಾತು ಹೇಳಿದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ