HOME » NEWS » District » ALL MEMBERS OF THE MUNCIPALITY WORK WITH GREATER RESPONSIBILITY FOR THE SUPPRESSION OF CORONA SAYS JC MADHUSWAMY VKTMK MAK

ಕೊರೋನಾ ನಿಗ್ರಹಕ್ಕೆ ಪಾಲಿಕೆ ಸದಸ್ಯರೆಲ್ಲರೂ ಹೆಚ್ಚಿನ ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಿ; ಜೆ.ಸಿ.‌ ಮಾಧುಸ್ವಾಮಿ

ಸೋಂಕಿತರ ಆರೈಕೆಗಾಗಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಆದರೆ ಸೆಂಟರ್ ಗೆ ಸೋಂಕಿತರು ಬರಲು ಹಿಂದೇಟು ಹಾಕುತ್ತಿದ್ದಾರೆ. ಇನ್ನು ಮುಂದೆ ಪಾಸಿಟಿವ್ ಬಂದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸುವ ವ್ಯವಸ್ಥೆ ಆಗಬೇಕು ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

news18-kannada
Updated:May 16, 2021, 7:09 AM IST
ಕೊರೋನಾ ನಿಗ್ರಹಕ್ಕೆ ಪಾಲಿಕೆ ಸದಸ್ಯರೆಲ್ಲರೂ ಹೆಚ್ಚಿನ ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸಿ; ಜೆ.ಸಿ.‌ ಮಾಧುಸ್ವಾಮಿ
ಸಭೆ ನಡೆಸಿದ ಸಚಿವ ಮಾಧುಸ್ವಾಮಿ.
  • Share this:
ತುಮಕೂರು; ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೊರೋನಾ ನಿಗ್ರಹಕ್ಕೆ ಸದಸ್ಯರೆಲ್ಲರೂ ಹೆಚ್ಚಿನ ಜವಾಬ್ದಾರಿ ಹೊತ್ತು ಕಾರ್ಯ ನಿರ್ವಹಿಸುವ ಮೂಲಕ ನಗರವನ್ನು ಸೋಂಕಿನಿಂದ ಪಾರು ಮಾಡಲು‌ ಸಹಕರಿಸಬೇಕು ಎಂದು ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.‌ಮಾಧುಸ್ವಾಮಿ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಕೋವಿಡ್  ನಿಯಂತ್ರಣ ಸಂಬಂಧ ಪಾಲಿಕೆ ಸದಸ್ಯರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಟ್ಟುನಿಟ್ಟಿನ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ ಪರಿಣಾಮ ಕೆಂಪು ವಲಯದಲ್ಲಿದ್ದ ತುಮಕೂರು ಪ್ರಸ್ತುತ ಪಿಂಕ್ ವಲಯಕ್ಕೆ ಬಂದಿದೆ. ಆದರೂ, ಜಿಲ್ಲೆ ಸಮಾಧಾನದ ಸ್ಥಿತಿಗೆ ತಲುಪಬೇಕೆಂದರೆ ಸಂಪೂರ್ಣ ಕೋವಿಡ್ ನಿಗ್ರಹಕ್ಕೆ‌ ನಾವೆಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಸೋಂಕಿತರ ಆರೈಕೆಗಾಗಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ. ಆದರೆ ಸೆಂಟರ್ ಗೆ ಸೋಂಕಿತರು ಬರಲು ಹಿಂದೇಟು ಹಾಕುತ್ತಿದ್ದಾರೆ. ಇನ್ನು ಮುಂದೆ ಪಾಸಿಟಿವ್ ಬಂದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ಗೆ ಕಳುಹಿಸುವ ವ್ಯವಸ್ಥೆಗೆ ನಿರ್ಣಯ ತೆಗೆದುಕೊಳ್ಳಲಾಗಿದೆ. ಹಾಗಾಗಿ ಹೊಸ ಪಾಸಿಟಿವ್ ಪ್ರಕರಣಗಳ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಗೆ ಸ್ಥಳಾಂತರಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಪಾಲಿಕೆ ಸದಸ್ಯರೆಲ್ಲರೂ ಮುಂದಾಗಬೇಕು ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.

ಆಕ್ಸಿಜನ್, ಐಸಿಯು, ವೆಂಟಿಲೇಟರ್,  ಸೋಂಕಿತರಿಗೆ ನೀಡುವ ಚಿಕಿತ್ಸೆ, ಸೋಂಕಿತರ ಆರೈಕೆ, ಸೋಂಕು ಹರಡದಂತೆ ತಡೆಗಟ್ಟವುದು ಸೇರಿದಂತೆ ನಾನಾ ಸಮಸ್ಯೆಗಳ ನಿವಾರಣೆಗಾಗಿ ತೆಗೆದುಕೊಂಡು ಕ್ರಮಗಳಿಂದಾಗಿ ಸೋಂಕಿನ ನಿಯಂತ್ರಣದಲ್ಲಿ ಜಿಲ್ಲೆ ಸುಧಾರಣೆ ಕಂಡಿದೆ. ಮತ್ತಷ್ಟು ಸುಧಾರಣೆ ಆಗಲೇಬೇಕಿದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ಶ್ರಮಿಸುವ ಮೂಲಕ ಸದಸ್ಯರು ಸಹಕರಿಸಬೇಕು. ಸಮಸ್ಯೆಗಳಿದ್ದಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿ ಬಗೆಹರಿಸಿಕೊಳ್ಳಿ ಎಂದರು.

ಸಂಸದ ಜಿ.ಎಸ್.‌ಬಸವರಾಜು ಮಾತನಾಡಿ, ನಾವೆಲ್ಲರೂ ಕೋವಿಡ್ ಸಂಕಷ್ಟದಲ್ಲಿದ್ದೇವೆ. ಹೋಂ‌ ಕ್ವಾರಂಟೈನ್ ಅನ್ನು ಕಟ್ಟುನಿಟ್ಟಾಗಿ ಪಾಲನೆ‌ ಮಾಡಿ, ಕುಟುಂಬದವರಿಗೆ  ಸೋಂಕು ಹಬ್ಬುವುದನ್ನು ತಪ್ಪಿಸಬೇಕು. ಸೋಂಕಿತರನ್ನು ಕೋವಿಡ್ ಕೇರ್ ಗೆ ಸ್ಥಳಾಂತರಿಸುವ ಕೆಲಸ ಮಾಡಬೇಕು. ವಾರ್ಡ್ ಸಭೆ ಮಾಡಿ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ 8ನೇ ವಾರ್ಡಿನ ಪಾಲಿಕೆ ಸದಸ್ಯ ಸಯ್ಯಾದ್ ನಯಾಜ್ ಅಹಮದ್ ಮಾತನಾಡಿ, ಮೂರನೇ ಅಲೆ ಪ್ರಾರಂಭದ ವೇಳೆಗೆ ಕೋವಿಡ್ ಕಡಿವಾಣಕ್ಕೆ ಜಿಲ್ಲೆಯಲ್ಲಿ ಅತ್ಯಗತ್ಯ ಕ್ರಮ ಕೈಗೊಳ್ಳಬೇಕಿದೆ. ನಮ್ಮ ವ್ಯಾಪ್ತಿಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಗೆ ಆಕ್ಸಿಜನ್ ಪೂರೈಕೆ ಮಾಡಲು ಪೈಪ್ ಲೈನ್ ಅಳವಡಿಕೆಗೆ ಒಪ್ಪಿಗೆ ಕೊಡಬೇಕು. ಅಗತ್ಯವಿರುವ ಆಕ್ಸಿಜನ್ ಅನ್ನಿ ನಾವೇ ಪೂರೈಕೆ ಮಾಡಿಕೊಳ್ಳುತ್ತೇವೆ ಎಂದು ಮನವಿ‌ ಮಾಡಿದರು.

ಇದನ್ನೂ ಓದಿ: ಅಕ್ಕ ತಂಗಿಯನ್ನು ಒಂದೇ ಮುಹೂರ್ತದಲ್ಲಿ ವರಿಸಿದ ಮಾವ; ಕೋಲಾರದಲ್ಲಿ ನಡೆದಿದೆ ಅಪರೂಪದ ಮದುವೆ

ಇದಕ್ಕೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಪ್ರತಿಕ್ರಿಯಿಸಿ, ಆಮ್ಲಜನಕ ಪೂರೈಕೆ ಜಿಲ್ಲಾಡಳಿತದಿಂದಲೇ ಆಗಬೇಕು. ಯಾರೂ ಸ್ವಯಂ ಆಗಿ ಪೂರೈಕೆ ಮಾಡಿಕೊಳ್ಳುವಂತಿಲ್ಲ. ಜಿಲ್ಲಾಡಳಿತದ ಗಮನಕ್ಕೆ ಬಾರದೆ ಆಮ್ಲಜನಕ ರವಾನೆ ಹಾಗೂ ಬಳಕೆ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು. ಹಾಗಾಗಿ ಜಿಲ್ಲಾಡಳಿತದ ಒಪ್ಪಿಗೆ ಮೇರೆಗೆ ಆಮ್ಲಜನಕ ಪೂರೈಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
Youtube Video

ಈ ವೇಳೆ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಆಮ್ಲಜನಕ ಪೂರೈಕೆ ಜಿಲ್ಲೆಯ ಬೇಡಿಕೆಗೆ ಅನುಗುಣವಾಗಿ ಲಭ್ಯವಿಲ್ಲ.‌ ಆಮ್ಲಜನಕ ಪೂರೈಕೆಯಾದರೆ ಜಿಲ್ಲಾಸ್ಪತ್ರೆಯಲ್ಲೆ 200 ಹಾಸಿಗೆಗಳನ್ನು ಹೆಚ್ವಿಸಲಾಗುವುದು. ಆಮ್ಲಜನಕವನ್ನು ಜಿಲ್ಲಾಧಿಕಾರಿ ಒಪ್ಪಿಗೆ ಮೇರೆಗೆ ಪಡೆಯಬೇಕು. ಹಾಗಾಗಿ‌ ಆಮ್ಲಜನಕ ಸಾಂದ್ರಕಗಳ ಮೂಲಕ ಬೆಡ್ ಗಳ ವ್ಯವಸ್ಥೆ ಮಾಡು ಕೊಳ್ಳುವಂತೆ ತಿಳಿಸಿದರು.
Published by: MAshok Kumar
First published: May 16, 2021, 7:09 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories