• Home
  • »
  • News
  • »
  • district
  • »
  • Lockdown: ಸರ್ಕಾರದ ರೂಲ್ಸ್ ಜೊತೆ ಹೆಚ್ಚುವರಿ ನಿಯಮ, ಚಿತ್ರದುರ್ಗದಲ್ಲಿ ಮತ್ತಷ್ಟು ಟಫ್ ಲಾಕ್​ಡೌನ್ ರೂಲ್ಸ್ !

Lockdown: ಸರ್ಕಾರದ ರೂಲ್ಸ್ ಜೊತೆ ಹೆಚ್ಚುವರಿ ನಿಯಮ, ಚಿತ್ರದುರ್ಗದಲ್ಲಿ ಮತ್ತಷ್ಟು ಟಫ್ ಲಾಕ್​ಡೌನ್ ರೂಲ್ಸ್ !

ಚಿತ್ರದುರ್ಗ ಡಿಸಿ ಕವಿತಾ ಎಸ್ ಮನ್ನಿಕೇರಿ

ಚಿತ್ರದುರ್ಗ ಡಿಸಿ ಕವಿತಾ ಎಸ್ ಮನ್ನಿಕೇರಿ

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ-2005 ಮತ್ತು ಭಾರತೀಯ ದಂಡ ಸಂಹಿತೆ ಕಾಯ್ದೆ ಅನ್ವಯ ಸೂಕ್ತ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇನ್ನೂ ಸಾರ್ವಜನಿಕರ ಜೀವನಕ್ಕೆ ತೊಂದರೆ ಆಗದಂತೆ ನಿಗಧಿಯಾಗಿರುವ ವಿಮಾನ ಮತ್ತು ರೈಲುಗಳು, ಟ್ಯಾಕ್ಸಿ, ಆಟೋರಿಕ್ಷಾಗಳು, ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಹೋಟೆಲ್, ರೆಸ್ಟೋರೆಂಟ್ ಮತ್ತು ಮಳಿಗೆಗಳು ಪಾರ್ಸೆಲ್ ಹಾಗೂ ಹೋಂ ಡೆಲಿವರಿ ಸೇವೆ ಮಾತ್ರ ಅವಕಾಶ ನೀಡಲಾಗಿದೆ.

ಮುಂದೆ ಓದಿ ...
  • Share this:

ಚಿತ್ರದುರ್ಗ: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ  ಸೋಂಕಿನ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ನಾಳೆಯಿಂದ ಮಾರ್ಗಸೂಚಿ ಹೊರಡಿಸಿದೆ,ಇದೀಗ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತದ ವತಿಯಿಂದ ಇನ್ನಷ್ಟು ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದ್ದಾರೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೋನಾ ಸೋಂಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಆ  ಹೊಸ ಮಾರ್ಗಸೂಚಿಯು ನಾಳೆ ಬೆಳಿಗ್ಗೆ 6 ಗಂಟೆಯಿಂದ ಮೇ 24ರ ಬೆಳಿಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಸರ್ಕಾರದ ಆದೇಶದ ಅನುಬಂಧದಲ್ಲಿ ಪ್ರಸ್ತಾಪಿಸಿರುವ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳನ್ನು ಸಾಮಾಜಿಕ ಅಂತರ ಹಾಗೂ ಸೂಕ್ತ ಎಚ್ಚರಿಕೆ ಕ್ರಮಗಳನ್ನು ಅನುಸರಿಸಿ ಮುಂದುವರೆಸಲು ಅವಕಾಶ ನೀಡಲಾಗಿದೆ. ವೈಯಕ್ತಿಕ ಓಡಾಟಗಳು, ಅನಿವಾರ್ಯವಲ್ಲದ ಚಟುವಟಿಕೆಗಳ ಕಾರ್ಯನಿರ್ವಹಣೆಯನ್ನು ಕಡ್ಡಾಯವಾಗಿ ನಿಷೇಧಿಸಿ CRPC ಸೆಕ್ಷನ್ 144 ಜಾರಿಗೊಳಿಸಲಾಗಿರುತ್ತದೆ.


ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣೆ ಕಾಯ್ದೆ-2005 ಮತ್ತು ಭಾರತೀಯ ದಂಡ ಸಂಹಿತೆ ಕಾಯ್ದೆ ಅನ್ವಯ ಸೂಕ್ತ ಕಾನೂನು ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇನ್ನೂ ಸಾರ್ವಜನಿಕರ ಜೀವನಕ್ಕೆ ತೊಂದರೆ ಆಗದಂತೆ ನಿಗಧಿಯಾಗಿರುವ ವಿಮಾನ ಮತ್ತು ರೈಲುಗಳು, ಟ್ಯಾಕ್ಸಿ, ಆಟೋರಿಕ್ಷಾಗಳು, ತುರ್ತು ಸಂದರ್ಭಗಳಲ್ಲಿ ಹಾಗೂ ಮಾರ್ಗಸೂಚಿಯಲ್ಲಿ ಅನುಮತಿಸಿದ ರೀತಿಯಲ್ಲಿ ಹೋಟೆಲ್, ರೆಸ್ಟೋರೆಂಟ್ ಮತ್ತು ಮಳಿಗೆಗಳು ಪಾರ್ಸೆಲ್ ಹಾಗೂ ಹೋಂ ಡೆಲಿವರಿ ಸೇವೆ ಮಾತ್ರ ಅವಕಾಶ ನೀಡಲಾಗಿದೆ. ಅಲ್ಲದೇ ರಾಜ್ಯ ಮತ್ತು ಕೇಂದ್ರ ಸರ್ಕಾರದ ಅಗತ್ಯ ಸೇವೆ ನೀಡುವ ಕಚೇರಿಗಳು ಮಾತ್ರ ಕಾರ್ಯನಿರ್ವಹಿಸಲಿವೆ. ಎಲ್ಲಾ ಆರೋಗ್ಯ ಸೇವಾ ಸೌಲಭ್ಯಗಳು ಮತ್ತು ಸಂಬಂಧಿತ ಸೇವೆಗಳು, ಕೃಷಿ ಮತ್ತು ಪೂರಕ ಚಟುವಟಿಕೆಗಳು, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಮಾಂಸ ಮತ್ತು ಹೈನುಗಾರಿಕೆಗೆ ಸಂಬಂಧಿಸಿದ ಚಟುವಟಿಕೆ, ಸರಕು ಸಾಗಾಣಿಕೆ ವಾಹನಗಳ ಮುಕ್ತ ಸಂಚಾರಕ್ಕೆ ಅನುಮತಿ ನೀಡಲಾಗಿದೆ.


ಆಹಾರ ಸಾಮಾಗ್ರಿ, ದಿನಸಿ, ಹಣ್ಣು-ತರಕಾರಿ, ಮಾಂಸ ಮತ್ತು ಮೀನಿನ ಮಳಿಗೆಗಳು ಮತ್ತು ಪಶು ಆಹಾರದ ಮಳಿಗೆಗಳು ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ. ಹಾಲಿನ ಬೂತ್, ತಳ್ಳುಗಾಡಿಗಳು, ತರಕಾರಿ ಮಾರಾಟಕ್ಕೆ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಅವಕಾಶ ಕಲ್ಪಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳು, ಮದ್ಯಮಾರಾಟ ಮಳಿಗೆಗಳು ಕೇವಲ ಪಾರ್ಸೆಲ್ ಸೇವೆಗಾಗಿ ಬೆಳಿಗ್ಗೆ 6 ರಿಂದ 10 ರವರೆಗೆ ದಿನದ 24 ಗಂಟೆಯೂ ಅಗತ್ಯ ವಸ್ತುಗಳ ಹೋಂ ಡೆಲಿವರಿ ಸೇವೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.


ಇನ್ನೂ ಬಸ್, ಮೆಟ್ರೋ, ರೈಲು ಸಂಚಾರ, ಶಾಲೆ, ಕಾಲೇಜುಗಳು, ಶಿಕ್ಷಣ, ಕೋಚಿಂಗ್ ಸಂಸ್ಥೆಗಳ ತರಗತಿಗಳು, ಸಿನಿಮಾ ಹಾಲ್, ಶಾಪಿಂಗ್ ಮಾಲ್, ಜಿಮ್ನೇಶಿಯಂಗಳು, ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ, ಈಜುಕೋಳ, ಉದ್ಯಾನವನಗಳು, ಮನರಂಜನಾ ಪಾರ್ಕ್, ಕ್ಲಬ್, ಥಿಯೇಟರ್, ಬಾರ್ ಮತ್ತು ಸಭಾಂಗಣ, ಸಮುದಾಯ ಭವನಗಳಂತಹ ಸ್ಥಳಗಳು ಮುಚ್ಚಲಿವೆ. ಎಲ್ಲ ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳು ಸೇರಿದಂತೆ ಜನ ಸೇರುವ ಕಾರ್ಯಕ್ರಮಗಳು ಸಮಾವೇಶಗಳ ನಿಷೇಧ ಮಾಡಲಾಗಿದೆ. ಎಲ್ಲಾ ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ ಹೇರಲಾಗಿದೆ  ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.

Published by:Soumya KN
First published: