ಹಾಸನ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-19 ಸಾವು; ಮೃತರ ಸಂಖ್ಯೆ 5ಕ್ಕೆ ಏರಿಕೆ
ಜಿಲ್ಲೆಯಲ್ಲಿಂದು ಹೊಸದಾಗಿ 15 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 441 ಕ್ಕೆ ಏರಿಕೆಯಾಗಿದೆ. 246 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 190 ಮಂದಿ ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಾಸನ; ಹಾಸನ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-19 ಸಾವು ಸಂಭವಿಸಿದೆ. ಇದರೊಂದಿಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಶಸ್ತ್ರಚಿಕಿತ್ಸಕರಾದ ಡಾ. ಕೃಷ್ಣಮೂರ್ತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಇಂದು ಚನ್ನರಾಯಪಟ್ಟಣದ 65 ವರ್ಷದ ವೃದ್ಧ ಕೊರೋನಾ ಸೋಂಕಿತನಿಂದ ಮೃತಪಟ್ಟಿದ್ದಾರೆ. ಕಳೆದ ರಾತ್ರಿ 12.45ಕ್ಕೆ ಖಾಸಗಿ ಆಸ್ಪತ್ರೆಯಿಂದ ರೆಫರ್ ಅಗಿ ಕೋವಿಡ್ ಆಸ್ಪತ್ರೆಗೆ ಬಂದಿರುತ್ತಾರೆ. ಬೆಳಿಗ್ಗೆ 7.45ಕ್ಕೆ ಸಾವು ಸಂಭವಿಸಿದೆ. ಮೃತರು ಮಧುಮೇಹ ರೋಗದಿಂದ ಬಳಲುತ್ತಿದ್ದ ಕಾರಣ ಸೋಂಕಿತರ ಗಂಟಲ ದ್ರವ ತೆಗೆದು ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ವರದಿ ಬಂದಿದೆ ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿಂದು ಹೊಸದಾಗಿ 15 ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 441 ಕ್ಕೆ ಏರಿಕೆಯಾಗಿದೆ. 246 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, 190 ಮಂದಿ ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ