HOME » NEWS » District » ANTI LAND ACQUISITION PROTEST RUN ON THE 5TH DAY IN HAVERI RHHSN SKG

5ನೇ ದಿನಕ್ಕೆ ಕಾಲಿಟ್ಟ ರೈತರ ಭೂ ಸ್ವಾಧೀನ ವಿರೋಧಿ ಹೋರಾಟ; ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ಹೋರಾಟಗಾರರು

ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸದಿದ್ದರೆ ಕಾಮಗಾರಿ ಜಾಗದಲ್ಲಿ ರೈತರು ಹಾಗೂ  ಕುಟುಂಬದವರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ. ಸರ್ಕಾರ ಇನ್ನೆರಡು ದಿನಗಳಲ್ಲಿ ನಿರ್ಣಯ ಕೈಗೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದರು. 

news18-kannada
Updated:December 5, 2020, 2:34 PM IST
5ನೇ ದಿನಕ್ಕೆ ಕಾಲಿಟ್ಟ ರೈತರ ಭೂ ಸ್ವಾಧೀನ ವಿರೋಧಿ ಹೋರಾಟ; ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ಹೋರಾಟಗಾರರು
ಭೂ ಸ್ವಾಧೀನ ವಿರೋಧಿಸಿ ಹಾವೇರಿ ಜಿಲ್ಲೆಯ ರೈತರ ಹೋರಾಟ.
  • Share this:
ಹಾವೇರಿ; ಶಿಕಾರಿಪುರ ತಾಲ್ಲೂಕಿನ ಉಡುಗಣಿ ತಾಳಗುಂದ, ಹೊಸೂರು ಗ್ರಾಮಗಳಿಗೆ ತುಂಗಭದ್ರಾ ನದಿ ನೀರು ಪೂರೈಸಲು ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲ್ಲೂಕಿನ ರೈತರ ಭೂಮಿ ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ  ನಮ್ಮ ಭೂಮಿ ನಮ್ಮ ಹಕ್ಕು ಹೋರಾಟ ಸಮಿತಿ ಹಾಗೂ ರೈತಪರ ಸಂಘಟನೆ ನಡೆಸುತ್ತಿರುವ ಹೋರಾಟ ಐದನೇ ದಿನಕ್ಕೆ ಕಾಲಿಟ್ಟಿದೆ. ಈ ಹೋರಾಟದಲ್ಲಿ ವಿವಿಧ ರೈತ ಸಂಘಟನೆಯ ಮುಖಂಡರು, ಭೂಮಿ ಕಳೆದುಕೊಳ್ಳುವ ರೈತರು ಹಾಗೂ ಸಾಮಾಜಿಕ ಹೋರಾಟಗಾರ ಬಿ.ಡಿ ಹಿರೇಮಠ ಪಾಲ್ಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಬಿ.ಡಿ ಹಿರೇಮಠ ಅವರು, ಸರ್ಕಾರಿ ಯೋಜನೆ ಜಾರಿಗೆ ಆಸಕ್ತಿ ತೋರುವ ಸರ್ಕಾರಗಳು, ರೈತರನ್ನು ಬದುಕಿಸಬೇಕು ಎಂಬ ಇಚ್ಛಾಶಕ್ತಿಯನ್ನು ಸಹ ಹೊಂದಿರಬೇಕು. ಈಗಾಗಲೇ ಸತ್ಯಾಗ್ರಹ ಉಗ್ರರೂಪ ಪಡೆದುಕೊಳ್ಳುತ್ತಿದ್ದು, ಸಮಿತಿ ಅಧ್ಯಕ್ಷ ಅಸ್ವಸ್ಥರಾಗಿದ್ದಾರೆ. ರೈತರು ಇಲ್ಲಿ ಜೀವನ- ಮರಣದ ನಡುವೆ ಹೋರಾಟ ನಡೆಸಿದ್ದಾರೆ. ಈಗಾಗಲೇ ಹಲವಾರು ಸರ್ಕಾರಿ ಯೋಜನೆಗೆ ರೈತರು ಭೂಮಿ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಮತ್ತೆ ಈ ಯೋಜನೆಗಾಗಿ ಭೂಮಿ ಕಳೆದುಕೊಂಡರೆ ಅವರು ಬದುಕು ಬೀದಿಗೆ ಬರುತ್ತದೆ ಎಂದರು.

ಇದನ್ನು ಓದಿ: Karnataka Bandh | ವಿಜಯಪುರದಲ್ಲಿ ಜಿದ್ದಾಜಿದ್ದಿ ಬದಲು ಕೇವಲ ಪ್ರತಿಭಟನೆಗೆ ಸೀಮಿತವಾದ ಬಂದ್

ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸದಿದ್ದರೆ ಕಾಮಗಾರಿ ಜಾಗದಲ್ಲಿ ರೈತರು ಹಾಗೂ  ಕುಟುಂಬದವರು ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ. ಸರ್ಕಾರ ಇನ್ನೆರಡು ದಿನಗಳಲ್ಲಿ ನಿರ್ಣಯ ಕೈಗೊಳ್ಳಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದರು.
Published by: HR Ramesh
First published: December 5, 2020, 2:34 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories