‘ಪಠ್ಯದಿಂದ ಟಿಪ್ಪು ಅಧ್ಯಾಯ ಕೈಬಿಟ್ಟ ಸರ್ಕಾರಕ್ಕೆ ಅಭಿನಂದನೆಗಳು‘ - ಶಾಸಕ ಅಪ್ಪಚ್ಚು ರಂಜನ್​​

ಟಿಪ್ಪು ಸುಲ್ತಾನ್ ವಿಚಾರ ಒಂದು ಜಾತಿ, ವರ್ಗಕ್ಕೆ ಸೇರಿದ್ದಲ್ಲ. ಟಿಪ್ಪು ಈ ದೇಶದ ಇತಿಹಾಸದ ಭಾಗ. ಬಿಜೆಪಿ ಸ್ವ ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನೇ ತಿರುಚಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್​ ಆರೋಪಿಸಿದೆ.

ಅಪ್ಪಚು ರಂಜನ್

ಅಪ್ಪಚು ರಂಜನ್

  • Share this:
ಕೊಡಗು(ಜು.29): ಏಳನೇ ತರಗತಿಯ ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನ್ ಅಧ್ಯಾಯವನ್ನು ತೆಗೆದು ಹಾಕಿರುವುದ ರಾಜ್ಯ ಸರ್ಕಾರಕ್ಕೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಧನ್ಯವಾದ ಸಮರ್ಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತಾಡುವ ವೇಳೆ ಅಪ್ಪಚ್ಚು ರಂಜನ್​​ ಟಿಪ್ಪು ಸುಲ್ತಾನ್​​ ಅಧ್ಯಾಯ ತೆಗೆದ ರಾಜ್ಯ ಸರ್ಕಾರ ನಿರ್ಧಾರವನ್ನು ಸ್ವಾಗತಿಸಿದರು.


ಟಿಪ್ಪು ಸುಲ್ತಾನ್ ಎನ್ನುವ ಹೆಸರೇ ಕೊಡಗಿಗೆ ಒಂದು ಅಪಮಾನ‌. ಆತ ಏನನ್ನೂ ಮಾಡದಿದ್ದರೂ ಪಠ್ಯದಲ್ಲಿ ಆತನ ವೈಭವೀಕರಿಸಿದ ವಿಷಯವನ್ನಿಟ್ಟು ಐತಿಹಾಸಿಕವಾಗಿ ವಿಜೃಂಭಿಸುವ ಕೆಲಸವನ್ನು ಮಾಡಲಾಗಿತ್ತು. ಟಿಪ್ಪು ಮಾಡಿರುವುದು ಎಲ್ಲವೂ ಅನ್ಯಾಯದ ಕೆಲಸಗಳು ಎಂದರು.

ಪಠ್ಯದಿಂದ ಟಿಪ್ಪು ಅಧ್ಯಾಯ ಕೈಬಿಟ್ಟಿರುವುದು ಸಂತಸದ ವಿಷಯ. ದೇಶ ವಿರೋಧಿ ಟಿಪ್ಪು ಸುಲ್ತಾನ್​​ನ ವಿಷಯವನ್ನು ಪಠ್ಯ ಪುಸ್ತಕದಿಂದ ತೆಗೆದು ಹಾಕುವಂತೆ ನಾವೂ ಹಲವು ಭಾರಿ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಜೊತೆಗೆ ಸಂಘ ಪರಿವಾರ ಮತ್ತು ಟಿಪ್ಪು ವಿರೋಧಿ ಹೋರಾಟ ಸಮಿತಿ ಕೂಡ ಇದಕ್ಕಾಗಿ ಶ್ರಮಿಸಿತ್ತು. ಅವರೆಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದರು.

ನಮ್ಮೆಲ್ಲರ ಹೋರಾಟದರಂತೆ ರಾಜ್ಯ ಸರ್ಕಾರ ತೀರ್ಮಾನವನ್ನು ತೆಗೆದುಕೊಂಡು ಟಿಪ್ಪು ವಿಷಯವನ್ನು ಪಠ್ಯದಿಂದ ಕೈಬಿಟ್ಟಿದೆ. ಇದಕ್ಕೆ ಸಹಕರಿಸಿದ ಟಿಪ್ಪು ವಿರೋಧಿ ಹೋರಾಟ ಸಮಿತಿ, ಸಂಘ ಪರಿವಾರದ ಮುಖಂಡರು ಹಾಗೂ ಸಿಎಂ ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಧನ್ಯವಾದ ಎಂದಿದ್ದಾರೆ.

ಟಿಪ್ಪು ಸುಲ್ತಾನ್ ವಿಚಾರ ಒಂದು ಜಾತಿ, ವರ್ಗಕ್ಕೆ ಸೇರಿದ್ದಲ್ಲ. ಟಿಪ್ಪು ಈ ದೇಶದ ಇತಿಹಾಸದ ಭಾಗ. ಬಿಜೆಪಿ ಸ್ವ ರಾಜಕೀಯ ಲಾಭಕ್ಕಾಗಿ ಇತಿಹಾಸವನ್ನೇ ತಿರುಚಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್​ ಆರೋಪಿಸಿದೆ.

ಇದನ್ನೂ ಓದಿ: ಏಳನೇ ತರಗತಿ ಪಠ್ಯಪುಸ್ತಕದಿಂದ ಟಿಪ್ಪು ಪಾಠ ಕೈ ಬಿಡುವ ಬಗ್ಗೆ ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರ ಆಕ್ರೋಶ

ಏಳನೇ ತರಗತಿಯಿಂದ ಪಠ್ಯದಿಂದ ಟಿಪ್ಪು ಸುಲ್ತಾನ್ ಅವರ ಪಾಠ ಕೈಬಿಡುವ ಬಗ್ಗೆ ರಾಜ್ಯ ಸರ್ಕಾರದ ಪ್ರಸ್ತಾವನೆ ವಿಚಾರವಾಗಿ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್​ ಅಧ್ಯಕ್ಷ ಡಿ.ಕೆ ಶಿವಕುಮಾರ್, ಟಿಪ್ಪು ಜಯಂತಿ ಆಚರಣೆ ಮಾಡುವುದು ಬಿಡುವುದು ಆ ಸರ್ಕಾರಕ್ಕೆ ಬಿಟ್ಟ ವಿಚಾರ. ಟಿಪ್ಪು, ಹೈದರಾಲಿ ಅವರು ನಮ್ಮ ಇತಿಹಾಸದ ಭಾಗ. ಈ ದೇಶದ ರಾಷ್ಟ್ರಪತಿ ಕೋವಿಂದ್ ಅವರು ವಿಧಾನಸೌಧಕ್ಕೆ ಬಂದು ಜಂಟಿ ಅಧಿವೇಶನದಲ್ಲಿ ಟಿಪ್ಪು ಇತಿಹಾಸ, ಚರಿತ್ರೆ, ದೇಶಭಕ್ತಿ ಬಗ್ಗೆ ಹಾಡಿ ಹೊಗಳಿ ಹೋಗಿದ್ದಾರೆ. ಇವತ್ತು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಅಂತಾ ಇತಿಹಾಸ ಬದಲಿಸಲು ಹೊರಟಿರುವುದು ಹಾಗೂ ಸಂವಿಧಾನವನ್ನು ತಿರುಚಿ ಬರೆಯಲು ಪ್ರಯತ್ನ ನಡೆಯುತ್ತಿರುವುದು ತಪ್ಪು ಜೊತೆಗೆ ಖಂಡನೀಯ ಎಂದು ಅಸಮಾಧಾನ ಹೊರಹಾಕಿದರು.
Published by:Ganesh Nachikethu
First published: