• Home
  • »
  • News
  • »
  • district
  • »
  • ಲಾಕ್​ಡೌನ್ ನಿಯಮ ಉಲ್ಲಂಘನೆ ಪ್ರಶ್ನಿಸಿದ ಪೊಲೀಸ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ; 5 ಜನರ ವಿರುದ್ಧ FIR

ಲಾಕ್​ಡೌನ್ ನಿಯಮ ಉಲ್ಲಂಘನೆ ಪ್ರಶ್ನಿಸಿದ ಪೊಲೀಸ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ; 5 ಜನರ ವಿರುದ್ಧ FIR

ಪ್ರಾತಿನಿಧಿಕ ಚಿತ್ರ.

ಪ್ರಾತಿನಿಧಿಕ ಚಿತ್ರ.

ಈ ವೇಳೆಯಲ್ಲಿ ಪೊಲೀಸರ ಜತೆಗೆ ವಾಗ್ವಾದ ನಡೆಸಿರುವ ಕೆಲ ದುಷ್ಕರ್ಮಿಗಳು ಪೊಲೀಸ್ ಪೇದೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಜತೆಗೆ ಪೊಲೀಸರನ್ನು ತಳ್ಳಾಟ ನೂಕಾಟ ನಡೆಸಿದ್ದಾರೆ.

  • Share this:

ಬೆಳಗಾವಿ (ಜೂನ್. 15); ಕೊರೋನಾ ಸೋಂಕಿನ ಎರಡನೇ ಅಲೆಯ ಅಬ್ಬರ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಜೂನ್ 21ರ ವರೆಗೆ ಲಾಕ್ ಡೌನ್ ಮುಂದುವರೆಸಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆಯ ವರೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಆದರೇ ಮಾರುಕಟ್ಟೆ ಪ್ರದೇಶದಲ್ಲಿ ಬೇಕಾಬಿಟ್ಟಿಯಾಗಿ ಯುವಕರ ಗುಂಪು ಸಂಚಾರ ನಡೆಸಿತ್ತು. ಇದನ್ನು ಪ್ರಶ್ನಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿದೆ. ನಿನ್ನೆ ರಾತ್ರಿ 9 ಗಂಟೆ ಸುಮಾರಿನಲ್ಲಿ ಘಟನೆ ನಡೆದಿದ್ದು, ಪ್ರಕರಣವನ್ನು ಮಾರ್ಕೆಟ್ ಪೊಲೀಸ್ ಠಾಣೆಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಪ್ರಕರಣ ಸಂಬಂಧ 5 ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.


ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ದರ್ಬಾರ್ ಗಲ್ಲಿಯಲ್ಲಿ ನಿತ್ಯ ರಾತ್ರಿ 20ಕ್ಕೂ ಹೆಚ್ಚು ಯುವಕರ ಗುಂಪು ಬೇಕಾಬಿಟ್ಟಿಯಾಗಿ ರಸ್ತೆಯ ಮೇಲೆ ಓಡಾಡುತ್ತದೆ. ಇದನ್ನು ಗಮಿಸಿದ ಪೊಲೀಸರು ನಿನ್ನೆ ರಾತ್ರಿ ಯುವಕರನ್ನ ತಡೆದಯ ಪ್ರಶ್ನೆ ಮಾಡಲು ಮುಂದಾಗಿದ್ದಾರೆ. ಈ ವೇಳೆಯಲ್ಲಿ ಪೊಲೀಸರ ಜತೆಗೆ ವಾಗ್ವಾದ ನಡೆಸಿರುವ ಕೆಲ ದುಷ್ಕರ್ಮಿಗಳು ಪೊಲೀಸ್ ಪೇದೆಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಾರೆ. ಜತೆಗೆ ಪೊಲೀಸರನ್ನು ತಳ್ಳಾಟ ನೂಕಾಟ ನಡೆಸಿದ್ದಾರೆ.


ಯುವಕರ ತಂಡ ಪೊಲೀಸರ ಜತೆಗೆ ವಾಗ್ವಾದ ಹಾಗೂ ಹಲ್ಲೆ ನಡೆಸುವ ದೃಶ್ಯ ಸಹ ಹತ್ತಿರ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಬಗ್ಗೆ ಪೊಲೀಸ್ ಪೇದೆಯಿಂದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸೆಕ್ಷನ್ 353, 332, 323, 504, 506, 143, 147, 149 ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗ ತಡೆ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಅನೇಕರನ್ನು ಪೊಲೀಸರು ಕರೆದು ವಿಚಾರಣೆ ನಡೆಸಿದ್ದಾರೆ. ಮುಖ್ಯ ಆರೋಪಿಗಳು ಪರಾರಿಯಾಗಿದ್ದು, ಪತ್ತೆಗೆ ಬಲೆ ಬೀಸಲಾಗಿದೆ.


ಇದನ್ನೂ ಓದಿ: ತರಬೇತಿ ಪಡೆದ ಮಹಿಳೆಯರೂ ಇನ್ನೂ ದೇವಾಲಯಗಳಲ್ಲಿ ಅರ್ಚನೆ ಮಾಡಬಹುದು; ತಮಿಳುನಾಡು ಸರ್ಕಾರ


ಪ್ರಕರಣ ಸಂಬಂಧ ಬೆಳಗಾವಿಯಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಡಿಸಿಪಿ ವಿಕ್ರಮ ಅಮಟೆ, ಬೆಳಗಾವಿ ನಗರದಲ್ಲಿ ಕೊರೊನಾ ತಡೆಗಟ್ಟಲು ಲಾಕ್ ಡೌನ್ ಮಾಡಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಸಂಘ, ಸಂಸ್ಥೆಗಳು ಹಾಗೂ ಸಾರ್ವಜನಿಕರು ಸಹಕಾರ ನೀಡಿದ್ದಾರೆ. ಕೋವಿಡ್ ಸೋಂಕು ತಡೆಗಟ್ಟಲು ಲಾಕ್ ಡೌನ್ ಮಾಡಲಾಗಿದೆ. ತಡರಾತ್ರಿ ಯುವಕರು ಗುಂಪು ಕಟ್ಟಿಕೊಂಡು ನಿಲ್ಲುವುದು ಕಾನೂನಿನ ಉಲ್ಲಂಘನೆಯಾಗಿದೆ. ಅಂತಹ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ ಮಾಡಲು ಕ್ರಮ ಕೈಗೊಳ್ಳುತ್ತೇವೆ. ಪೊಲೀಸರ ಮೇಲೆ ಹಲ್ಲೆ ಹಾಗೂ ಹಲ್ಲೆಗೆ ಉತ್ತೇಜನ ನೀಡಿದರ ಮೇಲೆ ಕಾನೂನಿನ ಕ್ರಮ ಕೈಗೊಳ್ಳಲಾಗುವುದು.


ಇದನ್ನೂ ಓದಿ: CAA Act: ಪೌರತ್ವ ಕಾಯ್ದೆಯ ಬಗೆಗಿನ ಅಫಿಡವಿಟ್​ಗೆ ಪ್ರತಿಕ್ರಿಯಿಸಲು ಮುಸ್ಲೀಂ ಲೀಗ್​ಗೆ 2 ವಾರ ಗಡುವು ನೀಡಿದ ಸುಪ್ರೀಂ!


ಪ್ರಕರಣ ಸಂಬಂಧ ಈಗಾಗಲೇ ಕಾರ್ಯಾಚರಣೆ ನಡೆಸಲಾಗುವುದು, ಶೀಘ್ರದಲ್ಲಿಯೇ ಆರೋಪಿಗಳನ್ನು ಬಂಧಿಸುತ್ತೇವೆ. ಲಾಕ್ ಡೌನ್ ಸಂದರ್ಭದಲ್ಲಿ ಸಹಕಾರ ನೀಡಬೇಕು ಎಂದು ಸ್ಥಳೀಯರ ಜತೆಗೆ ಮಾತುಕತೆ ನಡೆಸಲಾಗಿದೆ. ಕೆಲ ಕಿಡಿಗೇಡಿಗಳು ಈ ರೀತಿಯ ಕೃತ್ಯ ಮಾಡಿದ್ದು, ಕಾನೂನಿನ ಮೂಲಕ ಪಾಠ ಕಲಿಸಲಾಗವುದು ಎಂದರು.


ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.

Published by:MAshok Kumar
First published: