ಹಾಡಹಗಲೇ ಚಿನ್ನದ ಅಂಗಡಿಯಲ್ಲಿ ದರೋಡೆ; ಕುಕೃತ್ಯಕ್ಕೆ ಬೆಚ್ಚಿ ಬಿದ್ದ ಶೃಂಗೇರಿ

ಕೈಯಲ್ಲಿದ್ದ ಮೂರು ಚಿನ್ನದ ಸರದೊಂದಿಗೆ ನಾಪತ್ತೆಯಾಗಿದ್ದಾನೆ. ಅಂಗಡಿಯವರು ಹಾಗೂ ಅಕ್ಕಪಕ್ಕದ ಜನ ಆತನನ್ನ ಹಿಡಿಯಲು ಪ್ರಯತ್ನಿಸಿದರು ಆತ ಯಾರ ಕೈಗೂ ಸಿಕ್ಕದೆ ನಾಪತ್ತೆಯಾಗಿದ್ದಾನೆ. ಮುಖಕ್ಕೆ ಮಾಸ್ಕ್ ಧರಿಸಿದ್ದರಿಂದ ಆತನ ಗುರುತು ಕೂಡ ಪತ್ತೆಯಾಗಿಲ್ಲ.

news18-kannada
Updated:August 12, 2020, 9:56 PM IST
ಹಾಡಹಗಲೇ ಚಿನ್ನದ ಅಂಗಡಿಯಲ್ಲಿ ದರೋಡೆ; ಕುಕೃತ್ಯಕ್ಕೆ ಬೆಚ್ಚಿ ಬಿದ್ದ ಶೃಂಗೇರಿ
ಪ್ರಾತಿನಿಧಿಕ ಚಿತ್ರ.
  • Share this:
ಚಿಕ್ಕಮಗಳೂರು (ಆಗಸ್ಟ್‌ 12) : ಹಾಡಹಗಲೇ ಬಂಗಾರದ ಅಂಗಡಿಗೆ ನುಗ್ಗಿ ಲಾಂಗ್ ತೋರಿಸಿ ಮೂರು ಚಿನ್ನದ ಸರ ದರೋಡೆ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಪಟ್ಟಣದಲ್ಲಿ ನಡೆದಿದೆ. ಹಾಡಹಗಲೇ ರಾಜಾರೋಷವಾಗಿ ಏಕಾಂಗಿಯಾಗಿ ವ್ಯಕ್ತಿಯೋರ್ವ ಈ ರೀತಿ ದರೋಡೆಗೆ ಮುಂದಾಗಿರುವುದರಿಂದ ಗ್ರಾಮೀಣ ಭಾಗದ ಜನ ಮತ್ತಷ್ಟು ಕಂಗಾಲಾಗಿದ್ದಾರೆ.

ಶೃಂಗೇರಿ ಪಟ್ಟಣದಲ್ಲಿರೋ ನಾಗಪ್ಪ ಶೆಟ್ಟಿ ಎಂಬುವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿ ಒಡವೆಗಳನ್ನ ನೋಡುತ್ತಾ ಏಕಾಏಕಿ ಕೈನಲ್ಲಿದ್ದ ಬ್ಯಾಗಿನಿಂದ ಲಾಂಗ್ ತೆಗೆದು ಕುರ್ಚಿ ಮೇಲಿಟ್ಟಿದ್ದಾನೆ. ಲಾಂಗ್ ಕಂಡು ಅಂಗಡಿಯಲ್ಲಿದ್ದ ಮಹಿಳಾ ಕೆಲಸಗಾರರು ಕಿರುಚಿಕೊಂಡು ಸೈಡಿಗೆ ಹೋಗಿದ್ದಾರೆ. ಕೂಡಲೇ ಕ್ಯಾಶ್ ಟೇಬಲ್ ದಾಟಿ ಒಳ ಹೋದ ದರೋಡೆಕೋರ ಕೈಗೆ ಸಿಕ್ಕಷ್ಟು ಚಿನ್ನದ ಒಡವೆಗಳನ್ನ ದೋಚಿಕೊಂಡು ಬ್ಯಾಗ್‌ನಲ್ಲಿ ತುಂಬಿಕೊಂಡಿದ್ದಾನೆ.

ಆ ವೇಳೆಗೆ ಅಂಗಡಿಯಲ್ಲಿದ್ದ ಮಾಲೀಕ ಕೂಡ ಓಡಿಬಂದು ಆತನ ಮೇಲೆ ಹಲ್ಲೆ ಮಾಡಿದ್ದಾನೆ. ಮಹಿಳಾ ಕೆಲಸಗಾರರು ಕೂಡ ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಆದರೆ, ಆತ ಕೈಗೆ ಸಿಕ್ಕಷ್ಟು ಚಿನ್ನವನ್ನ ಚೀಲದಲ್ಲಿ ತುಂಬಿಕೊಂಡು ಕ್ಯಾಶ್ ಟೇಬಲ್ ದಾಟುವಾಗ ಅಂಗಡಿ ಮಾಲೀಕ ಆತನ ಮೇಲೆ ಚೇರ್ನಿಂದ ಹೊಡೆದಿದ್ದಾನೆ. ಈ ವೇಳೆ, ಕ್ಯಾಶ್ ಟೇಬಲ್ ದಾಟುವಾಗ ಸಿಕ್ಕಿ ಬೀಳ್ತೆಂಬ ಭಯದಿಂದ ಆತ ಲಾಂಗ್ ಹಾಗೂ ಚೀಲವನ್ನ ಅಲ್ಲೆ ಬಿಟ್ಟು ಹೋಗಿದ್ದಾನೆ.

ಇದನ್ನೂ ಓದಿ : CoronaVirus Update: ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರಿಗೂ ಕೊರೋನಾ ಸೋಂಕು ದೃಢ

ಆದರೆ, ಕೈಯಲ್ಲಿದ್ದ ಮೂರು ಚಿನ್ನದ ಸರದೊಂದಿಗೆ ನಾಪತ್ತೆಯಾಗಿದ್ದಾನೆ. ಅಂಗಡಿಯವರು ಹಾಗೂ ಅಕ್ಕಪಕ್ಕದ ಜನ ಆತನನ್ನ ಹಿಡಿಯಲು ಪ್ರಯತ್ನಿಸಿದರು ಆತ ಯಾರ ಕೈಗೂ ಸಿಕ್ಕದೆ ನಾಪತ್ತೆಯಾಗಿದ್ದಾನೆ. ಮುಖಕ್ಕೆ ಮಾಸ್ಕ್ ಧರಿಸಿದ್ದರಿಂದ ಆತನ ಗುರುತು ಕೂಡ ಪತ್ತೆಯಾಗಿಲ್ಲ.

ಆತನ ಈ ಎಲ್ಲಾ ಕೃತ್ಯ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೃಂಗೇರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಘಟನೆಯಿಂದ ಶೃಂಗೇರಿ ಪಟ್ಟಣ ಕೂಡ ಬೆಚ್ಚಿ ಬಿದ್ದಿದೆ.
Published by: MAshok Kumar
First published: August 12, 2020, 9:56 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading