ನರೇಗಾ ಯೋಜನೆಯಡಿ ರಾಜ್ಯದಲ್ಲೇ ಬಾಗಲಕೋಟೆಗೆ 3ನೇ ಸ್ಥಾನ; ಇನ್ಮುಂದೆ ಈ ಯೋಜನೆಯಲ್ಲಿ ಶಾಲಾಭಿವೃದ್ಧಿ ಭಾಗ್ಯ!

ಪ್ರೌಢಶಾಲಾ ಆವರಣದಲ್ಲಿ ಸಸಿ ನೆಡುವುದು, ಶಾಲಾ ಕಾಂಪೌಂಡ್, ಶೌಚಾಲಯ ಹಾಗೂ ಕಿಚನ್ ಗಾರ್ಡನ್ ಕಾರ್ಯ ಕೈಗೊಳ್ಳುವ ಮೂಲಕ ಮಕ್ಕಳಿಗೆ ಉತ್ತಮ ವಾತಾವರಣ ರೂಪಿಸಲು ಕ್ರಿಯಾ ಯೋಜನೆ ತಯಾರಿಸಿ ಮಾದರಿ ಶಾಲೆಯನ್ನಾಗಿ ಪರಿವರ್ತಿಸಬೇಕು ಎಂದು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅಥೀಕ್ ಸೂಚಿಸಿದ್ದಾರೆ.

news18-kannada
Updated:August 27, 2020, 7:19 AM IST
ನರೇಗಾ ಯೋಜನೆಯಡಿ ರಾಜ್ಯದಲ್ಲೇ ಬಾಗಲಕೋಟೆಗೆ 3ನೇ ಸ್ಥಾನ; ಇನ್ಮುಂದೆ ಈ ಯೋಜನೆಯಲ್ಲಿ ಶಾಲಾಭಿವೃದ್ಧಿ ಭಾಗ್ಯ!
ಸಾಂದರ್ಭಿಕ ಚಿತ್ರ.
  • Share this:
ಬಾಗಲಕೋಟೆ(ಆಗಸ್ಟ್ 27): ನರೇಗಾ ಯೋಜನೆಯಡಿ ಶಾಲಾವರಣದಲ್ಲಿ ಕಿಚನ್ ಗಾರ್ಡನ್ ಹಾಗೂ ಇನ್ನಿತರ ಕಾಮಗಾರಿ ಕೈಗೊಳ್ಳುವ ಮೂಲಕ ತಾಲೂಕಿಗೊಂದು ಮಾದರಿ ಶಾಲೆಯನ್ನಾಗಿ ಪರಿವರ್ತಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅಥೀಕ್ ಸೂಚಿಸಿದರು. 

ಬಾಗಲಕೋಟೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರೌಢಶಾಲಾ ಆವರಣದಲ್ಲಿ ಸಸಿ ನೆಡುವುದು, ಶಾಲಾ ಕಾಂಪೌಂಡ್, ಶೌಚಾಲಯ ಹಾಗೂ ಕಿಚನ್ ಗಾರ್ಡನ್ ಕಾರ್ಯ ಕೈಗೊಳ್ಳುವ ಮೂಲಕ ಮಕ್ಕಳಿಗೆ ಉತ್ತಮ ವಾತಾವರಣ ರೂಪಿಸಲು ಕ್ರಿಯಾ ಯೋಜನೆ ತಯಾರಿಸಿ ಮಾದರಿ ಶಾಲೆಯನ್ನಾಗಿ ಪರಿವರ್ತಿಸಬೇಕು, ಇದಕ್ಕಾಗಿ ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ ಇಲಾಖೆಗಳ ಸಹಯೋಗ ಪಡೆಯಲು ತಿಳಿಸಿದರು.

ಸ್ವಚ್ಛ ಭಾರತ ಮತ್ತು ಮನರೇಗಾ ಯೋಜನೆಯಡಿಯಲ್ಲಿರುವ ಸೌಲಭ್ಯಗಳನ್ನು ಶಿಕ್ಷಣ ಇಲಾಖೆಯವರು ಪಡೆದುಕೊಂಡು ಶಾಲೆಗಳನ್ನು ಅಭಿವೃದ್ದಿ ಪಡಿಸಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಶಾಲಾ ಅಭಿವೃಧ್ದಿಗೆ ಹಂತ ಹಂತವಾಗಿ ಅಭಿವೃದ್ಧಿ ಪಡಿಸುವ ಕುರಿತು ಕ್ರಿಯಾ ಯೋಜನೆಗಳನ್ನು ರೂಪಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು. ಸ್ಥಳೀಯ ಎಸ್.ಡಿ.ಎಂಸಿ ಹಾಗೂ ಸಮುದಾಯದವರನ್ನು ಬಳಸಿಕೊಂಡು ಖಾಸಗಿ ಶಾಲೆ ಮೀರಿಸುವ ನಿಟ್ಟಿನಲ್ಲಿ ಎಲ್ಲ ರೀತಿಯಿಂದ ಅಭಿವೃದ್ದಿಗೆ ಮುಂದಾಗಲು ತಿಳಿಸಿದರು.

ತೋಟಗಾರಿಕೆ ಬೆಳೆಗೆ ಹೆಚ್ಚಿನ ಆದ್ಯತೆ ಕೊಟ್ಟು ಮನರೇಗಾದಡಿ ಇರುವ ಸೌಲಭ್ಯಗಳ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಸರಕಾರದ ವಿವಿಧ ಯೋಜನೆಗಳ ಮಹತ್ವ, ಅವುಗಳಿಂದ ಸಿಗುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲು ಕರಪತ್ರಗಳನ್ನು ಆಯಾ ಗ್ರಾಮ ಪಂಚಾಯತಿವಾರು ಪ್ರಚಾರ ಕಾರ್ಯ ಕೈಗೊಳ್ಳಲು ಸೂಚಿಸಿದರು. ಗ್ರಾಮೀಣ ಭಾಗದಲ್ಲಿ ಸೌಲಭ್ಯಗಳ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು. ಪ್ರತಿ ವರ್ಷ ಅಡಿಟ್ ಸಭೆಗಳನ್ನು ನಡೆಸಬೇಕು. ಕರ ವಸೂಲಾತಿಗೆ ಕ್ರಮಕೈಗೊಳ್ಳುವಂತೆ ತಾ.ಪಂ ಕಾರ್ಯನಿರ್ವಾಹಕರಿಗೆ ಸೂಚಿಸಿದರು.

ಕಸ ವಿಲೇವಾರಿಗೆ ಹೆಚ್ಚಿನ ಗಮನ ಹರಿಸಬೇಕು. ತಿಪ್ಪೆ ಗುಂಡಿಗಳನ್ನು ವೈಜ್ಞಾನಿಕವಾಗಿ ರೂಪಿಸಬೇಕು. ಗ್ರಾಮ ಮಟ್ಟದಲ್ಲಿ ಕೈಗೊಳ್ಳುವ ಕೆಲಸಗಳ ಉದ್ದೇಶಗಳು ಆ ಗ್ರಾಮದ ಜನರಿಗೆ ತಿಳಿಸಬೇಕು. ಅಂದಾಗ ಮಾತ್ರ ಅಭಿವೃದ್ದಿ ಕಾರ್ಯಗಳಿಗೆ ಯಾವುದೇ ರೀತಿಯ ತೊಂದರೆಯಾಗುವದಿಲ್ಲವೆಂದರು. ಪ್ರಮಾಣ ಪತ್ರಗಳಿಗೆ ಸಕಾಲದಲ್ಲಿ ಅರ್ಜಿಗಳನ್ನು ಪಡೆದು ವಿಲೇವಾರಿಗೆ ಕ್ರಮಕೈಗೊಳ್ಳಬೇಕು. ಗ್ರಾಮ ಪಂಚಾಯತಿಗಳ ವಿದ್ಯುತ್ ಬಿಲ್ ಬಾಕಿ ಉಳಿಸದೇ ಪ್ರತಿ ಮಾಹೆಯಾನ ಪಾವತಿಸಬೇಕು.

ಇದನ್ನೂ ಓದಿ : ಹಾಡು ಹಗಲೇ ಭೀಕರ ಕೊಲೆ, ಮತ್ತೆ ಬೆಚ್ಚಿಬಿದ್ದ ವಿಜಯಪುರದ ಜನ; ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಅಪರಾಧ ಕೃತ್ಯಗಳು

ಆಲಮಟ್ಟಿಯಲ್ಲಿ ಆಗಸ್ಟ 25 ರಂದು ಮುಖ್ಯಮಂತ್ರಿಗಳು, ಸಚಿವರು ಹಾಗೂ ವಿವಿಧ ಅಧಿಕಾರಿಗಳ ಜೊತೆ ಚರ್ಚಿಸಿದಂತೆ ಮಲಪ್ರಭಾ ನದಿ ಪಾತ್ರದಲ್ಲಾದ ಒತ್ತುವರಿ ಕುರಿತಂತೆ ಒತ್ತುವರಿ ಕಾರ್ಯಾಚರಣೆಯಲ್ಲಿ ಮನರೇಗಾದಡಿ ಬರುವ ಅವಕಾಶಗಳನ್ನು ಬಳಸಿಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದ್ದು, ಇದರನ್ವಯ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರು ಜಿಲ್ಲೆಗೆ ಆಗಮಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಲ್.ಟಿ.ಅಥೀಲ್ ಅವರಿಗೆ ಮಲಪ್ರಭಾ ನದಿ ಪಾತ್ರದ ಒತ್ತುವರಿಗೆ ಸಂಬಂಧಿಸಿದ ಮಾಹಿತಿಯನ್ನು ನೀಡಿದಾಗ ಅದಕ್ಕೆ ಅವರು ಮನರೇಗಾದಡಿ ಬರುವ ಎಲ್ಲ ರೀತಿಯ ಅವಕಾಶ ನೀಡಲಾಗುವುದೆಂದು ತಿಳಿಸಿದರು.ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ ಅವರು ವಿವಿಧ ಯೋಜನೆಗಳ ಪ್ರಗತಿಯ ಮಾಹಿತಿಯನ್ನು ವಿವರಿಸಿದರು. ಮನರೇಗಾ ಯೋಜನೆಯಡಿ ಬಾಗಲಕೋಟೆ ಜಿಲ್ಲೆ ರಾಜ್ಯಕ್ಕೆ 3ನೇ ಸ್ಥಾನ ಪಡೆದುಕೊಂಡಿರುತ್ತದೆ. ಸಕಾಲದಲ್ಲಿ 1874 ಅರ್ಜಿಗಳ ಪೈಕಿ 1286 ಅರ್ಜಿಗಳ ವಿಲೇವಾರಿ ಮಾಡಲಾಗಿದೆ. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ 40 ಸಮುದಾಯ ಶೌಚಾಲಯ ನಿರ್ಮಾಣಗಳ ಗುರಿ ಹೊಂದಲಾಗಿದ್ದು, 10 ಸಮುದಾಯ ಶೌಚಾಲಯಗಳು ಅನುಮೋದನೆಗೊಂಡಿರುತ್ತವೆ. ಉಳಿದ 25 ಶೌಚಾಲಯ ಪ್ರಸ್ತಾವನೆಗಳನ್ನು ಪರಿಶೀಲಿಸಿ ಸರಕಾರಕ್ಕೆ ಸಲ್ಲಿಸುವ ಹಂತರದಲ್ಲಿರುವುದಾಗಿ ತಿಳಿಸಿದರು.       ಸಭೆಯಲ್ಲಿ ಪ್ರೊಬೇಷನರಿ ಐ.ಎ.ಎಸ್ ಅಧಿಕಾರಿ ಯಶವಂತ ಗುರುಕಾರ, ಜಿ.ಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
Published by: MAshok Kumar
First published: August 27, 2020, 7:19 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading