ಮಾದಾವರ ಬಳಿಯ ಅತಿದೊಡ್ಡ ಕೋವಿಡ್‌ ಕೇರ್‌ ಮುಚ್ಚಲು ನಿರ್ಧಾರಿಸಿದ ಬಿಬಿಎಂಪಿ; ಸಾರ್ವಜನಿಕ ವಲಯದಿಂದ ಟೀಕೆ

ಈ ಬೃಹತ್ ಕೇಂದ್ರದಲ್ಲಿ ರೋಗಿಗಳ ಆರೈಕೆಗಾಗಿ ಕಾಟ್, ಫ್ಯಾನ್, ಬಕೆಟ್, ಮಗ್ ಮತ್ತು ಡಸ್ಟ್ಬಿನ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿತ್ತು. ಇದಕ್ಕಾಗಿ ಕೋಟ್ಯಾಂತರ ರೂ ಖರ್ಚಾಗಿದ್ದು ಇದರಲ್ಲಿಯೂ ಹಗರಣ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

news18-kannada
Updated:September 6, 2020, 3:41 PM IST
ಮಾದಾವರ ಬಳಿಯ ಅತಿದೊಡ್ಡ ಕೋವಿಡ್‌ ಕೇರ್‌ ಮುಚ್ಚಲು ನಿರ್ಧಾರಿಸಿದ ಬಿಬಿಎಂಪಿ; ಸಾರ್ವಜನಿಕ ವಲಯದಿಂದ ಟೀಕೆ
ಮಾದಾವರ ಬಳಿಯ ಕೋವಿಡ್‌ ಕೇರ್‌ ಸೆಂಟರ್‌ಗೆ ಭೇಟಿ ನೀಡಿದ್ದ ಯಡಿಯೂರಪ್ಪ.
  • Share this:
ಬೆಂಗಳೂರು (ಸೆಪ್ಟೆಂಬರ್‌ 06); ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ವೈರಸ್‌ ಹಾವಳಿ ಹೆಚ್ಚುತ್ತಿದ್ದ ಸಂದರ್ಭದಲ್ಲಿ ಸೋಂಕು ಪೀಡಿತರ ಚಿಕಿತ್ಸೆಗೆಂದು ರಾಜ್ಯ ಸರ್ಕಾರ ಮಾದಾವರ ಬಳಿ ಇರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಸವಿಸ್ತಾರವಾದ ಕೋವಿಡ್‌ ಕೇರ್‌ ಸೆಂಟರ್‌ ಅನ್ನು ಸ್ಥಾಪಿಸಿತ್ತು. 10 ಸಾವಿರಕ್ಕೂ ಅಧಿಕ ಬೆಡ್‌ ವ್ಯವಸ್ಥೆ ಹೊಂದಿದ್ದ ಈ ಸೆಂಟರ್‌ ಇಡೀ ದೇಶದ ಮೆಚ್ಚುಗೆಗೆ ಕಾರಣವಾಗಿತ್ತು. ರಾಜ್ಯ ಸರ್ಕಾರ ಈ ಸೆಂಟರ್‌ ಅನ್ನು ತನ್ನ ಪ್ರಚಾರಕ್ಕೂ ಬಳಸಿಕೊಂಡಿತ್ತು. ಆದರೆ, ದೇಶದ ಅತಿದೊಡ್ಡ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲೊಂದು ಎಂದು ಗುರುತಿಸಲಾಗಿರುವ ಈ ಸೆಂಟರ್‌ ಅನ್ನು ಸೆಪ್ಟೆಂಬರ್.15 ರಿಂದ ಮುಚ್ಚುವುದಾಗಿ ಬಿಬಿಎಂಪಿ ತಿಳಿಸಿದೆ. ಇತ್ತೀಚೆಗೆ ಕೊರೋನಾ ಪೀಡಿತ ವ್ಯಕ್ತಿಗಳು ಮನೆಯಲ್ಲೇ ಕ್ವಾರಂಟೈನ್‌ಗೆ ಒಳಗಾಗಲು ವೈದ್ಯರು ಅವಕಾಶ ನೀಡುತ್ತಿದ್ದಾರೆ. ಇದೇ ಕಾರಣಕ್ಕೆ ಈ ಘಟಕವನ್ನು ಮುಚ್ಚಲು ಪಾಲಿಕೆ ಮುಂದಾಗಿದೆ ಎನ್ನಲಾಗುತ್ತಿದೆ.

ಈ ಕೋವಿಡ್‌ ಕೇರ್‌ ಸೆಂಟರ್‌ ಅನ್ನು ರಾಜ್ಯ ಸರ್ಕಾರದ ಬೊಕ್ಕಸದಿಂದ ಕೋಟ್ಯಾಂತರ ಹಣ ಖರ್ಚು ಮಾಡಿ ಕೇವಲ ಒಂದೂವರೆ ತಿಂಗಳ ಹಿಂದೆಯಷ್ಟೇ ಉದ್ಘಾಟನೆ ಮಾಡಲಾಗಿತ್ತು. ಅಲ್ಲದೆ, ಸೋಂಕಿಗೆ ತುತ್ತಾಗಿದ್ದ ನಗರದ ಸಾವಿರಾರು ವಲಸೆ ಕಾರ್ಮಿಕರನ್ನು ಇಲ್ಲಿಗೆ ಶಿಫ್ಟ್‌ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇಂತಹ ಘಟಕವನ್ನು ಪಾಲಿಕೆ ಇಷ್ಟು ಬೇಗ ಮುಚ್ಚುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ, "ಕೇಂದ್ರದ ಉಸ್ತುವಾರಿ ಹಿರಿಯ ಐಎಎಸ್ ಅಧಿಕಾರಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ" ಎಂದು ತಿಳಿಸಿದೆ.
ಈ ಕೋವಿಡ್ ಕೇರ್ ಸೆಂಟರ್ ಸಿಎಂ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆಯಾಗಿತ್ತು. 10,100 ಹಾಸಿಗೆಗಳ ಸಾಮರ್ಥ್ಯದ ಆರೈಕೆ ಕೇಂದ್ರ ಮಾಡುವ ಉದ್ದೇಶದಿಂದ ಇದನ್ನು ಆರಂಭಿಸಲಾಗಿತ್ತು. ಮೊದಲ ದಿನ 5,500 ಬೆಡ್‌ಗಳಿದ್ದ ಈ ಕೇಂದ್ರವನ್ನು ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದ ಸಚಿವರ ನಿಯೋಗವು ಜುಲೈ 27 ರಂದು ಉದ್ಘಾಟಿಸಿತ್ತು.

ಈ ಬೃಹತ್ ಕೇಂದ್ರದಲ್ಲಿ ರೋಗಿಗಳ ಆರೈಕೆಗಾಗಿ ಕಾಟ್, ಫ್ಯಾನ್, ಬಕೆಟ್, ಮಗ್ ಮತ್ತು ಡಸ್ಟ್ಬಿನ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗಿತ್ತು. ಇದಕ್ಕಾಗಿ ಕೋಟ್ಯಾಂತರ ರೂ ಖರ್ಚಾಗಿದ್ದು ಇದರಲ್ಲಿಯೂ ಹಗರಣ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು.

ಈಗ ಈ ಬೆಡ್‌ಗಳನ್ನು, ಪೀಠೋಪಕರಣಗಳನ್ನು ಸರ್ಕಾರಿ ಸಂಸ್ಥೆಗಳು, ವಿಶ್ವವಿದ್ಯಾಲಯದ ವಸತಿ ನಿಲಯಗಳು ಮತ್ತು ಸಾರ್ವಜನಿಕ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು ಎನ್ನಲಾಗಿದೆ.ಇನ್ನು ಅತೀ ದೊಡ್ಡ ಕೋವಿಡ್ ಸೆಂಟರ್ ಎನ್ನುವ ಹೆಗ್ಗಳಿಕೆ ಜೊತೆಗೆ ವಿವಾದಗಳಿಗಗೂ ಈ ಆರೈಕೆ ಕೇಂದ್ರ ಕಾರಣವಾಗಿತ್ತು.

ಇದನ್ನೂ ಓದಿ : ಮಂಡ್ಯದ ಜೋಡಿ ಹತ್ಯೆ ಪ್ರಕರಣ ಭೇದಿಸಿದ ಗ್ರಾಮಾಂತರ ಪೊಲೀಸರು; ವ್ಯಯಕ್ತಿಕ ದ್ವೇಷದಿಂದಾಗಿ ಕೊಲೆ

ಇಲ್ಲಿ ನೀಡಲಾದ ಸೌಲಭ್ಯಗಳಿಗಳಿಗಾಗಿ, ಅಗತ್ಯ ವಸ್ತುಗಳನ್ನು ಖರೀದಿಸುವುದರ ಬಗ್ಗೆ ಮತ್ತು BIECಗೆ ನೀಡುವ ಬಾಡಿಗೆ ವಿಚಾರದಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಲಾಗಿತ್ತು. ವಿರೋಧ ಪಕ್ಷಗಳು ಸಾಕ್ಷಿ ಸಮೇತ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ನಡೆದಿರುವುದನ್ನು ಪತ್ರಿಕೆಗಳಿಗೆ ಬಿಡುಗಡೆ ಮಾಡಿದ್ದವು.

ಸದ್ಯ ಸೋಂಕಿತರು ದಾಖಲಾಗುವ ಪ್ರಮಾಣ ಕಡಿಮೆಯಿದೆ ಎಂದು ಸೆಪ್ಟೆಂಬರ್ 15ರಿಂದ BIEC ಮುಚ್ಚಲಾಗುತ್ತಿದೆ. ಇದರ ಹೊರತಾಗಿಯೂ ಹಲವಾರು COVID-19 ಆರೈಕೆ ಕೇಂದ್ರಗಳು ಸಹ ಮುಂದಿನ ದಿನಗಳಲ್ಲಿ ಮುಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
Published by: MAshok Kumar
First published: September 6, 2020, 3:38 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading