HOME » NEWS » District » BELAGAVI BY ELECTION TICKET ASPIRANTS STARTED LOBBYING TO GET CHANCE HK

ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಅನೇಕರು ಟಿಕೆಟ್ ಆಕಾಂಕ್ಷಿಗಳು ; ತೆರೆ ಮರೆಯಲ್ಲಿ ಕಸರತ್ತು ಆರಂಭ..!

ಪ್ರಮುಖವಾಗಿ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ವಿಶ್ವನಾಥ್ ಪಾಟೀಲ್, ಜಗದೀಶ್ ಮೆಟ್ಟಗುಡ್ಡ ಸೇರಿ ಅನೇಕರು ತೆರೆ ಮರೆಯಲ್ಲಿ ಪ್ರಯತ್ನ ಆರಂಭಿಸಿದ್ದಾರೆ

news18-kannada
Updated:September 30, 2020, 8:36 PM IST
ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಅನೇಕರು ಟಿಕೆಟ್ ಆಕಾಂಕ್ಷಿಗಳು ; ತೆರೆ ಮರೆಯಲ್ಲಿ ಕಸರತ್ತು ಆರಂಭ..!
ಸುರೇಶ್ ಅಂಗಡಿ ಸ್ಮಾರಕ ನಿರ್ಮಾಣಕ್ಕೆ ಸಿಎಂಗೆ ಮನವಿ ಸಲ್ಲಿಸಿದ ಅಳಿಯಂದಿರು
  • Share this:
ಬೆಳಗಾವಿ(ಸೆಪ್ಟೆಂಬರ್.30) : ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನ ಹಿನ್ನೆಲೆಯಲ್ಲಿ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ. ಕ್ಷೇತ್ರಕ್ಕೆ ಸುರೇಶ್ ಅಂಗಡಿ ಕುಟುಂಬಸ್ಥರಿಗೆ ಟಿಕೆಟ್ ನೀಡಬೇಕು ಎಂದು ಒತ್ತಡವು ಸಂಬಂಧಿಕರು ಮಾಡಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ಅನೇಕ ನಾಯಕರು ಟಿಕೆಟ್ ಪಡೆಯಲು ಪ್ರಯತ್ನವನ್ನು ಆರಂಭಿಸಿದ್ದಾರೆ. ತಮ್ಮ ನಾಯಕರು, ಮುಖಂಡರ ಮೂಲಕ ಟಿಕೆಟ್ ಪಡೆಯಲು ಕಸರತ್ತು ಆರಂಭಿಸಿದ್ದಾರೆ.  ಮುಂದಿನ ಕೆಲ ದಿನಗಳಲ್ಲಿ ಮತ್ತಷ್ಟು ಪ್ರಯತ್ನಗಳು ಹೆಚ್ಚಾಗುವ ಲಕ್ಷಣಗಳು ಇವೆ. ಸುರೇಶ್ ಅಂಗಡಿ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದ್ದರು. ಈ ವೇಳೆಯಲ್ಲಿ ಸುರೇಶ್ ಅಂಗಡಿ ಸೋದರ ಮಾವ ಲಿಂಗರಾಜ್ ಪಾಟೀಲ್ ಉಪಚುನಾವಣೆ ಟಿಕೆಟ್ ಕುಟುಂಬಸ್ಥರಿಗೆ ನೀಡಬೇಕು ಎನ್ನುವ ಆಗ್ರಹವನ್ನು ಮಾಡಿದ್ದರು. ಜಿಲ್ಲೆಯ ಅನೇಕ ನಾಯಕರು ಈ ನಿಟ್ಟಿನಿಲ್ಲಿ ಒಲವು ವ್ಯಕ್ತಪಡಿದ್ದಾರೆ. ಆದರೆ, ಕೆಲ ಮುಖಂಡರು ಮಾತ್ರ ಟಿಕೆಟ್ ಗಾಗಿ ಲಾಭಿಯನ್ನು ಆರಂಭಿಸಿದ್ದಾರೆ.

ಪ್ರಮುಖವಾಗಿ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ್, ಮಾಜಿ ಶಾಸಕರಾದ ಸಂಜಯ್ ಪಾಟೀಲ್, ವಿಶ್ವನಾಥ್ ಪಾಟೀಲ್, ಜಗದೀಶ್ ಮೆಟ್ಟಗುಡ್ಡ ಸೇರಿ ಅನೇಕರು ತೆರೆ ಮರೆಯಲ್ಲಿ ಪ್ರಯತ್ನ ಆರಂಭಿಸಿದ್ದಾರೆ. ಇನ್ನೂ ಬೆಳಗಾವಿಯ ಉದ್ಯಮಿಗಳು, ವೈದ್ಯರು ಸೇರಿ ಅನೇಕರು ಸಹ ತಮ್ಮ ಮುಖಂಡರು, ನಾಯಕರ ಮೂಲಕ ವರಿಷ್ಠರ ಮೇಲೆ ಒತ್ತಡ ತರುವ ಪ್ರಯತ್ನ ಸಹ ನಡೆಸಿದ್ದಾರೆ. ಆದರೇ ಈ ಬಗ್ಗೆ ಬಹಿರಂಗವಾಗಿ ಯಾರೊಬ್ಬರು ಸಹ ಮಾತನಾಡುತ್ತಿಲ್ಲ.

ಬೆಳಗಾವಿಯ ಅನೇಕ ಬಿಜೆಪಿ ಕಾರ್ಯಕರ್ತರಲ್ಲಿಯೂ ಟಿಕೆಟ್ ಬಗ್ಗೆ ನಿರೀಕ್ಷೆಗಳು ಇವೆ. ಇತ್ತೀಚಿಗೆ ರಾಜ್ಯಸಭೆ ಆಯ್ಕೆ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಪ್ರಮುಖ ರಾಜಕೀಯ ನಾಯಕರು ರೇಸ್ ನಲ್ಲಿ ಇದ್ದರು. ಇಂತಹ ಸಂದರ್ಭದಲ್ಲಿ ಸಹ ಹೈಕಮಾಂಡ್ ಸಾಮಾನ್ಯ ಕಾರ್ಯಕರ್ತರಿಗೆ ಮಣೆ ಹಾಕಿ ಅಚ್ಚರಿಯನ್ನು ಉಂಟು ಮಾಡಿತ್ತು. ಇದು ಸಹ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿತ್ತು. ಈ ಸಲವು ಇಂತಹ ಮ್ಯಾಜಿಕ್ ನಡೆಯಲಿದೆಯೆ ಎನ್ನುವ ಕುತೂಹಲ ಕಾರ್ಯಕರ್ತರಲ್ಲಿ ಮೂಡಿದೆ.

ಈ ನಡುವೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಸುರೇಶ್ ಅಂಗಡಿ ಬೀಗರಾದ ಸಚಿವ ಜಗದೀಶ್ ಶೆಟ್ಟರ್ ಹಾಗೂ ಇಬ್ಬರು ಅಳಿಯಂದಿರು ಭೇಟಿಯಾಗಿದ್ದಾರೆ. ಬೆಳಗಾವಿಯಲ್ಲಿ ಸುರೇಶ್ ಅಂಗಡಿ ಸ್ಮಾರಕ ನಿರ್ಮಾಣದ ಮನವಿ ಸಲ್ಲಿಕೆ ಮಾಡಿದ್ದಾರೆ. ಬೆಳಗಾವಿಯ ಲೋಕಸಭೆ ಕ್ಷೇತ್ರದಿಂದ ಸತತ ನಾಲ್ಕು ಸಲ ಗೆದ್ದಿರುವ ಸುರೇಶ್ ಅಂಗಡಿ ರೈಲ್ವೆ ಸಚಿವರಾಗಿ ಅನೇಕ ಕೆಲಸ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕು ಎನ್ನುವುದು ಕುಟುಂಬಸ್ಥರ ಬಯಕೆಯಾಗಿದೆ.

ಇದನ್ನೂ ಓದಿ : ಆರ್ ಆರ್ ನಗರ ಉಪ ಚುನಾವಣೆ : ಮುನಿರತ್ನ ನಮ್ಮ ವೈರಿ ಅಲ್ಲ, ಬಿಜೆಪಿ ವಿರುದ್ಧ ನಮ್ಮ ಹೋರಾಟ : ಸಂಸದ ಡಿಕೆ ಸುರೇಶ್

ಅಂಗಡಿ  ಕುಟುಂಬದ ಹೊರತಾಗಿ ಬೇರೆಯವರಿಗೆ ಟಿಕೆಟ್ ನೀಡುವುದಾದರೆ ಮಾಜಿ ಸಂಸದ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿಯವರಿಗೆ ಟಿಕೆಟ್ ನೀಡುವಂತೆ ಅವರ ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಅಂಗಡಿ ಕುಟುಂಬ ಹೊರತುಪಡಿಸಿ ಬೇರೆಯವರಿಗೆ ಟಿಕೆಟ್ ನೀಡುವುದಾದರೆ ರಮೇಶ್ ಕತ್ತಿ ಅವರನ್ನೇ ಪರಿಗಣಿಸಬೇಕು. ಮಾಜಿ ಸಂಸದರಾಗಿ ಕಾರ್ಯ ನಿರ್ವಹಿಸಿರುವ ರಮೇಶ ಕತ್ತಿಯವರಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅಭಿಮಾನಿಗಳಿದ್ದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಜಿಲ್ಲೆಯಾದ್ಯಂತ ಹಿಡಿತ ಹೊಂದಿದ್ದಾರೆ.
ಡಿಸಿಸಿ ಬ್ಯಾಂಕ್ ಮೂಲಕ ಜಿಲ್ಲೆಯಲ್ಲಿ ರಾಜಕೀಯ ಅಸ್ತಿತ್ವವನ್ನ ರಮೇಶ್ ಕತ್ತಿ ಹೊಂದಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ಪ್ರಭಾವಿ ಲಿಂಗಾಯತ ಸಮುದಾಯದ ಒಬ್ಬ ನಾಯಕ ಹಾಗಾಗಿ ಬೇರೆಯವರ ಬದಲಾಗಿ ನಮ್ಮ ನಾಯಕರಿಗೆ ಟಿಕೇಟ್ ನೀಡುವ ನಿಟ್ಟಿನಲ್ಲಿ ಬಿಜೆಪಿ ತೀರ್ಮಾನ ಮಾಡಬೇಕು ಎಂಬುದು ಕತ್ತಿ ಅಭಿಮಾನಿಗಳ ಒತ್ತಾಯವಾಗಿದೆ.
Published by: G Hareeshkumar
First published: September 30, 2020, 8:34 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading