Belagavi Rains: ಬೆಳಗಾವಿಯಲ್ಲಿ ಧಾರಾಕಾರ ಮಳೆಗೆ ಬೆಳೆ ನಾಶ; ಧುಮ್ಮಿಕ್ಕಿ ಹರಿಯುತ್ತಿರುವ ಗೋಕಾಕ್​ ಫಾಲ್ಸ್

ಬೆಳಗಾವಿ ಜಿಲ್ಲೆಯಲ್ಲಿ ವರುಣನ ಅಬ್ಬರ ಕಳೆದ ಆರು ದಿನಗಳಿಂದ ಮುಂದುವರೆದಿದ್ದು, ಇನ್ನೂ ಮೂರು ದಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಬೆಳೆಯನ್ನು ಕಳೆದುಕೊಳ್ಳುವ ಭೀತಿ ರೈತರಿಗೆ ಎದುರಾಗಿದೆ.

ಮಳೆಗೆ ಬೆಳೆ ನಾಶ

ಮಳೆಗೆ ಬೆಳೆ ನಾಶ

  • Share this:
ಬೆಳಗಾವಿ(ಜುಲೈ 16): ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಆರು ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿದೆ. ಮಳೆಯಿಂದ ಅನೇಕ ಅವಾಂತರಗಳು ಜಿಲ್ಲೆಯಲ್ಲಿ ಸೃಷ್ಠಿಯಾಗಿವೆ. ಮಳೆ ವ್ಯಾಪಕವಾಗಿ ಆಗುತ್ತಿದ್ದು, ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಬೆಳೆ ಹಾನಿ ಸಂಭವಿಸಿದೆ. ಇನ್ನೂ ಜಿಲ್ಲೆಯಲ್ಲಿ ಇರೋ ಮಲಪ್ರಭಾ ಹಾಗೂ ಘಟಪ್ರಭಾ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಜಿಲ್ಲೆಯ ಪ್ರಸಿದ್ದ ಪ್ರವಾಸಿ ಕೇಂದ್ರ ಆಗಿರೋ ಗೋಕಾಕ್ ಫಾಲ್ಸ್ ಹಾಗೂ ಗೋಡಚನಮಲ್ಕಿ ಫಾಲ್ಸ್​​ಗೆ ವೀಕೆಂಡ್​​​ನಲ್ಲಿ ಜನರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ವರುಣನ ಅಬ್ಬರ ಕಳೆದ ಆರು ದಿನಗಳಿಂದ ಮುಂದುವರೆದಿದ್ದು, ಇನ್ನೂ ಮೂರು ದಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಳೆಯಿಂದ ಬೆಳೆಯನ್ನು ಕಳೆದುಕೊಳ್ಳುವ ಭೀತಿ ರೈತರಿಗೆ ಎದುರಾಗಿದೆ. ಇನ್ನೂ ಯಳ್ಳೂರು ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಬಳ್ಳಾರಿ ನಾಲೆಗೆ ಒಳ ಹರಿವು ಹೆಚ್ಚಳವಾಗಿದ್ದು, ಯಳ್ಳೂರು, ವಡಗಾವಿ, ಶಹಾಪುರ, ಹಳೇ ಬೆಳಗಾವಿ ಹಾಗೂ ಬಸವನ ಕುಡಚಿ ಭಾಗದಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿರೋ ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ. ಇದು ರೈತರ ಆತಂಕಕ್ಕೆ ಕಾರಣವಾಗಿದೆ. ಇನ್ನೂ ಎರಡು ದಿನ ಇದೇ ರೀತಿಯಲ್ಲಿ ಮಳೆ ಮುಂದುವರೆದರೆ ಬೆಳೆ ಸಂಪೂರ್ಣವಾಗಿ ಕೊಳೆತು ಹೋಗುವ ಭೀತಿ ಎದುರಾಗಿದೆ.

ಇದನ್ನೂ ಓದಿ:Karnataka Weather Today: ಇಂದು ರಾಜ್ಯದಲ್ಲಿ ಹೆಚ್ಚಾಗಲಿದೆ ಮಳೆಯ ಆರ್ಭಟ; ಕರಾವಳಿ ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ಘೋಷಣೆ

ಪ್ರತಿ ವರ್ಷ ಈ ಭಾಗದಲ್ಲಿ ರೈತರಿಗೆ ಬಳ್ಳಾರಿ ನಾಲೆಯಿಂದ ಸಮಸ್ಯೆಗಳು ಎದುರಾಗುತ್ತವೆ. ಈ ವರ್ಷ ಮೂರನೇ ಸಲ ರೈತರ ಬೆಳೆ ನಷ್ಟವಾಗಿದೆ. ಬಳ್ಳಾರಿ ನಾಲೆಯನ್ನು ಸ್ವಚ್ಚಗೊಳಿಸಿ, ತಗ್ಗುಗೊಳಿಸುವ ಕೆಲಸ ಮಾಡಿದರೆ ರೈತರಿಗೆ ಆಗುವ ಹಾನಿ ತಪ್ಪಲಿದೆ. ಆದರೆ ಈ ಬಗ್ಗೆ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಸದ್ಯ ಬಳ್ಳಾರಿ ನಾಲಾ ಅಭಿವೃದ್ಧಿಗಾಗಿ 800 ಕೋಟಿ ವೆಚ್ಚದಲ್ಲಿ ಯೋಜನೆಯೊಂದನ್ನು ಸಿದ್ದಪಡಿಸಲಾಗಿದೆ. ಆದರೇ ಯೋಜನೆಗೆ ಸರ್ಕಾರದಿಂದ ಇನ್ನೂ ಅನುಮತಿ ಸಿಕ್ಕಿಲ್ಲ.

ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಗೋಕಾಕ್ ಫಾಲ್ಸ್ ಹಾಗೂ ಗೋಡಚನಮಲ್ಕಿ ಫಾಲ್ಸ್ ಗೆ ಜೀವ ಕಳೆ ಬಂದಿದೆ. ವೀಕ್ ಎಂಡ್ ನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದ್ದು, ಕೋವಿಡ್ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಈ ಶನಿವಾರ ಹಾಗೂ ಭಾನುವಾರ ಪ್ರವಾಸಿಗ ಭೇಟಿಗೆ ನಿಷೇಧ ಹೇರಲಾಗಿದೆ. ಜತೆಗೆ ಖಾನಾಪುರ ತಾಲೂಕಿನ ಚಿಕಲೆ, ಕಣಕುಂಬಿ, ವಜ್ರಾ, ಸತೋಡಾ, ಪಾರವಾಡ ಪ್ರವಾಸಿ ತಾಣಗಳಿಗೆ ಸಹ ಪ್ರವೇಶ ನಿಷೇಧಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಆದೇಶವನ್ನು ಹೊರಡಿಸಿದ್ದಾರೆ.

ಇದನ್ನೂ ಓದಿ:Karnataka Rains: ಕರಾವಳಿಯಲ್ಲಿ ನಿಲ್ಲದ ಮಳೆಯ ಆರ್ಭಟ; ಪುತ್ತೂರಿನ ಚೇಳ್ಯಡ್ಕ ಸೇತುವೆ ಮುಳುಗಡೆ; ನಾಳೆ ರೆಡ್​ ಅಲರ್ಟ್​ ಘೋಷಣೆ

ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜು.18ರವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್​ ಪಾಟೀಲ್​ ತಿಳಿಸಿದ್ದಾರೆ. ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ರೆಡ್, ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲೂ ಕೂಡ ಇಂದು ಮತ್ತು ನಾಳೆ ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು
Published by:Latha CG
First published: