ಮೈಸೂರಿನಲ್ಲಿ ಹಕ್ಕಿಜ್ವರ ಭೀತಿ: ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದೇನು?

ರಂಗನತಿಟ್ಟುಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಭಂಧ ಮಾಡಬೇಕಾ? ಇಲ್ಲವಾ? ಎಂಬುದರ ಬಗ್ಗೆ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು. ಅಲ್ಲದೇ ಈ ಹಿಂದೆ ಎರಡು ಹಕ್ಕಿಗಳ ಮೃತ ಪಟ್ಟಿದ್ದವು. ಅವುಗಳನ್ನ ಲ್ಯಾಬ್ ಗೆ ಕಳುಹಿಸಲಾಗಿತ್ತು. ಲ್ಯಾಬ್ ನಲ್ಲಿ ನೆಗೆಟಿವ್ ವರದಿ ಬಂದಿದ್ದು ಯಾವುದೇ ಆತಂಕ ಇಲ್ಲ ಅಂದಿದ್ದಾರೆ ಮೈಸೂರು ಡಿಸಿಎಫ್ ಪ್ರಶಾಂತ್ ಕುಮಾರ್.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

  • Share this:
ಮೈಸೂರು; ಮೈಸೂರಿನಲ್ಲಿ ಹಕ್ಕಿಜ್ವರ ಭೀತಿ ಎದುರಾಗಿದ್ದು, ಮೈಸೂರು ಜಿಲ್ಲೆಯಾದ್ಯಾಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ಮೈಸೂರು ಕೇರಳ ಗಡಿ ಪ್ರದೇಶದಲ್ಲಿ ಹಕ್ಕಿ ಹಾಗೂ ಕೋಳಿ ಸಾಗಟಕ್ಕೆ ನಿಷೇಧ ಹೇರಿಲಾಗಿದೆ. ಮೈಸೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಹಕ್ಕಿಜ್ವರ ಪತ್ತೆಯ ಕಾರ್ಯಾಚರಣೆಗಿಳಿದ ಪಶು ಇಲಾಖೆ ಸಿಬ್ಬಂದಿ ಮೈಸೂರು ಮೃಗಾಲಯ, ಕಾರಂಜಿ ಕೆರೆ, ಕುಕ್ಕರಳ್ಳಿಕೆರೆ, ಲಿಂಗಾಬುದಿ ಕೆರೆಗಳ ಸಮೀಪ ವಸಲೆ ಹಕ್ಕಿಗಳ ಹಿಕ್ಕೆ ಸ್ಯಾಂಪಲ್‌ ಪಡೆದು ಲ್ಯಾಬ್‌ಗೆ ರವಾನೆ ಮಾಡಲಾಗುತ್ತಿದೆ.

ಕಳೆದ ಮಾರ್ಚ್‌ನಲ್ಲಿ ಮೈಸೂರಿಗೆ ವಕ್ಕರಿಸಿದ್ದ ಹಕ್ಕಿಜ್ವರದಿಂದಾಗಿ , 5000 ಕೋಳಿ, ಪಕ್ಷಿಗಳನ್ನ ಕಲ್ಲಿಂಗ್ ಆಪರೇಷನ್ ಮೂಲಕ ಹತ್ಯೆ ಮಾಡಲಾಗಿತ್ತು. ಒಂದು ವಾರಗಳ ಕಾಲ ಮಾಂಸ ಮಾರಾಟವನ್ನು ಮೈಸೂರು ನಗರದಲ್ಲಿ ನಿಷೇಧ ಮಾಡಿದ್ದ ಜಿಲ್ಲಾಡಳಿತ ನಂತರ ಹಕ್ಕಿಜ್ವರವನ್ನು ನಿಯಂತ್ರಣ ಮಾಡಿದ್ದರು. ಇತ್ತ ಮೃಗಾಲಯದಲ್ಲಿ ನಿತ್ಯ ಪಕ್ಷಿಗಳ ಹಿಕ್ಕೆ ಸಂಗ್ರಹ ಮಾಡಿ ವಾರಕ್ಕೊಮ್ಮೆ ಬೋಪಾಲ್‌ನಲ್ಲಿ ಪ್ರಾಣಿ ಸಂಶೋಧನಾಲಯಕ್ಕೆ ರವಾನೆ ಮಾಡಲಾಗುತ್ತಿದೆ. ಪ್ರತಿ ಪ್ರಾಣಿ ಮನೆಗೆ ತೆರಳುವ ಮುನ್ನ ಸ್ಯಾನಿಟೈಜೆಷನ್ ಕಡ್ಡಾಯವಾಗಿದ್ದು, ಮೊದಲ ಬಾರಿ ಹಕ್ಕಿಜ್ವರ ಬಂದಾಗಿನಿಂದಲೂ ನಿರಂತರವಾಗಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿರುವ ಮೃಗಾಲಯ ಈಗಲೂ ಅದನ್ನ ಮುಂದುವರೆಸಿದೆ.

ಕೇರಳದ ಗಡಿ ಭಾಗದಲ್ಲಿ ವಾಹನಗಳ ತಪಾಸಣೆ ಹೆಚ್ಚಿದ್ದು ಈವರೆಗೂ ಹಕ್ಕಿಜ್ವರ ಮೈಸೂರಿನಲ್ಲಿ ಪತ್ತೆಯಾಗಿಲ್ಲ ಅಂತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಈವರೆಗೆ ಹಕ್ಕಿಜ್ವರ ಕಂಡುಬಂದಿಲ್ಲ ಎಂದು ಸ್ಪಷ್ಟನೆ ನೀಡಿರುವ ಅವರು, ಹಕ್ಕಿಜ್ವರದ ಪತ್ತೆಗಾಗಿ ಜಿಲ್ಲಾಡಳಿತ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ. ಅಕ್ಕಪಕ್ಕದ ರಾಜ್ಯದಲ್ಲಿ ಹಕ್ಕಿಜ್ವರ ಕಂಡುಬಂದಿದೆ. ಅಲ್ಲಿ ಕಲ್ಲಿಂಗ್ ಆಪರೇಷನ್ ಕೂಡ ನಡೆಯುತ್ತಿದೆ. ಕಳೆದ ವರ್ಷ ಮೈಸೂರಿನಲ್ಲಿ ಹಕ್ಕಿಜ್ವರದ ಹಿನ್ನೆಲೆಯಲ್ಲಿ ಕಲ್ಲಿಂಗ್ ಆಪರೇಷನ್ ನಡೆದಿತ್ತು. ಆಗ 5000 ಪಕ್ಷಿ ಹಾಗೂ ಕೋಳಿಗಳನ್ನು ಹತ್ಯೆ ಮಾಡಲಾಗಿತ್ತು. ಅದಕ್ಕಾಗಿ ಈ ಬಾರಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ವಹಿಸಿದ್ದೇವೆ. ಕೇರಳ ಹಾಗೂ ತಮಿಳುನಾಡು ಗಡಿಯಲ್ಲಿ ಪಕ್ಷಿ ಹಾಗೂ‌‌ ಕೋಳಿ ಸಾಗಾಟ ನಿಷೇಧ ಮಾಡಲಾಗಿದೆ ಆ ರಾಜ್ಯಗಳಿಂದ ಬರುವ ವಾಹನಗಳನ್ನ ಸ್ಯಾನಿಟೈಜೆಷನ್ ಮಾಡಲಾಗುತ್ತಿದೆ. ವಲಸೆ ಹಕ್ಕಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಎಲ್ಲೆಲ್ಲಿ ವಲಸೆ ಹಕ್ಕಿಗಳು ಬರುತ್ತವೆ. ಅಲ್ಲೆಲ್ಲ ಹಿಕ್ಕೆಗಳ ಸಂಗ್ರಹ ಮಾಡಿ ಲ್ಯಾಬ್‌ಗೆ ಕಳುಹಿಸಲಾಗಿದೆ. ಈವರೆಗೆ ಬಂದಿರುವ ಲ್ಯಾಬ್ ವರದಿಯಲ್ಲಿ ಹಕ್ಕಿಜ್ವರ ಪತ್ತೆಯಾಗಿಲ್ಲ. ಮೃಗಾಲಯಕ್ಕೆ ತಾತ್ಕಾಲಿಕ ಪ್ರವೇಶ ನಿರ್ಬಂಧ ಅಥವಾ ಇತರೆ ನಿರ್ಧಾರಗಳ ಬಗ್ಗೆ ತೀರ್ಮಾನಿಸಿಲ್ಲ. ಹಕ್ಕಿಜ್ವರ ಪತ್ತೆಯಾದರೆ ಮುಂದಿನ ಹಂತದ ನಿರ್ಧಾರ ಮಾಡುತ್ತೇವೆ ಅಂತ ಮಾಹಿತಿ ನೀಡಿದ್ದಾರೆ.

ಇದನ್ನು ಓದಿ: ಡಿಜಿಟಲ್‌ ಇಂಡಿಯಾದತ್ತ ಮಹತ್ವದ ಹೆಜ್ಜೆ; ವಿದ್ಯಾರ್ಥಿಗಳ ಶೈಕ್ಷಣಿಕ ದಾಖಲೆಗಳ ಭದ್ರತೆಗೆ ಡಿಜಿ ಲಾಕರ್‌!

ಕೇರಳದಲ್ಲಿ ಹಕ್ಕಿ ಜ್ವರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ- ಕೇರಳ ಗಡಿಯಲ್ಲಿ ತೀವ್ರ ನಿಗಾ ವಹಿಸಿರುವ ಜಿಲ್ಲಾಡಳಿತ ಕೇರಳದಿಂದ ಬರುವ ವಾಹನಗಳ ತಪಾಸಣೆ ಕಾರ್ಯಾಚರಣೆ ಆರಂಭಿಸಿದೆ. ಬಾವಲಿ ಚೆಕ್ ಪೋಸ್ಟ್‌ನಲ್ಲಿ ಪ್ರತಿ ವಾಹನ ತಪಾಸಣೆ ಮಾಡುತ್ತಿರುವ ಪೊಲೀಸರು  ಕೋಳಿ, ಕೋಳಿ ಮಾಂಸ ಸಾಗಣೆ ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಪೊಲೀಸರೊಂದಿಗೆ ಪಶು ಸಂಗೋಪನೆ ಇಲಾಖೆ ಸಿಬ್ಬಂದಿಯಿಂದಲೂ ತೀವ್ರ ನಿಗಾ ಇಟ್ಟಿದ್ದು, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆಯನ್ವಯ ಈ ಕಾರ್ಯಾಚರಣೆ ಆರಂಭವಾಗಿದೆ.

ಇನ್ನು ವಲಸೆ ಹಕ್ಕಿಗಳು ಬರುವ ಕಡೆ ಅರಣ್ಯ ಸಿಬ್ಬಂದಿ ಗಸ್ತಿಗೆ ಸೂಚಿಸಲಾಗಿದ್ದು, ಕೇಂದ್ರ ಸರ್ಕಾರದಿಂದಲೂ ಈ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ. ಅದರಂತೆ ಮೈಸೂರು ಭಾಗದಲ್ಲೂ ಮುಂಜಾಗ್ರತೆ ತೆಗೆದುಕೊಳ್ಳಲಾಗಿದ್ದು, ರಂಗನತಿಟ್ಟು, ಮೈಸೂರು ಮೃಗಾಲಯ ಹಾಗೂ ಕೆರೆಗಳಲ್ಲಿ ನಿಗಾ ಇಡಲಾಗುತ್ತಿದೆ. ಅದರಲ್ಲೂ ರಂಗನತಿಟ್ಟುಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಭಂಧ ಮಾಡಬೇಕಾ? ಇಲ್ಲವಾ? ಎಂಬುದರ ಬಗ್ಗೆ ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು. ಅಲ್ಲದೇ ಈ ಹಿಂದೆ ಎರಡು ಹಕ್ಕಿಗಳ ಮೃತ ಪಟ್ಟಿದ್ದವು. ಅವುಗಳನ್ನ ಲ್ಯಾಬ್ ಗೆ ಕಳುಹಿಸಲಾಗಿತ್ತು. ಲ್ಯಾಬ್ ನಲ್ಲಿ ನೆಗೆಟಿವ್ ವರದಿ ಬಂದಿದ್ದು ಯಾವುದೇ ಆತಂಕ ಇಲ್ಲ ಅಂದಿದ್ದಾರೆ ಮೈಸೂರು ಡಿಸಿಎಫ್ ಪ್ರಶಾಂತ್ ಕುಮಾರ್.
Published by:HR Ramesh
First published: