HOME » NEWS » District » BJP PRESIDENT NALIN KUMAR KATIL TALK WAR AGAINST CONGRESS PARTY AKP MAK

Nalin Kumar Katil| ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದೇ ರಾಜಕೀಯ; ನಳಿನ್ ಕುಮಾರ್ ಕಟೀಲ್ ತಿರುಗೇಟು

ಕೇಂದ್ರ ಸರಕಾರ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡರೆ ಅದಕ್ಕೂ ವಿರೋಧ, ಜನಪರ ವ್ಯವಸ್ಥೆಗಳನ್ನು ಕೈಗೊಂಡಲ್ಲಿ ಅದಕ್ಕೂ ವಿರೋಧ ಮಾಡುತ್ತಿರುವ ಕಾಂಗ್ರೆಸ್ ಇತ್ತೀಚೆಗೆ ಕೋವಿಡ್ ಲಸಿಕೆ ವಿಚಾರದಲ್ಲೂ ದೇಶದಾದ್ಯಂತ ವಿರೋಧ ಮಾಡಿತ್ತು ಎಂದು ಕಟೀಲ್ ಕಿಡಿಕಾರಿದ್ದಾರೆ.

news18-kannada
Updated:June 11, 2021, 3:35 PM IST
Nalin Kumar Katil| ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದೇ ರಾಜಕೀಯ; ನಳಿನ್ ಕುಮಾರ್ ಕಟೀಲ್ ತಿರುಗೇಟು
ನಳೀನ್ ಕುಮಾರ್ ಕಟೀಲ್
  • Share this:
ಪುತ್ತೂರು 0ಜೂನ್ 11); ಕಾಂಗ್ರೇಸ್ ಪಕ್ಷಕ್ಕೆ ವಿರೋಧ ಮಾಡುವುದು ಬಿಟ್ಟು, ಬೇರೆ ವಿಷಯವೇ ತಿಳಿದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಾಂಗ್ರೇಸ್ ಗೆ ತಿರುಗೇಟು ನೀಡಿದ್ದಾರೆ.  ಪುತ್ತೂರಿನಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪೆಟ್ರೋಲ್, ಡೀಸೇಲ್ ನ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೇಸ್ ಪಕ್ಷ ರಾಜ್ಯದಾದ್ಯಂತ ಪ್ರತಿಭಟನೆಯನ್ನು ನಡೆಸುತ್ತಿದ್ದು, ಈ ಪ್ರತಿಭಟನೆಯ ವಿರುದ್ಧ ನಳಿನ್ ಕುಮಾರ್ ಕಟೀಲ್ ಕಿಡಿ ಕಾರಿದ್ದಾರೆ. ದೇಶದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪಕ್ಷ ಎಲ್ಲವನ್ನೂ ವಿರೋಧ ಮಾಡಲು ಆರಂಭಿಸಿದೆ.

ಕೇಂದ್ರ ಸರಕಾರ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡರೆ ಅದಕ್ಕೂ ವಿರೋಧ, ಜನಪರ ವ್ಯವಸ್ಥೆಗಳನ್ನು ಕೈಗೊಂಡಲ್ಲಿ ಅದಕ್ಕೂ ವಿರೋಧ ಮಾಡುತ್ತಿರುವ ಕಾಂಗ್ರೇಸ್ ಇತ್ತೀಚೆಗೆ ಕೋವಿಡ್ ಲಸಿಕೆ ವಿಚಾರದಲ್ಲೂ ದೇಶದಾದ್ಯಂತ ವಿರೋಧ ಮಾಡಿತ್ತು. ಇದೀಗ ಪೆಟ್ರೋಲ್, ಡಿಸೇಲ್ ವಿಚಾರದಲ್ಲಿ ಕಾಂಗ್ರೇಸ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಅವರು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ ಅನಿವಾರ್ಯವಾಗಿ ದೇಶದಲ್ಲೂ ಪೆಟ್ರೋಲ್, ಡಿಸೇಲ್ ಬೆಲೆಗಳನ್ನು ಏರಿಸಬೇಕಾಗಿದೆ.

ಈ ಬೆಳವಣಿಗೆ ದೇಶದಲ್ಲಿ ಎಲ್ಲಾ ಪಕ್ಷಗಳ ಆಡಳಿತವಿದ್ದಾಗಲೂ ನಡೆದುಕೊಂಡು ಬಂದಿದೆ.  ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆ ಹಾಗೂ ಇಳಿಕೆಯ ಅಧಾರದ ಮೇಲೆ ದೇಶದಲ್ಲೂ ಪೆಟ್ರೋಲ್ ಹಾಗೂ ಡಿಸೇಲ್ ಬೆಲೆಯಲ್ಲಿ ಏರಿಕೆ, ಇಳಿಕೆ ಮಾಡುತ್ತಿದೆ.

ಕೊರೋನಾ ಮಹಾಮಾರಿಯ ಸಂಕಷ್ಟದ ದಿನಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯದಂತೆ ಹಾಗೂ ದೇಶದ ಜನತೆಯ ಹಿತದೃಷ್ಟಿಯಿಂದ ಕೇಂದ್ರ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಬೆಲೆ ಇಳಿಕೆಯ ಬಗ್ಗೆಯೂ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕೊರೋನಾ ಸಂಕಷ್ಟದಲ್ಲೂ ದೇಶದ ಎಲ್ಲಾ ಪ್ರಜೆಗಳಿಗೂ ಕೋವಿಡ್ ನಿಯಂತ್ರಣ ಲಸಿಕೆಯನ್ನು ಉಚಿತವಾಗಿ ನೀಡಲು ಕೇಂದ್ರ ಸರಕಾರ ವ್ಯವಸ್ಥೆ ಮಾಡಿದೆ.

ಇದನ್ನೂ ಓದಿ: BS Yediyurappa: ಮುಂದಿನ 2 ವರ್ಷ ನಾನೇ ಸಿಎಂ; ಎಲ್ಲಾ ವದಂತಿಗಳಿಗೆ ತೆರೆ ಎಳೆದ ಬಿ.ಎಸ್.ಯಡಿಯೂರಪ್ಪ

ಅಲ್ಲದೆ ಕೊರೋನಾ ಸಂಕಷ್ಟದ ಸಮಯದಲ್ಲಿ ಬಡ ಜನತೆ ಹಸಿವಿನಿಂದ ಬಳಲದಿರಲಿ ಎನ್ನುವ ಉದ್ಧೇಶದಿಂದ ಕೊರೋನಾದ ಮೊದಲ ಅಲೆ ಹಾಗೂ ಎರಡನೇ ಅಲೆಯ ಈ ಸಂದರ್ಭದಲ್ಲೂ ಬಡವರಿಗೆ ಉಚಿತ ಪಡಿತರ ವ್ಯವಸ್ಥೆಯನ್ನೂ ಕಲ್ಪಿಸಿದೆ. ಜೂನ್ 14 ರ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲ ಅನ್ ಲಾಕ್ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಾತ್ರ ಲಾಕ್ ಡೌನ್ ಮುಂದುವರಿಸುವ ಅನಿವಾರ್ಯತೆಯಿದೆ.

ಇದನ್ನೂ ಓದಿ: Karnataka Lockdown: ಕರ್ನಾಟಕದ 11 ಜಿಲ್ಲೆಗಳಲ್ಲಿ ಲಾಕ್​ಡೌನ್ ವಿಸ್ತರಣೆ; ಸೋಮವಾರದಿಂದ ಯಾವುದಕ್ಕೆ ಅವಕಾಶ? ಯಾವುದಕ್ಕೆ ನಿರ್ಬಂಧ?ಜಿಲ್ಲೆಯಲ್ಲಿ ಪ್ರತಿನಿತ್ಯ 500 ಕ್ಕೂ ಮಿಕ್ಕಿದ ಕೊರೊನಾ ಪಾಸಿಟೀವ್ ಪ್ರಕರಣಗಳು ವರದಿಯಾಗುತ್ತಿದ್ದು, ಈ ಸಂಖ್ಯೆ ಕಡಿಮೆಯಾಗದೆ ಜಿಲ್ಲೆಯಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭಿಸುವುದು ಕಷ್ಟಸಾಧ್ಯ ಎಂದ ಅವರು ಜಿಲ್ಲೆಯ ಜನತೆ ಕೊರೊನಾ ನಿಯಂತ್ರಣದಲ್ಲಿ ಸರಕಾರದೊಂದಿಗೆ ಕೈ ಜೋಡಿಸಬೇಕೆಂದು ಮನವಿ ಮಾಡಿದರು. ಅಗತ್ಯವಿದ್ದಲ್ಲಿ ಮಾತ್ರವೇ ಜನ ಮನೆಯಿಂದ ಹೊರಬರಬೇಕೆಂದು ಮನವಿ ಮಾಡಿದ ಅವರು ಕೋವಿಡ್ ವಿಚಾರದಲ್ಲಿ ಜಿಲ್ಲೆಯ ಜನ ಜಾಗರೂಕರಾಗಿರಬೇಕು ಎಂದಿದ್ದಾರೆ.
Youtube Video

ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ  ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು.
Published by: MAshok Kumar
First published: June 11, 2021, 3:34 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories