HOME » NEWS » District » BJP STATE MEETING WILL HELD DECEMBER 5TH IN BELAGAVI RHHSN CSB

ಡಿ.5ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ; ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ

ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ, ರಾಜ್ಯ ಸರ್ಕಾರದ ವಿರುದ್ಧ ಎಚ್ ವಿಶ್ವನಾಥ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು‌. ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ. ದೆಹಲಿ, ಬೆಂಗಳೂರು ವಕೀಲರ ಜೊತೆಗೆ ಚರ್ಚೆ ಮಾಡುತ್ತೇವೆ. ಎಚ್ ವಿಶ್ವನಾಥ ಏನು ಹೇಳಿದ್ದಾರೆ ಗೊತ್ತಿಲ್ಲ. ಎಲ್ಲಾ ಮಿತ್ರ ಮಂಡಳಿ ಸದಸ್ಯರಿಂದ ಮೇಲ್ಮನವಿ‌ ಸಲ್ಲಿಕೆ ಮಾಡುತ್ತೇವೆ ಎಂದರು.

news18-kannada
Updated:December 1, 2020, 5:19 PM IST
ಡಿ.5ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ; ಲೋಕಸಭಾ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಚರ್ಚೆ
ಸಾಂದರ್ಭಿಕ ಚಿತ್ರ
  • Share this:
ಬೆಳಗಾವಿ (ಡಿ.1) ಇದೇ ತಿಂಗಳ 5ರಂದು ಬೆಳಗಾವಿಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸಭೆಯಲ್ಲಿ ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಲೋಕಸಭೆ ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಚರ್ಚೆ ನಡೆಯಲಿದೆ. ಜತಗೆ ಡಿಸೆಂಬರ್ 4 ರಂದು ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಿಎಂ ಬಿ ಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಸೇರಿ ಅನೇಕರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸೂರಾನ್ ತಿಳಿಸಿದ್ದಾರೆ.

ಬೆಳಗಾವಿ ಗಾಂಧಿ ಭವನದಲ್ಲಿ ಇಂದು ಸಚಿವ ರಮೇಶ ಜಾರಕಿಹೊಳಿ,‌ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ,‌ ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ ಸೂರಾನ್ ಸುದ್ದಿಗೋಷ್ಠಿ ನಡೆಸಿದರು. ಡಿಸೆಂಬರ್ 5 ರಂದು ನಡೆಯಲಿರು ಕಾರ್ಯಕಾರಿಣಿಗೆ 583 ಜನ ಅಪೇಕ್ಷಿತರು ಇದ್ದಾರೆ. ಆದರೆ ಕೊರೋನಾ ಸೋಂಕಿನ ಕಾರಣದಿಂದ ಕೇವಲ 149 ಜನ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಇನ್ನೂಳಿದ 434 ಜನ ವೆಬಿನಾರ್ ಮೂಲಕ ಭಾಗವಹಿಸಲಿದ್ದಾರೆ.

ರಾಜ್ಯ ಉಸ್ತುವಾರಿಯಾಗಿ ನೇಮಕವಾದ ಅರುಣ ಸಿಂಗ್ ಮೊದಲ ಸಲ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಅರುಣ್ ಸಿಂಗ್ ನೇತೃತ್ವದಲ್ಲಿ ಡಿಸೆಂಬರ್ 4 ರಂದು ಸಂಜೆ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಂಪುಟ ವಿಸ್ತರಣೆ ಸೇರಿ ಅನೇಕ ಮಹತ್ವದ ವಿಚಾರಗಳು ಚರ್ಚೆಗೆ ಬರಲಿವೆ. ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಸಂಬಂಧ ಚರ್ಚೆಗಳು ನಡೆಯುತ್ತಿದ್ದು, ಸಭೆಯಲ್ಲಿ ಈ ಬಗ್ಗೆ ವಿಷಯ ಪ್ರಸ್ತಾಪ ಆಗೋ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನು ಓದಿ: ಎಚ್​ಐವಿ ಸೋಂಕಿತರಿಗೆ 5 ಲಕ್ಷ ರೂಪಾಯಿವರೆಗೆ ಉಚಿತ ಔಷಧಿ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಗ್ರಾಮ ಪಂಚಾಯತಿ ಚುನಾವಣೆ, ಮುಂಬರುವ ಎರಡು ವಿಧಾನಸಭೆ ಕ್ಷೇತ್ರದ ಉಪಚುನಾವಣೆ, ಒಂದು ಲೋಕಸಭಾ ಕ್ಷೇತ್ರದ ಉಪಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ. ರಾಜ್ಯದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಲು ಅಭ್ಯರ್ಥಿಗಳನ್ನು ಗೆಲ್ಲಿಸಲು ಬಿಜೆಪಿ ಸಿದ್ಧತೆ ಮಾಡಿಕೊಂಡಿದೆ. ಬೂತ್ ಮಟ್ಟದಲ್ಲಿ 5 ಜನರ ಒಳಗೊಂಡ ಪಂಚರತ್ನ ಸಮಿತಿ ರಚನೆ ಮಾಡಿದೆ. ಈ ಮೂಲಕ ಪಕ್ಷದ ಸಂಘಟನೆಗೆ ಆದ್ಯತೆ ನೀಡಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ್ ಸೂರಾನಾ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ, ರಾಜ್ಯ ಸರ್ಕಾರದ ವಿರುದ್ಧ ಎಚ್ ವಿಶ್ವನಾಥ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದರು‌. ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ. ದೆಹಲಿ, ಬೆಂಗಳೂರು ವಕೀಲರ ಜೊತೆಗೆ ಚರ್ಚೆ ಮಾಡುತ್ತೇವೆ. ಎಚ್ ವಿಶ್ವನಾಥ ಏನು ಹೇಳಿದ್ದಾರೆ ಗೊತ್ತಿಲ್ಲ. ಎಲ್ಲಾ ಮಿತ್ರ ಮಂಡಳಿ ಸದಸ್ಯರಿಂದ ಮೇಲ್ಮನವಿ‌ ಸಲ್ಲಿಕೆ ಮಾಡುತ್ತೇವೆ ಎಂದರು.
Published by: HR Ramesh
First published: December 1, 2020, 5:19 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories