ತುಮಕೂರು (ಮಾ.19): ಪಾವಗಡದ (Pavagada) ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ (Bus Palti) ಈವರೆಗೆ ಐವರು ಮೃತಪಟ್ಟಿದ್ದಾರೆ (Death). 35 ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅಪಘಾತ ಸ್ಥಳಕ್ಕೆ ಸಾರಿಗೆ ಸಚಿವ ಶ್ರೀರಾಮುಲು (SriRamulu) ಭೇಟಿ ನೀಡಿದ್ದು, ಸಚಿವರ ಎದುರು ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ತೇವೆ. ಬಸ್ ಪಲ್ಟಿಯಾದ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯುತ್ತೇನೆ ಎಂದು ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿಕೆ ನೀಡಿದ್ದಾರೆ. ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಸಾರಿಗೆ ಸಚಿವ ಶ್ರೀರಾಮುಲು, ಅಪಘಾತದಲ್ಲಿ ಸಾವನ್ನಪ್ಪಿದ್ದವರ ಕುಟುಂಬಕ್ಕೆ 5 ಲಕ್ಷ ಪರಿಹಾರ (Compensation) ಘೋಷಣೆ ಮಾಡಿದ್ದಾರೆ.
ಅತಿ ವೇಗವೇ ಅಪಘಾತಕ್ಕೆ ಕಾರಣ
ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಐವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದಾರೆ ಎಂದು ತುಮಕೂರು ಎಸ್ಪಿ ರಾಹುಲ್ಕುಮಾರ್ ಹೇಳಿಕೆ ನೀಡಿದ್ದಾರೆ. ಇಬ್ಬರು ವಿದ್ಯಾರ್ಥಿಗಳು, ಮೂವರು ಇತರೆ ಪ್ರಯಾಣಿಕರ ಸಾವನ್ನಪ್ಪಿದ್ದಾರೆ. ಬಸ್ನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಅತಿ ವೇಗವೇ ಘಟನೆಗೆ ಕಾರಣವೆಂಬುದು ಪ್ರಾಥಮಿಕ ಮಾಹಿತಿ. ತನಿಖೆಯ ಬಳಿಕ ಪೂರ್ಣ ಮಾಹಿತಿ ಸಿಗಲಿದೆ ಎಂದು ತುಮಕೂರು SP ಹೇಳಿದ್ದಾರೆ.
ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ
ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಪಲ್ಟಿ ದುರಂತ ಪ್ರಕರಣದ ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ. ಸಾರಿಗೆ ಇಲಾಖೆಯ ಸಚಿವ ಬಿ. ಶ್ರೀರಾಮುಲು ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ₹1 ಲಕ್ಷ ಪರಿಹಾರ ಘೋಷಿಸಿದ್ದಾರೆ.
ಇದನ್ನೂ ಓದಿ: Tumakuru Accident: ಇದು ಸಾರಿಗೆ ಇಲಾಖೆಯ ನಿರ್ಲಕ್ಷ್ಯದ ಪರಮಾವಧಿ: HDK ಆಕ್ರೋಶ
ಖಾಸಗಿ ಬಸ್ಗಳ ಪರವಾನಗಿ ರದ್ದು
ಬಳ್ಳಾರಿಯಲ್ಲಿ ಅಪಘಾತದ ಬಗ್ಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿಕೆ ನೀಡಿದ್ದಾರೆ. ಅಪಘಾತದಲ್ಲಿ 5 ಜನ ಮೃತಪಟ್ಟು, 25 ಜನರಿಗೆ ಗಾಯವಾಗಿದೆ. ಪರವಾನಗಿಯನ್ನ ರದ್ದು ಮಾಡಲು ಸೂಚನೆ ನೀಡಿದ್ದೇನೆ. ಪಾವಗಡದಲ್ಲಿ ಖಾಸಗಿ ಬಸ್ಗಳ ಪರವಾನಗಿ ರದ್ದು ಮಾಡುವೆ. ಪಾವಗಡದಲ್ಲಿ ಸಾರಿಗೆ ಬಸ್ ಓಡಿಸಲು ಕ್ರಮ ಕೈಗೊಳ್ಳುತ್ತೇವೆ. ಆರ್ಟಿಒ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಅಮಾನತು ಮಾಡುತ್ತೇವೆ. ಮೃತರಿಗೆ ಪರಿಹಾರ ಕೊಡುವ ಕುರಿತು ಸಿಎಂ ಜೊತೆ ಚರ್ಚೆ ಮಾಡಲಿದ್ದೇವೆ.
ಇದನ್ನೂ ಓದಿ: Koppala: ಅಪ್ಪು ಬ್ಯಾನರ್ ಕಿತ್ತು ಹಾಕಿದ್ದಕ್ಕೆ ಅಭಿಮಾನಿಗಳ ಆಕ್ರೋಶ; ಇಬ್ಬರ ಬಂಧನ, ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ
ಓವರ್ಲೋಡ್ನಿಂದ ಅಪಘಾತ ಸಂಭವಿಸಿದೆ. ಹೆಚ್ಚಿನ ಪ್ರಯಾಣಿಕರನ್ನು ಬಸ್ನಲ್ಲಿ ಹತ್ತಿಸಿಕೊಂಡಿದ್ದು ಹಾಗೂ ವೇಗವಾಗಿ ಚಾಲನೆ ಮಾಡಿದ್ದು ಅಪಘಾತಕ್ಕೆ ಕಾರಣವಾಗಿದೆ. ಮೇಲ್ನೋಟಕ್ಕೆ ಚಾಲಕನ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಸ್ಥಳಕ್ಕೆ ತೆರಳುವೆ ಎಂದು ಬಳ್ಳಾರಿಯಲ್ಲಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ